Tuesday, 17 November 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ಶಿವಮೊಗ್ಗ

ಭದ್ರೆ ತುಂಬಿದೆ ರೈತರ ಜೀವನ ಸುಭದ್ರವಾಗಿದೆ ಡಿಸಿಎಂ ಡಿಕೆ ಶಿವಕುಮಾರ್ ..!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 21 ವೀಕ್ಷಣೆಗಳು

 

ತುಂಬಿದ ಭದ್ರಾ ಜಲಾಯಶ ರೈತರ ಜೀವನಕ್ಕೆ ಸುಭದ್ರತೆ ನೀಡಿದ್ದು, 5 ಜಿಲ್ಲೆಗಳ ರೈತರಿಗೆ ಇದು ಜೀವನಾಡಿ ಆಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೃಹತ್ ಮತ್ತು ಮಧ್ಯಮ ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಡಿ.ಕೆ.ಶಿವಕುಮಾರ್ ಹೇಳಿದರು.

ಕರ್ನಾಟಕ ಸರ್ಕಾರ ಜಲಸಂಪನ್ಮೂಲ ಇಲಾಖೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ಬಿ.ಆರ್.ಪ್ರಾಜೆಕ್ಟ್ನಲ್ಲಿ ಭದ್ರಾ ಜಲಾಶಯ ಬಾಗಿನ ಸಮರ್ಪಣೆ ಹಾಗೂ ನೂತನ ಪ್ರವಾಸಿ ಮಂದಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಭದ್ರಾ ಜಲಾಶಯ ತುಂಬಿರುವುದರಿAದ ಬಯಲು ಸೀಮೆಯ ರೈತರಿಗೆ ಅನುಕೂಲವಾಗಿದೆ. 60 ವರ್ಷಗಳ ಹಿಂದೆ ರೈತರ ಹಿತದೃಷ್ಟಿಯಿಂದ ಸರ್ ಎಂ. ವಿಶ್ವೇಶ್ವರಯ್ಯವರು ಈ ಜಲಾಶಯವನ್ನು ಸ್ಥಾಪನೆ ಮಾಡಿದ್ದು, 1945 ಜಲಾಶಯ ನಿರ್ಮಾಣ ಮಾಡವ ಬಗ್ಗೆ ಸಮೀಕ್ಷೆಯ ನಡೆಸಿ, 1965 ರಲ್ಲಿ ಅದನ್ನು ಕಾರ್ಯ ರೂಪಕ್ಕೆ ತಂದರು ಎಂದು ಹೇಳಿದರು.

ರೈತನಿಗೆ ಸರ್ಕಾರಿ ನೌಕರರಂತೆ ಸಂಬಳ, ಪಿಂಚಣಿ, ನಿವೃತ್ತಿ ಯಾವುದು ಇಲ್ಲ. ಇಂತಹ ರೈತರನ್ನು ಬದುಕಿಸುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ. ಈಗಾಗಲೇ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರ ಕೋರಿಕೆಯಂತೆ ನಾಲೆಗಳನ್ನು ಅಭಿವೃದ್ದಿ ಪಡಿಸಲು 100 ಕೋಟಿ ಅನುದಾನ ಈಗಾಗಲೇ ನೀಡಲಾಗಿದ್ದು, ಈ ಮೂಲಕ ರಾಜ್ಯದ ಎಲ್ಲಾ ಶಾಸಕರು ಜನರ ಹಾಗೂ ರೈತರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಅವಕಾಶ ಸಿಕ್ಕಾಗ ಪುಣ್ಯ ಕೆಲಸ ಮಾಬೇಕಾಗುತ್ತದೆ. ಅದರಂತೆ ಈಗಾಗಲೇ ನಮ್ಮ ಸರ್ಕಾರದ ನೀರಾವರಿ ಯೋಜನೆಗೆ 11 ಸಾವಿರ ಕೋಟಿ ಖರ್ಚು ಮಾಡಿದ್ದು, ಚನ್ನಗಿರಿ ವ್ಯಾಪ್ತಿಯ ನೀರಾವರಿಗೆ 362 ಕೋಟಿ ಕೊಟ್ಟಿದ್ದೇವೆ. ಹಾಗೂ ಸರ್ವರಿಗೂ ಸಮಪಾಲು-ಸಮಬಾಳು ಆಶಯದಂತೆ ರಾಜ್ಯ ಜನರ ಏಳಿಗಾಗಿ ಸರ್ಕಾರದಿಂದ 5 ಗ್ಯಾರಂಟಿ ಯೋಜನೆಯನ್ನು ಕೂಡ ಜಾರಿ ಮಾಡಿದ್ದೇವೆ ಎಂದರು.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5500 ಕೋಟಿ ಕೊಡುವುದಾಗಿ ಹೇಳಿದ್ರು. ಇದೀಗ ರಾಜ್ಯ ಸರ್ಕಾರ 10,000 ಕೋಟಿ ಖರ್ಚು ಮಾಡಿದೆ. ಆಲಮಟ್ಟಿ ಜಲಾಶಯ 524 ಅಡಿಗೆ ಏರಿಸಲು ಗೆಜೆಟ್ ನೋಟಿಫಿಕೇಶನ್ ಆಗಿಬೇಕಿದೆ. ಆದರೆ ಅದರಲ್ಲೂ ರಾಜಕೀಯ ಮಾಡಲಾಗುತ್ತಿದೆ ಎಂದರು.

ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ ಮಾತನಾಡಿ, ಭದ್ರಾ ಜಲಾಶಯದಿಂದ ಮೂರು ಜಿಲ್ಲೆಗೆ ನೀರನ್ನು ಒದಗಿಸುವ ಕೆಲಸ ಮಾಡಿಲಾಗಿದ್ದು, ಆ ಭಾಗದ ಜನರಿಗೆ. ಭದ್ರಾ ಜಲಾಶಯ ಜೀವನಾಡಿ ಆಗಿದೆ. ಎಸ್. ಎಂ. ಕೃಷ್ಣ ಅವರು ಮುಖ್ಯ ಮಂತ್ರಿಯಾಗಿದ್ದಾಗ ಈ ಯೋಜನೆಗಾಗಿ 300 ಕೋಟಿ ಬಿಡುಗಡೆ ಮಾಡಲಾಗಿತ್ತು. ಇದರಿಂದ ಹೊಸಪೇಟೆಯ ಒಂದು ತಾಲ್ಲೂಕು, ದಾವಣಗೆರೆಯ 3 ತಾಲ್ಲೂಕಿಗೆ ಅನುಕೂಲವಾಯಿತು ಹಾಗೂ ಭದ್ರ ಬಲದಂಡೆಯಿAದ ಭದ್ರಾವತಿ, ಮಾಯಕೊಂಡ, ಹರಪ್ಪನಹಳ್ಳಿ, ದಾವಣಗೆರೆ ತಾಲೂಕುಗಳಿಗೆ 1.46 ಲಕ್ಷ ಕ್ಯೂಸೆಕ್ಸ್ ನೀರು ಹರಿಯುತ್ತಿದೆ ಎಂದರು.

 

ಎಲ್ಲರಿಗೂ ಕುಡಿಯುವ ನೀರನ್ನು ಕೊಡಬೇಕು. ಇದರ ಬಗ್ಗೆ ಒಂದು ಸೂಕ್ತವಾದ ನಿರ್ಧಾರವನ್ನು ಕೂಡ ಮಾಡಲಾಗಿದೆ. ಆ ನಿಟ್ಟಿನಲ್ಲಿ ಭದ್ರಾ ಜಲಾಶಯದ ನೀರಾವರಿ ಯೋಜನೆಗೆ ಹೆಚ್ಚು ಅನುದಾನ ಕೊಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಶಾಸಕರೆಲ್ಲರೂ ಸೇರಿ ಒಗ್ಗಟ್ಟಿನಿಂದ ರೈತರಿಗೆ ನೀರನ್ನು ತಲುಪಿಸುವ ಕೆಲಸ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದಂತೆ ಇನ್ನಷ್ಟು ನೀರಾವರಿ ಅಭಿವೃದ್ಧಿಗಾಗಿ ಅನುದಾನವನ್ನು ಸರ್ಕಾರ ಬಳಿ ಕೇಳಿದ್ದೇವೆ ಅದನ್ನು ಪೂರೈಸುವ ಭರವಸೆಯಿದೆ ಎಂದು ಎಸ್. ಎಸ್. ಮಲ್ಲಿಕಾರ್ಜುನ ತಿಳಿಸಿದರು.

 

ಕಾರ್ಯಕ್ರಮದಲ್ಲಿ ಭದ್ರಾವತಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ದಾವಣಗೆರೆ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್, ತರಿಕೇರೆ ಶಾಸಕ ಬಿ.ಹೆಚ್.ಶ್ರೀನಿವಾಸ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಹರಪ್ಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಹೊನ್ನಳ್ಳಿ ಶಾಸಕ ಶಾಂತನಗೌಡ ಡಿ.ಜಿ, ಗುಬ್ಬಿ ಶಾಸಕ ಶ್ರೀನಿವಾಸ, ವಿಧಾನ ಪರಿಷತ್ ಶಾಸಕರುಗಳಾದ ಬಲ್ಕೀಶ್ ಬಾನು, ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಅಲೆಮಾರಿಗಳ ಅಭಿವೃದ್ದಿ ನಿಗಮ ಅಧ್ಯಕ್ಷೆ ಪಲ್ಲವಿ, ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್, ವಿವಿಧ ನಿಗಮ, ಮಂಡಳಿ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು ಪೊಲೀಸ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

——————————————————

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.