Tuesday, 17 November 2026 — NEWS WARRIORS
BREAKING NEWS
ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..! ಶಿವಮೊಗ್ಗ Shivamogga :10 ಸಾವಿರ ಸಾಲ ₹35 ಸಾವಿರವಾಗಿದ್ದು ಹೇಗೆ? ಮೂಲ ಬಾರ್‌ನಲ್ಲಿ ನಡೆದಿದ್ದೇನು? ಸಾವಿನ ಸುತ್ತ ಅನುಮಾನದ ಹುತ್ತ..! ರಾಜ್ಯ Shivamogga :ನಾಲ್ಕು ಸದನಗಳ ಅನುಭವ ಹೊಂದಿರುವ ಆಯನೂರು ಮಂಜುನಾಥ್‌ಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ಸಿಕ್ಕಿದೆಯೇ..?! ಶಿವಮೊಗ್ಗ Shivamogga : ಸಾಗರ ಉಪವಿಭಾಗದ ಆಡಳಿತಕ್ಕೆ ಅನುಭವಿ ಅಧಿಕಾರಿ ಜಿ.ಹೆಚ್. ಸತ್ಯನಾರಾಯಣ್ ನೇಮಕ..! ಶಿವಮೊಗ್ಗ ನೆಹರು ಕ್ರೀಡಾಂಗಣದ ಅಂದಗೆಡಿಸುತ್ತಿದ್ದ ಫ್ಲೆಕ್ಸ್‌ಗಳಿಗೆ ಬ್ರೇಕ್..! ಜಿಲ್ಲಾಧಿಕಾರಿಗಳ ಖಡಕ್ ಆದೇಶಕ್ಕೆ ಸಾರ್ವಜನಿಕರ ಮೆಚ್ಚುಗೆ..! ಶಿವಮೊಗ್ಗ Big news: ಜಿಲ್ಲಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಲಕ್ಷ ಲಕ್ಷ ಎತ್ತುವಳಿ..! ವರ್ಗಾವಣೆಗೂ ಮುನ್ನ ಡಿಸಿ ಕವಳಿಕಟ್ಟಿ ನೀಡಿದ ಆದೇಶವೇನು..?! ವರ್ಗಾವಣೆಗೂ ಈ ಪ್ರಕರಣಕ್ಕೂ ಸಂಬಂಧವಿದೆಯೇ..?!Big news: Lakhs of rupees extorted in the names of the Deputy Commissioner and the Additional Deputy Commissioner! What order did DC Kavalikatti issue just before his transfer?! Is there a connection between his transfer and this incident..?! ಶಿವಮೊಗ್ಗ Shivamogga breaking :ದಸರಾ ಮೆರವಣಿಗೆಯಲ್ಲಿ ಸೋಮಣ್ಣ ಆನೆ ರಂಪಾಟ: ಅನಾಹುತ ನಿವಾರಣೆಗೆ ದೇವರ ಮೊರೆ ಹೋದ ಅರ್ಚಕರು..! ರಾಜ್ಯ Big news :2011ರ ಕೆಎಎಸ್ ನೇಮಕಾತಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್! 2022ರ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಅಸಂವಿಧಾನಿಕ; ನೇಮಕಗೊಂಡ ಅಧಿಕಾರಿಗಳ ಸೇವೆ ಅಂತ್ಯಕ್ಕೆ ಆದೇಶ! ರಾಜ್ಯ Big news: ರಾಜ್ಯ ಆರೋಗ್ಯ ಇಲಾಖೆಗೆ ಭರ್ಜರಿ ಸರ್ಜರಿ – ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲೂ ಮಹತ್ವದ ಬದಲಾವಣೆ..!
ರಾಜ್ಯ

ಶಿವಮೊಗ್ಗ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ ಜಿಲ್ಲಾಧಿಕಾರಿ ಡಾ/ ಆರ್ ಸೆಲ್ವಮಣಿ..!! ಸೇರ್ಪಡೆಗೆ ಅವಕಾಶವಿದೆ ಎಂದ ಅಪಾರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ..!! ಒಟ್ಟು ಮತದಾರರ ಸಂಖ್ಯೆ 14,41,833..!!

