
ಉಡುಪಿ>ಅಕ್ಟೋಬರ್>10: ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರು ಹಳೆಯ ದಿನಗಳನ್ನು ನೆನಪಿಸಿಕೊಳ್ಳುತ್ತಾ ಹಿಂದೆ ಹೋರಾಟದ ಸಂದರ್ಭದಲ್ಲಿ ನನ್ನ ಬೆನ್ನು ಮುರಿಯುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದರು. ಇವತ್ತು ಅವರು ಸೆಲ್ಯೂಟ್ ಹೊಡೆಯುತ್ತಾರೆ. ಇದೇ ಪ್ರಜಾಪ್ರಭುತ್ವದ ಸೌಂದರ್ಯ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ಹಳೆಯ ಹೋರಾಟದ ದಿನಗಳನ್ನು ನೆನಪಿಸಿಕೊಂಡು ಗೃಹ ಸಚಿವರು:
ನನಗೆ ಅರಣ್ಯ ಅಥವಾ ಕಂದಾಯ ಹುದ್ದೆ ಸಿಗಬಹುದು ಎಂದು ನಿರೀಕ್ಷಿಸಿದ್ದೆ. ಆದರೆ ಮಹತ್ವದ ಗೃಹ ಖಾತೆ ಸಿಕ್ಕಿದೆ. ಈ ಹಿಂದೆ ಹಲವಾರು ಜನಪರವಾದ ಹೋರಾಟಗಳಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಹಲವಾರು ಘಟನೆಗಳು ನನಗಿನ್ನೂ ಹಚ್ಚ ಹಸಿರಾಗಿದೆ.
ಪ್ರತಿಭಟನಾಕಾರರ ಮೇಲೆ ಪೊಲೀಸರು ತಮ್ಮ ಕೈಯಲ್ಲಿದ್ದ ಲಾಠಿಯನ್ನು ಬೀಸಿ ಚದುರಿಸುವ ಸಂದರ್ಭದಲ್ಲಿ ನನ್ನ ಬೆನ್ನು ಮೂಳೆ ಮುರಿಯುಂತೆ ಏಟಾಗಿತ್ತು. ಆದರೆ ಕಾಲ ಬದಲಾಗಿ ವ್ಯವಸ್ಥೆಯ ಹೊಸ ಅನುಭವ ಇದನ್ನು ನೆನಪಿಸುತ್ತಿದೆ ಎಂದು ತಮ್ಮ ಮನದಾಳದ ಮಾತುಗಳನ್ನಾಡಿದರು.
ಅಪಘಾತಗಳನ್ನು ನಿಯಂತ್ರಿಸಲು ಕರ್ನಾಟಕ ಪೊಲೀಸರ ಸರ್ವಪ್ರಯತ್ನ:
ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಅಪರಾಧ ನಡೆದಾಗ ಬರೀ ಪೊಲೀಸರೇ ಸ್ಥಳಕ್ಕೆ ಹೋಗುತ್ತಿದ್ದರು. ಈಗ ವೈಜ್ಞಾನಿಕ ಸಾಕ್ಷಿಗಳನ್ನು ಕೂಡ ಕಲೆ ಹಾಕಿ ಸಂಗ್ರಹಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ಪಡೆದ ಸೀನ್ ಆಫ್ ಕ್ರೈಂ ಆಫೀಸರ್ಸ್‍ಗಳು ಕೂಡ ಅವರ ಜತೆಗಿರುತ್ತಾರೆ. ಇದು ದೇಶದಲ್ಲೇ ನಮ್ಮ ರಾಜ್ಯದಲ್ಲಿ ಪ್ರಥಮ ಪ್ರಯೋಗವಾಗಿದೆ ಎಂದು ಸಚಿವರು ತಿಳಿಸಿದರು.
ಸುಮಾರು 200ಕ್ಕೂ ಹೆಚ್ಚು ವಿ ವಿಜ್ಞಾನ ಅಕಾರಿಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದ ಅವರು ಇದಕ್ಕಾಗಿ ಗುಜರಾತ್ ರಾಜ್ಯದಲ್ಲಿ ತರಬೇತಿ ನೀಡಲು ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ಸೈಬರ್ ಕ್ರೈಮ್ ಅಪರಾಧಗಳಿಗೆ ನಿಯಂತ್ರಣ:
ರಾಜ್ಯದಲ್ಲಿ ಸೈಬರ್ ಕ್ರೈಂ ಅಪರಾಧಗಳು ಹೆಚ್ಚುತ್ತಿದ್ದು , ಲಕ್ಷಾಂತರ ಮಂದಿ ವಂಚನೆಗೊಳಗಾಗುತ್ತಿದ್ದಾರೆ. ಇದನ್ನು ತಡೆಯುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಸೈಬರ್ ಕ್ರೈಂ ಠಾಣೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಈಗಾಗಲೇ ಸುಮಾರು 20 ಮಂದಿ ಅಧಿಕಾರಿಗಳು ಹೈದರಾಬಾದ್‍ನಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಈ ವರ್ಷದೊಳಗೆ 100 ಹೊಸ ಠಾಣೆಗಳನ್ನು ತೆರೆಯಲಾಗುವುದು ಎಂದರು.
10 ಸಾವಿರ ಪೊಲೀಸ್ ವಸತಿ ಗೃಹ ನಿರ್ಮಾಣದ ಗುರಿ:
2025ರ ವೇಳೆಗೆ 10 ಸಾವಿರ ಪೊಲೀಸ್ ವಸತಿ ಗೃಹಗಳನ್ನು ನಿರ್ಮಿಸಲಾಗುವುದು. ರಾಜ್ಯದಲ್ಲಿ 113 ಪೊಲೀಸ್ ಠಾಣೆಗಳಿಗೆ ಸ್ವಂತ ಕಟ್ಟಡಗಳಿಲ್ಲ. ಇದನ್ನು ಮನಗಂಡು ನಮ್ಮ ಸರ್ಕಾರ 100 ಪೊಲೀಸ್ ಠಾಣೆಗಳನ್ನು ನಿರ್ಮಿಸಲು ಈಗಾಗಲೇ ತೀರ್ಮಾನವಾಗಿದೆ ಎಂದು ಹೇಳಿದರು.
ಪೊಲೀಸ್ ಅಧಿಕಾರಿಗಳ ನೇಮಕದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಕ್ರಮ:
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ನೇಮಕ ಸಂದರ್ಭದಲ್ಲಿ ಕೆಲ ಮಧ್ಯವರ್ತಿಗಳು ಲಂಚ ಪಡೆಯುತ್ತಿರುವ ಬಗ್ಗೆ ನನಗೆ ದೂರುಗಳು ಬಂದಿವೆ. ಒಬ್ಬ ವ್ಯಕ್ತಿಯ ವಿರುದ್ಧವೂ ದೂರು ದಾಖಲಾಗಿದೆ. ಇಂತಹ ಕೃತ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರತ್ಯೇಕ ತಂಡವನ್ನು ರಚಿಸಿ ಅದರ ಮೇಲೆ ಕಣ್ಣಿಡಲು ನಿರ್ಧರಿಸಲಾಗಿದೆ ಎಂದರು.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…