ತುಟ್ಟಿಭತ್ಯೆ ಹೆಚ್ಚಿಸಿರುವ ಮುಖ್ಯಮಂತ್ರಿಗಳಿಗೆ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಭಿನಂದನೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು ತುಟ್ಟಿಭತ್ಯೆ ಹೆಚ್ಚಿಸಿದ ಕೂಡಲೇ ಅಷ್ಟೇ ಪ್ರಮಾಣದಲ್ಲಿ ಶೇಕಡಾ 3% ರಷ್ಟು ತುಟ್ಟಿಭತ್ಯೆ ಹೆಚ್ಚಿಸಿ, ಸಮಸ್ತ ಸರ್ಕಾರಿ ನೌಕರ ಬಾಂಧವರಿಗೆ ದೀಪಾವಳಿ ಹಬ್ಬದ ಉಡುಗೂರೆ ನೀಡಿರುವ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ, ರಾಜ್ಯ ಸರ್ಕಾರಕ್ಕೆ ಹಾಗೂ ಈ ಬಗ್ಗೆ ಶ್ರಮವಹಿಸಿರುವ ಸಂಘದ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿಯವರಿಗೆ ತೀರ್ಥಹಳ್ಳಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಕಾರ್ಯದರ್ಶಿ ರಾಮು ಬಿ ಮತ್ತು ಎಲ್ಲಾ ಪದಾಧಿಕಾರಿಗಳು ಅಭಿನಂದನೆಗಳು ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.