EDITOR NEWS WARRIORS
ವರದಿ: EDITOR NEWS WARRIORS ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 14 ವೀಕ್ಷಣೆಗಳು

ಶಿವಮೊಗ್ಗ, : ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 7,27,310 ಮಹಿಳಾ ಮತದಾರರು ಹಾಗೂ 7,14,490 ಪುರುಷ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು.

ಅವರು ಗುರುವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ 2023ರ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಅಂತಿಮ ಮತದಾರರ ಪಟ್ಟಿಯಲ್ಲಿ ಮತದಾರರ ಲಿಂಗಾನುಪಾತ ಉತ್ತಮಗೊಂಡಿದ್ದು, 1ಸಾವಿರ ಪುರುಷ ಮತದಾರರಿಗೆ 1018 ಮಹಿಳಾ ಮತದಾರರು ಇದ್ದಾರೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ 22185 ಯುವ ಮತದಾರರ ಸೇರ್ಪಡೆಯಾಗಿದ್ದು, ಇವರಲ್ಲಿ 11760ಪುರುಷ ಹಾಗೂ 10419 ಮಹಿಳಾ ಮತದಾರರು ಇದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 1775 ಮತಗಟ್ಟೆಗಳು ಇವೆ ಎಂದು ಅವರು ಹೇಳಿದರು.

ವಿಧಾನಸಭಾ ಕ್ಷೇತ್ರವಾರು ವಿವರ: ಮತದಾರರ ಅಂತಿಮ ಪಟ್ಟಿಯಲ್ಲಿ ಶಿವಮೊಗ್ಗ ಗ್ರಾಮಾಂತರದಲ್ಲಿ 103534 ಪುರುಷ, 104525 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 208062 ಮತದಾರರು ಇದ್ದಾರೆ. ಭದ್ರಾವತಿ ಕ್ಷೇತ್ರದಲ್ಲಿ 101058 ಪುರುಷ, 106546 ಮಹಿಳಾ, ಐವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 106546 ಮತದಾರರು ಇದ್ದಾರೆ. ಶಿವಮೊಗ್ಗ ನಗರ ಕ್ಷೇತ್ರದಲ್ಲಿ 123770 ಪುರುಷ, 129204 ಮಹಿಳಾ, 15 ತೃತೀಯ ಲಿಂಗಿ ಸೇರಿದಂತೆ 252989 ಮತದಾರರು ಇದ್ದಾರೆ. ತೀರ್ಥಹಳ್ಳಿ ಕ್ಷೇತ್ರದಲ್ಲಿ 91376 ಪುರುಷ, 93475 ಮಹಿಳಾ, ಮೂವರು ತೃತೀಯ ಲಿಂಗಿ ಸೇರಿದಂತೆ 184854 ಮತದಾರರು ಇದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ 98281 ಪುರುಷ, 97086 ಮಹಿಳಾ, ನಾಲ್ವರು ತೃತೀಯ ಲಿಂಗಿ ಸೇರಿದಂತೆ ಒಟ್ಟು 195371 ಮತದಾರರು ಇದ್ದಾರೆ. ಸೊರಬ ಕ್ಷೇತ್ರದಲ್ಲಿ 97070 ಪುರುಷ, 101326 ಮಹಿಳಾ, ಇಬ್ಬರು ತೃತೀಯ ಲಿಂಗಿ ಸೇರಿದಂತೆ ಒಟ್ಟು 192220 ಮತದಾರರು ಇದ್ದಾರೆ. ಸಾಗರ ಕ್ಷೇತ್ರದಲ್ಲಿ 99401 ಪುರುಷ, 101326 ಮಹಿಳಾ, ಒಂದು ತೃತೀಯ ಲಿಂಗಿ ಸೇರಿದಂತೆ ಒಟ್ಟು 200728 ಮತದಾರರು ಇದ್ದಾರೆ. ಲಿಂಗಾನುಪಾತ ಅತಿ ಹೆಚ್ಚು ಭದ್ರಾವತಿ ಕ್ಷೇತ್ರದಲ್ಲಿ 1054 ಇದ್ದು, ಅತಿ ಕಡಿಮೆ ಸೊರಬ ಕ್ಷೇತ್ರದಲ್ಲಿ 980 ಇದೆ ಎಂದರು.

