
ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸಂಬಂಧಪಟ್ಟಂತೆ ವಿವಿಧ ಕಾಮಗಾರಿಗಳ ಕುರಿತಂತೆ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಶಿವಮೊಗ್ಗ ಸಂಸದರಾದ ಬಿ ,ವೈ ರಾಘವೇಂದ್ರ ಅವರು ಕಾಮಗಾರಿಗಳ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಇರುವ ಅಂಶಗಳ ಬಗ್ಗೆ ವಿವರವಾಗಿ ಸಭೆಗೆ ಪ್ರಸ್ತಾಪಿಸಿದರು. ಬಳಿಕ ಸಭೆಯಲ್ಲಿ ಈ ಕೆಳಕಂಡಂತೆ ತೀರ್ಮಾನಿಸಲಾಯಿತು.
ಸಭೆಯಲ್ಲಿ ತೆಗೆದುಕೊಂಡ ಮಹತ್ವದ ತೀರ್ಮಾನಗಳು:
@ಅರಣ್ಯ ಹಕ್ಕು ಅಧಿನಿಯಮದಡಿ ಇತರೆ ವರ್ಗದ ಅರ್ಜಿದಾರರಿಗೆ ಮೂರು ತಲೆಮಾರಿನ ಅಂದರೆ 75 ವರ್ಷಗಳ ಅವಧಿಯ ದಾಖಲಾತಿಗಳನ್ನು ಸಲ್ಲಿಸಲು ಸಾಧ್ಯವಾಗದೇ ಇರುವುದರಿಂದ ಈ ಬಗ್ಗೆ ಒಂದು ತಲೆಮಾರಿನ ಅಂದರೆ 25ವರ್ಷಗಳ ದಾಖಲಾತಿಗಳನ್ನು ಒದಗಿಸಲು ವಿನಾಯಿತಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು. ಇದರಿಂದ ಇತರೆ ವರ್ಗದ ಅರ್ಜಿದಾರರು ಗಳು ಅರಣ್ಯ ಭೂಮಿಯ ಮೇಲಿನ ಹಕ್ಕು ಪಡೆಯಲು ಸಹಕಾರಿಯಾಗುತ್ತದೆ.
@ಕೊಡಲಾಯಿತು. ಕಾಗದ ಕಾರ್ಖಾನೆ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲವು ಕಾರ್ಮಿಕರು ಅನ್ಯ ನಿಗಮ-ಮಂಡಳಿಗಳಲ್ಲಿ ನಿಯೋಜನೆ ಮೇಲೆ ಕಾಗದ ಕಾರ್ಖಾನೆ ಕಾರ್ಯ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿಕಾಗದ ಕಾರ್ಖಾನೆ ಕಾರ್ಯ ಸ್ಥಗಿತಗೊಳಿಸಿರುವ ಹಿನ್ನೆಲೆಯಲ್ಲಿ ಅಂತ ನೌಕರರನ್ನು ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ನಿಗಮ-ಮಂಡಳಿಗಳಲ್ಲಿ ವಿಲೀನಗೊಳಿಸಲು ಸೂಕ್ತ ಕ್ರಮಕೈಗೊಳ್ಳಲು ತೀರ್ಮಾನಿಸಲಾಯಿತು.
@ನೀರಾವರಿ ಇಲಾಖೆ ಹಾಗೂ ಇತರ ಇಲಾಖೆಗಳಲ್ಲಿ ಮಂಜೂರಾದ ವಿವಿಧ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
@ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನವನ್ನು ತ್ವರಿತ ಗೊಳಿಸಲು ಅಗತ್ಯವಿರುವ ವಿವಿಧ ಇಲಾಖೆಗಳಿಂದ ಪಡೆಯಬೇಕಾದ ಅನುಮತಿಗಳನ್ನು ನೀಡಲು ಹಾಗೂ ಅಗತ್ಯ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಪ್ರಸಾದ್, ಕಾರ್ಯದರ್ಶಿಯವರಾದ ವಿ ಪೊನ್ನುರಾಜ್,ಸಮಾಜ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ,ಅರಣ್ಯ ಇಲಾಖೆಯ ಕಾರ್ಯದರ್ಶಿಗಳು, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ/ ಸೆಲ್ವಕುಮಾರ್, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಹಾಗೂ ಇತರ ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…