ಶಿವಮೊಗ್ಗ ಜಿಲ್ಲೆಯಲ್ಲಿ ಕೆಳಹಂತದಿಂದ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿದ ಅನುಭವ ಜನಸ್ನೇಹಿ ಅಧಿಕಾರಿ ಎಂಬ ಹೆಗ್ಗಳಿಕೆಯೊಂದಿಗೆ ಸಾಗರಕ್ಕೆ ಆಗಮನ..!
ಸಾಗರ: ಶಿವಮೊಗ್ಗ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಕೆಳಹಂತದಿಂದ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಅಪಾರ ಆಡಳಿತಾತ್ಮಕ ಅನುಭವ ಹೊಂದಿರುವ ಜಿ.ಹೆಚ್. ಸತ್ಯನಾರಾಯಣ್ ಅವರು ಸಾಗರ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಈವರೆಗೆ ಸಾಗರ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೀರೇಶ್ ಕುಮಾರ್ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಸತ್ಯನಾರಾಯಣ್ ಅವರನ್ನು ನೇಮಕ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಹಲವು ವರ್ಷಗಳಿಂದ ವಿವಿಧ ಹಂತಗಳಲ್ಲಿ ಕಾರ್ಯನಿರ್ವಹಿಸಿರುವ ಸತ್ಯನಾರಾಯಣ್ ಅವರು, ಜಿಲ್ಲೆಯ ಭೌಗೋಳಿಕ ಪರಿಸ್ಥಿತಿ, ಸಾಮಾಜಿಕ ಸ್ಥಿತಿಗತಿ, ಗ್ರಾಮೀಣ ಭಾಗದ ಜನಜೀವನ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಸಮಗ್ರ ಅರಿವು ಹೊಂದಿರುವ ಅಧಿಕಾರಿಯಾಗಿದ್ದು.
ಈ ಹಿಂದೆ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿಯೂ ಕಾರ್ಯನಿರ್ವಹಿಸಿರುವ ಇವರು, ಕಂದಾಯ ಆಡಳಿತ, ಸಾರ್ವಜನಿಕ ಸಮಸ್ಯೆಗಳ ನಿರ್ವಹಣೆ ಹಾಗೂ ವಿವಿಧ ಇಲಾಖೆಗಳ ನಡುವಿನ ಸಮನ್ವಯದ ವಿಷಯದಲ್ಲಿ ಆಪಾರ ಅನುಭವ ಹೊಂದಿದ್ದಾರೆ.
ಜನಸ್ನೇಹಿ ಅಧಿಕಾರಿ ಎಂಬ ಹೆಗ್ಗಳಿಕೆ..!
ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವದಿಂದ ಕಾರ್ಯನಿರ್ವಹಿಸುವ ಅಧಿಕಾರಿ ಎಂಬ ಹೆಗ್ಗಳಿಕೆಗೆ ಸತ್ಯನಾರಾಯಣ್ ಪಾತ್ರರಾಗಿದ್ದಾರೆ. ಆಡಳಿತ ವ್ಯವಸ್ಥೆಯ ಕೆಳಹಂತದಿಂದ ಕಾರ್ಯನಿರ್ವಹಿಸಿರುವ ಅನುಭವವು ಸಾಮಾನ್ಯ ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಕಾರಿಯಾಗಿದೆ.
ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರ ಅಹವಾಲುಗಳನ್ನು ಆಲಿಸುವುದು, ಸಮಸ್ಯೆಗಳ ಪರಿಹಾರಕ್ಕೆ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಜನಸಾಮಾನ್ಯರಿಗೆ ಸರ್ಕಾರಿ ಸೇವೆಗಳು ಸುಲಭವಾಗಿ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಜನಸ್ನೇಹಿ ಆಡಳಿತಕ್ಕೆ ಆದ್ಯತೆ ನೀಡುವ ಅಧಿಕಾರಿಯಾಗಿ ಅವರು ಗುರುತಿಸಿಕೊಂಡಿದ್ದಾರೆ.
ಜಿಲ್ಲೆಯ ಸಮಗ್ರ ಚಿತ್ರಣದ ಅರಿವು..!
ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರುವ ಸತ್ಯನಾರಾಯಣ್ ಅವರಿಗೆ ಜಿಲ್ಲೆಯ ಆಡಳಿತಾತ್ಮಕ ವ್ಯವಸ್ಥೆ, ಸ್ಥಳೀಯ ಸಮಸ್ಯೆಗಳು, ಗ್ರಾಮೀಣ ಪ್ರದೇಶಗಳ ಅಗತ್ಯತೆ ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಸವಾಲುಗಳ ಕುರಿತು ಅರಿವಿದೆ.
ವಿಶೇಷವಾಗಿ ಸಾಗರ ಉಪವಿಭಾಗದಂತಹ ವಿಶಾಲ ಗ್ರಾಮೀಣ ಮತ್ತು ಮಲೆನಾಡು ಪ್ರದೇಶಗಳನ್ನೊಳಗೊಂಡ ಆಡಳಿತ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಜಿಲ್ಲೆಯ ಸಮಗ್ರ ಚಿತ್ರಣದ ಅರಿವು ಮಹತ್ವದ್ದಾಗಿದೆ.
ಸಾಗರದ ಆಡಳಿತಕ್ಕೆ ಹೊಸ ನಿರೀಕ್ಷೆ..!
ಸಾಗರ ಉಪವಿಭಾಗದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು, ಭೂದಾಖಲೆಗಳ ವಿಚಾರಗಳು, ಸಾರ್ವಜನಿಕರ ಕುಂದುಕೊರತೆಗಳ ನಿವಾರಣೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸವಾಲಿನ ಕೆಲಸವಾಗಿದ್ದು.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ಆಡಳಿತ ವ್ಯವಸ್ಥೆಯಲ್ಲಿ ಕೆಳಹಂತದಿಂದ ಕಾರ್ಯನಿರ್ವಹಿಸಿ ಅನುಭವ ಗಳಿಸಿರುವ ಸತ್ಯನಾರಾಯಣ್ ಅವರ ನೇಮಕವು ಸಾಗರ ಉಪವಿಭಾಗದ ಆಡಳಿತದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
ಜಿಲ್ಲೆಯ ನಾಡಿಮಿಡಿತ ಅರಿತ ಅಧಿಕಾರಿಗೆ ಸಾಗರದ ಜವಾಬ್ದಾರಿ..!
ಶಿವಮೊಗ್ಗ ಜಿಲ್ಲೆಯ ಜನಜೀವನ, ಆಡಳಿತ ವ್ಯವಸ್ಥೆ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ಅರಿವು ಹೊಂದಿರುವ ಸತ್ಯನಾರಾಯಣ್ ಅವರಿಗೆ ಸಾಗರ ಉಪವಿಭಾಗದ ಜವಾಬ್ದಾರಿ ದೊರೆತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
ಜನಸಾಮಾನ್ಯರೊಂದಿಗೆ ನೇರ ಸಂಪರ್ಕ ಹೊಂದಿ ಕಾರ್ಯನಿರ್ವಹಿಸುವ ಅಧಿಕಾರಿ ಎಂಬ ಗುರುತಿನೊಂದಿಗೆ ಸಾಗರಕ್ಕೆ ಆಗಮಿಸಿರುವ ಸತ್ಯನಾರಾಯಣ್ ಅವರು, ತಮ್ಮ ಹಿಂದಿನ ಆಡಳಿತಾತ್ಮಕ ಅನುಭವವನ್ನು ಬಳಸಿಕೊಂಡು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡುವ ನಿರೀಕ್ಷೆಯಿದೆ.