Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಶಾಕಿಂಗ್ ನ್ಯೂಸ್ ಕರ್ನಾಟಕದಲ್ಲಿ 4 ಅಲ್ಲ ಬರೋಬ್ಬರಿ16 ಓಮಿಕ್ರಾನ್ ಕೇಸ್ ಗಳಿವೆ ಆದರೆ ಸರ್ಕಾರ ಮುಚ್ಚಿಡುತ್ತಿದೆ...

ಶಾಕಿಂಗ್ ನ್ಯೂಸ್ ಕರ್ನಾಟಕದಲ್ಲಿ 4 ಅಲ್ಲ ಬರೋಬ್ಬರಿ16 ಓಮಿಕ್ರಾನ್ ಕೇಸ್ ಗಳಿವೆ ಆದರೆ ಸರ್ಕಾರ ಮುಚ್ಚಿಡುತ್ತಿದೆ ಎಂದ ಮಾಜಿ ಸಚಿವ…!

ಕರ್ನಾಟಕ ರಾಜ್ಯದಲ್ಲಿ ಕೋವಿಡ್ ಹೊಸ ರೂಪಾಂತರ ಓಮಿಕ್ರಾನ್ ಎರಡಲ್ಲ, ನಾಲ್ಕಲ್ಲ, ಬರೋಬ್ಬರಿ 16 ಕೇಸುಗಳಿವೆ.

ಆದರೆ ಸರ್ಕಾರ ಅದನ್ನು ಮುಚ್ಚಿಟ್ಟು ಸುಳ್ಳು ಸುದ್ದಿ ನೀಡುತ್ತಿದೆ. ಅದೇ ರೀತಿ ಹೊಸ ರೂಪಾಂತರ ತಳಿಯ ಟೆಸ್ಟ್ನ ಬಳಿಕ ವರದಿ ಬರಲು 15 ದಿನ ಏಕೆ ಬೇಕು? ಮೂರನೇ ಅಲೆ ಬರುತ್ತದೆ ಎಂದು ಗೊತ್ತಿದ್ದರೂ ಕೂಡ ಸರ್ಕಾರ ಏಕೆ ಗಂಭೀರ ಕ್ರಮವನ್ನು ತೆಗೆದುಕೊಂಡಿಲ್ಲ? ಎಂದು ಮಾಜಿ ಸಚಿವ ಹೆಚ್, ಕೆ ಪಾಟೀಲ್ ಪಾಟೀಲ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸರ್ಕಾರವನ್ನು ಆಗ್ರಹಿಸಿದರು.

ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್ ಅಶೋಕ್:

ರಾಜ್ಯ ರಾಜಧಾನಿಯಲ್ಲಿ ಓಮಿಕ್ರಾನ್ ವೈರಸ್ ಹರಡಿದ ಬೆನ್ನಲ್ಲೆ ಇಂದು ಸಿಎಂ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಆರ್, ಅಶೋಕ್ ಹೊಸ ಮಾರ್ಗಸೂಚಿಗಳ ಬಗ್ಗೆ ವಿವರಿಸಿದರು.


ಬೆಂಗಳೂರಿನಲ್ಲಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ” ಸಭೆಯಲ್ಲಿ ಸಿಎಂ, ಅಧಿಕಾರಿಗಳು ಮತ್ತು ಸಚಿವರ ಜೊತೆ ಸುಧೀರ್ಘ ಚರ್ಚೆ ಮಾಡಿದ್ದಾರೆ. ಸಭೆಯಲ್ಲಿ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ವಿಶ್ವದಲ್ಲಿ ಈವರೆಗೆ 400 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಹೆಚ್ಚು ಪ್ರಕರಣಗಳು ಕಂಡು ಬರುತ್ತಿರುವುದರಿಂದ ಫೋಷಕರಿಗೆ ಎರಡು ಡೋಸ್ ಆಗಿದ್ದರೆ ಮಾತ್ರ ಅವರ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ಬರಲು ಅವಕಾಶ ನೀಡಲಾಗುತ್ತದೆ. ಯಾವುದೇ ಶಾಲೆಯಲ್ಲಿ ಸಮಾರಂಭ ಮಾಡುವಂತಿಲ್ಲ. ಜೊತೆಗೆ ಮಾಲ್, ಸಿನಿಮಾ ಮಂದಿರಗಳಿಗೆ ಎರಡು ಡೋಸ್ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲು ಸೂಚಿಸಲಾಗಿದೆ” ಎಂದು ಹೇಳಿದರು.

