ಬೀದಿ ನಾಯಿಗಳ ಹಾವಳಿಗೆ ಬ್ರೇಕ್ ಹಾಕಲು ಮುಂದಾದ ಮಹಾನಗರ ಪಾಲಿಕೆ..!

by EDITOR NEWS WARRIORS
0 comments
ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂರ್ಕೀಣಗಳು, ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳ ಆವರಣದಲ್ಲಿ ಬೀದಿ ನಾಯಿಗಳು ವಾಸವಿದ್ದಲ್ಲಿ ಅದರ ಸಂಖ್ಯೆಯನ್ನು ಲೆಕ್ಕ ಮಾಡಿ ಲಿಖಿತವಾಗಿ ಆಯುಕ್ತರು/ಸಹಾಯಕ ಕಾರ್ಯಪಾಲಕ ಅಭಿಯಂತರರು (ಪರಿಸರ)/ಪರಿಸರ ಅಭಿಯಂತರರು, ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳಿಗೆ ತಿಳಿಸುವುದು ಹಾಗೂ healthcitycorporation@gmail.com ಗೆ ಇ-ಮೇಲ್ ಮಾಡುವಂತೆ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಂಸ್ಥೆಯ ಆವರಣದಲ್ಲಿ ಬೀದಿನಾಯಿಗಳ ಉಪಟಳ ತಡೆಯಲು ಹಾಗೂ ಅವುಗಳ ಪ್ರವೇಶ ನಿಯಂತ್ರಿಸಲು ಕ್ರಮ ವಹಿಸುವುದು. ನಗರ ಸ್ಥಳೀಯ ಸಂಸ್ಥೆಯಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಸಹಕರಿಸಲು ಹಾಗೂ ಅವುಗಳ ಪ್ರವೇಶ ನಿರ್ಭಂದಿಸುವುದನ್ನು ಮೇಲ್ವಿಚಾರಣೆ ಮಾಡಲು ಸಂಸ್ಥೆಯ ವತಿಯಿಂದ ಒಬ್ಬ ಜವಾಬ್ಧಾರಿಯುವ ನೌಕರರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡುವುದು.
ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಸಂಸ್ಥೆಯ ವ್ಯಾಪ್ತಿಯಲ್ಲಿ ಪುನಃ ನಾಯಿಗಳು ವಾಸ ಮಾಡಲು ಅವಕಾಶ ಕೊಟ್ಟಲ್ಲಿ ಅವನ್ನು ಸ್ಥಳಾಂತರಿಸುವ ವೆಚ್ಛವನ್ನು ಆ ಸಂಸ್ಥೆಯಿಂದಲೇ ವಸೂಲಿ ಮಾಡಲಾಗುವುದು. ನ್ಯಾಯಾಲಯದ ಆದೇಶವನ್ನು ಉಲ್ಲಂಘನೆ ಮಾಡಿದ್ದಲ್ಲಿ ನ್ಯಾಯಾಲಯದ ಆದೇಶದಂತೆ ಅವರ ವಿರುದ್ಧ ಕಾನೂನು ಕ್ರಮ ವಹಿಸಲಾಗುವುದು  ಪಾಲಿಕೆ  ತಿಳಿಸಿದೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...