ಶಿವಮೊಗ್ಗ ಸೆಂಟ್ರಲ್ ಜೈಲ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಖೈದಿ ಸಾವನ್ನಪ್ಪಿದ್ದು.
ಅನಾರೋಗ್ಯದ ಹಿನ್ನೆಲೆಯಲ್ಲಿ ಪದೇ ಪದೇ ಜಿಲ್ಲೆಯ ಮೇಗನ್ ಆಸ್ಪತ್ರೆಗೆ ದಾಖಲಾಗುತ್ತಿದ್ದ ಚಿಕ್ಕಮಂಗಳೂರು ಮೂಲದ ಬಾಬು ಕೆ ಪಿ ಆಲಿಯಾಸ್ ಸಜಿ ಬಾಬು ಮೃತ ವ್ಯಕ್ತಿ.
ಪ್ರಕರಣವೊಂದರ ಸಂಬಂಧ ಚಿಕ್ಕಮಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಬುಗೆ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು. ಕಳೆದ ಆಗಸ್ಟ್ 22ರಂದು ಬಾಬುನನ್ನು ಚಿಕ್ಕಮಗಳೂರು ಜಿಲ್ಲಾ ಕಾರಾಗೃಹದಿಂದ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಚಿಕ್ಕಮಗಳೂರು ಕಾರಾಗೃಹದಲ್ಲಿ ಇದ್ದಾಗಲೇ ಬಾಬು ಎಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು ನ.10ರಂದು ಬೆಳಗ್ಗೆ 5 ಗಂಟೆಗೆ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ 5.40ರ ಹೊತ್ತಿಗೆ ಕೊನೆಯುಸಿರೆಳೆದಿದ್ದಾನೆ.