ಕಳೆದ ನವೆಂಬರ್ 9ರಂದು ಪ್ರಕಟಿಸಲಾಗಿದ್ದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 14,34,138 ಮತದಾರರ ಹೆಸರು ಪ್ರಕಟಿಸಲಾಗಿತ್ತು. ಅಂತಿಮ ಪಟ್ಟಿಯಲ್ಲಿ 40767 ಮತದಾರರನ್ನು ಹೊಸದಾಗಿ ಸೇರ್ಪಡೆಗೊಳಿಸಲಾಗಿದ್ದು, 33072 ಮತದಾರರ ಹೆಸರು ಕೈ ಬಿಡಲಾಗಿದೆ. 11651 ತಿದ್ದುಪಡಿ ಮಾಡಲಾಗಿದೆ. ತೆಗೆದು ಹಾಕಿರುವುದಕ್ಕೆ 11873 ಮರಣ, 17064 ಸ್ಥಳಾಂತರ, 1058 ಪುನರಾವರ್ತನೆ ಮತ್ತು 3077 ವಲಸೆ ಕಾರಣವಾಗಿದೆ. ಕರಡು ಪಟ್ಟಿಯಲ್ಲಿ ಲಿಂಗಾನುಪಾತ 1ಸಾವಿರ ಪುರುಷ ಮತದಾರರಿಗೆ 1014 ಮಹಿಳಾ ಮತದಾರರು ಇದ್ದರು ಎಂದು ಅವರು ಮಾಹಿತಿ ನೀಡಿದರು.

ಸೇರ್ಪಡೆಗೆ ಅವಕಾಶ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣಾ ಸಂಬAಧದಲ್ಲಿ ಅರ್ಹ ಮತದಾರರು ಮತದಾರರ ಪಟ್ಟಿಗೆ ಚುನಾವಣಾ ಆಯೋಗ ನಿಗದಿಪಡಿಸುವ ದಿನಾಂಕದವರೆಗೂ ಹೆಸರು ಸೇರಿಸಲು ಅವಕಾಶವಿರುತ್ತದೆ. ನಮೂನೆ -6 ಸೇರ್ಪಡೆ, ನಮೂನೆ-6ಎ ಅನಿವಾಸಿ ಭಾರತೀಯರು ಹೆಸರು ನೊಂದಾಯಿಸಿಕೊಳ್ಳಲು, 6-ಬಿ ಮತದಾರರ ಪಟ್ಟಿಯೊಂದಿಗೆ ಆಧಾರ್ ಜೋಡಣೆ ಮಾಡಿಕೊಳ್ಳಲು, ನಮೂನೆ-7 ತೆಗೆದು ಹಾಕಲು, ನಮೂನೆ-8ರಲ್ಲಿ ತಿದ್ದುಪಡಿ, ವರ್ಗಾವಣೆ, ಬದಲಿ ಎಪಿಕ್‌ಗೆ ಮನವಿ ಮತ್ತು ಅಂಗವೈಕಲ್ಯ ಹೊಂದಿರುವ ಮತದಾರರು ವಿವರ ದಾಖಲಿಸಲು ಅವಕಾಶವಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು https://ceo.karnataka.gov.in ನಲ್ಲಿ ಲಭ್ಯವಿದ್ದು, ಮತದಾರರು ತಮ್ಮ ಹೆಸರನ್ನು ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು….

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 2011 ಲೇಖನಗಳು

EDITOR NEWS WARRIORS

EDITOR NEWS WARRIORS ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment