
ಹಂಪಿ ಕನ್ನಡ ವಿವಿ ದೂರಶಿಕ್ಷಣ ನಿರ್ದೇಶನಾಲಯ ಕಚೇರಿ ಅಧೀಕ್ಷರಾಗಿರುವ ಜಿ. ಶಿವಕುಮಾರ ಅವರನ್ನು ಸಮಿತಿ ರಾಜ್ಯಾಧ್ಯಕ್ಷ ಡಿ. ಶಿವಶಂಕರ್ ನೇಮಿಸಿದ್ದಾರೆ.
ಆದೇಶ ನೇಮಕ ಪತ್ರಕ್ಕೆ ರಾಜಾಧ್ಯಕ್ಷರ ಜತೆ ಸಮಿತಿಯ ಹಿರಿಯ ಉಪಾಧ್ಯಕ್ಷ ಆರ್. ಮೋಹನ್ ಹಾಗೂ ಪ್ರಧಾನ ಕಾರ್ಯದರ್ಶಿ ಡಾ. ಎಸ್. ವಿಜಯಕುಮಾರ್ ಅವರು ಸಹಿ ಹಾಕಿದ್ದಾರೆ. ಈ ಸಮಯದಲ್ಲಿ ಮಾತನಾಡಿದ ಶಿವಕುಮಾರ್,
ಶೀಘ್ರ ಜಿಲ್ಲಾ ಸಮಿತಿ ಪದಾಧಿಕಾರಿಗಳ ನೇಮಕಕ್ಕೆ ಸಂಬಂಧಿಸಿದಂತೆ ಹೊಸಪೇಟೆಯಲ್ಲಿ ಸದಸ್ಯರ ಸಭೆ ಕರೆಯಲಾಗುವುದು. ಸಭೆಯಲ್ಲಿ ಚರ್ಚಿಸಿ ಜಿಲ್ಲಾ ಸಮಿತಿ ರಚಿಸಲಾಗುವುದು.
ಸಭೆಯಲ್ಲಿ ರಾಜ್ಯಾಧ್ಯಕ್ಷರು ಸೇರಿದಂತೆ ಹಿರಿಯ ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಪಾಲ್ಗೊಳ್ಳುತ್ತಾರೆ ಎಂದು ಹೇಳಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…