248
ಶಿವಮೊಗ್ಗ: ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಉಪ ಸಂರಕ್ಷಣಾಧಿಕಾರಿ ಅಮರಾಕ್ಷರ್ ಕರ್ತವ್ಯ ಲೋಪ ನಿರ್ಲಕ್ಷದಿಂದ ಸಾವಿಗೀಡಾದ ಡಾಕ್ಟರ್ ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಕಾರಣ ತಿಳಿಯಲು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾದ ಆದ್ಯ ರಂಗಸ್ವಾಮಿಯವರು ಇಂದು ಮೃಗಾಲಯದ ಅಧಿಕಾರಿಗಳೊಂದಿಗೆ ಹುಲಿ ಮತ್ತು ಸಿಂಹದಾಮಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ವೈದ್ಯೆಯ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಲಾಗುವುದು ಬನ್ನೇರುಘಟ್ಟದ ನೀರಾನೆಗೆ ಸಮೀಕ್ಷಾ ಹೆಸರು ಇಡಲಾಗುವುದು.ವೈದ್ಯಯ ಸಾವಿಗೆ ಸೂಕ್ತ ನ್ಯಾಯ ಒದಗಿಸಲಾಗುವುದು ಘಟನೆಯ ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಇಂಥ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು.
