158
ಬೆಂಗಳೂರು: ಪೊಲೀಸ್ ಆಯುಕ್ತರು ಬೆಂಗಳೂರು ನಗರ ರವರ ಮಾರ್ಗದರ್ಶನದಲ್ಲಿ, ಈಶಾನ್ಯ ವಿಭಾಗದ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆ ಪೊಲೀಸರು ನಿಷೇಧಿತ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಒಬ್ಬ ವಿದೇಶಿ ಪ್ರಜೆಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಭಾತ್ಮಿದಾರರಿಂದ ಲಭಿಸಿದ ಖಚಿತ ಮಾಹಿತಿಯ ಆಧಾರದ ಮೇಲೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಕಾರ್ಯಾಚರಣೆಯ ವೇಳೆ ಸುಮಾರು ₹2 ಕೋಟಿ ಮೌಲ್ಯದ 2 ಕೆ.ಜಿ ತೂಕದ ನಿಷೇಧಿತ ಮಾದಕ ವಸ್ತುವಾದ MDMA ಅನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಈ ಉತ್ತಮ ಕಾರ್ಯವನ್ನು ಬೆಂಗಳೂರು ಪೊಲೀಸ್ ಆಯುಕ್ತರು, ರವರು ಶ್ಲಾಘಿಸಿ ಅಭಿನಂದಿಸಿರುತ್ತಾರೆ.
