
ಬೆಂಗಳೂರು >ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದ ಸಾರ್ವಜನಿಕರಿಗೆ ಸಹಕಾರಿಯಾಗಿದ್ದ ಯಶಸ್ವಿನಿ ಆರೋಗ್ಯ ಯೋಜನೆ ಸ್ಥಗಿತಗೊಂಡಿದ್ದು.ರಾಜ್ಯದ ಜನತೆಗೆ ಅದರಲ್ಲೂ ಬಡ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ ಯೋಜನೆಯನ್ನು ಮರು ಚಾಲನೆ ಮಾಡಲು ಸರ್ಕಾರ ನಿರ್ಧರಿಸಿದ್ದು ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಎಂದು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು, ರಾಜ್ಯದ ಸಹಕಾರಿ ಕ್ಷೇತ್ರ ಮತ್ತು ಬಡ ರೈತರ ಪಾಲಿಕೆ ಈ ಯೋಜನೆ ಸಂಜೀವಿನಿಯಾಗಲಿದೆ. ಸರ್ಕಾರದ ಮಟ್ಟದಲ್ಲಿ ಈ ಯೋಜನೆಯ ಮರು ಜಾರಿಯ ಕುರಿತು ಚರ್ಚೆಗಳು ನಡೆಯುತ್ತಿವೆ. ಈ ಯೋಜನೆ ಮರು ಜಾರಿಯಾದಲ್ಲಿ ಸಹಕಾರ ಕ್ಷೇತ್ರ ಮತ್ತು ರೈತಾಪಿ ವರ್ಗದ ಲಕ್ಷಾಂತರ ಜನಕ್ಕೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆ ನಂತರ ಮರು ಜಾರಿ ಆಗುತ್ತಾ ಮಹತ್ವಾಕಾಂಕ್ಷೆಯ ಯೋಜನೆ:
ಯಶಸ್ವಿನಿ ಯೋಜನೆ ಮರು ಜಾರಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ. ವಿಧಾನ ಪರಿಷತ್ ಚುನಾವಣೆ ನಂತರ ಈ ಯೋಜನೆಗೆ ಸ್ಪಷ್ಟ ರೂಪ ಸಿಗಲಿದೆ ಎಂದು ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…