42

ಬೆಂಗಳೂರು: ರಾಜ್ಯದಲ್ಲಿರುವ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಇದೇ ತಿಂಗಳ 16 ರಂದು ಮಹತ್ವದ ಸಭೆ ಕರೆದಿದ್ದು. ಬಹು ವರ್ಷಗಳ ಕುರುಬ ಸಮುದಾಯದ ಬೇಡಿಕೆ ಈಡೇರಿಕೆ ಆಗುವ ಸಾಧ್ಯತೆ ಇದೆ.
ಈ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಸಭಾ ಸೂಚನ ಪತ್ರವನ್ನು ಹೊರಡಿಸಿದ್ದು, ಸರ್ಕಾರದ ಕಾರ್ಯದರ್ಶಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಮಂಗಳವಾರ ಮಧ್ಯಾಹ್ನ 3.00 ಗಂಟೆಗೆ ಕೊಠಡಿ ಸಂಖ್ಯೆ:331 ರಲ್ಲಿ 3ನೇ ಮಹಡಿ, ಬಹುಮಹಡಿಗಳ ಕಟ್ಟಡ ಇಲ್ಲಿ ಈ ವಿಷಯಗಳ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ.