ಆರೋಗ್ಯ ಇಲಾಖೆಗೆ ಮುಖ್ಯಮಂತ್ರಿಗಳ ಸೂಚನೆ:

ಜೊತೆಗೆ ಆರೋಗ್ಯ ಇಲಾಖೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಹಿಂದೆ ಕೊರೊನಾ ತೀವ್ರವಾಗಿದ್ದ ಸಮಯದಲ್ಲಿ ತೆಗೆದುಕೊಂಡ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಾಗಿರಬೇಕು. ಐಸಿಯು, ಹೆಚ್ಚು ಬೆಡ್ ಗಳನ್ನು ಮತ್ತೆ ಸ್ಥಾಪಿಸಬೇಕು. ಹೆಚ್ಚಿನ ಆಕ್ಸಿಜನ್ ಕೂಡ ವ್ಯವಸ್ಥೆ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಕಂಟ್ರೋಲ್ ರೂಂ ಮತ್ತೆ ಪ್ರಾರಂಭ ಮಾಡಲಾಗಿದೆ. ಅದಕ್ಕೆ ಬೇಕಾದ ಸಿಬ್ಬಂದಿ ವರ್ಗವನ್ನು ತೆಗೆದುಕೊಳ್ಳಲು ಮಾಡಲು ಸೂಚಿಸಲಾಗಿದೆ. ಅಗತ್ಯವಿರುವ ಔಷಧಿ ಖರೀದಿಗೂ ಸೂಚನೆ ಮಾಡಲಾಗಿದೆ” ಎಂದರು.

ಮದುವೆ ಸಮಾರಂಭಗಳಿಗೆ 500 ಜನರಿಗೆ ಮಾತ್ರ ಸೀಮಿತ:

ಇನ್ನೂ ಕೆಲ ಮಾರ್ಗಸೂಚಿಗಳನ್ನು ಸೂಚಿಸಲಾಗಿದೆ. ಮದುವೆ ಸಮಾರಂಭಗಳಲ್ಲಿ ಐದು ನೂರು ಜನ ಮಾತ್ರ ಸೇರಬೇಕು. ವಿಮಾನ ನಿಲ್ದಾಣದಲ್ಲಿ ಟೆಸ್ಟಿಂಗ್ ಕಡ್ಡಾಯ ಮಾಡಲಾಗಿದೆ. ಪ್ರತಿನಿತ್ಯ ಒಂದು ಲಕ್ಷ ಪರೀಕ್ಷೆ ಮಾಡಲು ಸೂಚನೆ ನೀಡಲಾಗುತ್ತದೆ. ನೆಗೆಟಿವ್ ರಿಪೋರ್ಟ್ ಬಂದರೆ ಮಾತ್ರ ವಿಮಾನ ನಿಲ್ದಾಣದಲ್ಲಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಜೊತೆಗೆ ನೆಗೆಟಿವ್ ಬಂದರೆ ಮಾತ್ರ ಹೊರಗೆ ಕಳುಹಿಸಲಾಗುತ್ತದೆ.ಈವರೆಗೆ ಓಮಿಕ್ರಾನ್ ಸಾವಿನ ಪ್ರಕರಣಗಳು ಕಂಡುಬಂದಿಲ್ಲ’ ಎಂದರು.

ಹೊಸ ವರ್ಷಾಚರಣೆಯ ಬಗ್ಗೆ ಈಗಲೇ ಯಾವುದೇ ನಿರ್ಧಾರವಿಲ್ಲ:

ಹೊಸ ವರ್ಷದ ಆಚರಣೆ ಬಗ್ಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ಯಾವುದೇ ನಿರ್ಧಾರ ಈ ಬಗ್ಗೆ ತೆಗೆದುಕೊಂಡಿಲ್ಲ.


ಆಗುತ್ತಿರುವ ಬೆಳವಣಿಗೆಗಳನ್ನು ಅವಲೋಕಿಸಿ ನಂತರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ.

ಬೆಳಗಾವಿ ಅಧಿವೇಶನ ನಡೆಯುತ್ತದೆ:

ಬೆಳಗಾವಿ ಅಧಿವೇಶನ ನಡೆಯುತ್ತದೆ ಅದನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ ಎಂದರು. ಎರಡು ವರ್ಷದಿಂದ ಬೆಳಗಾವಿ ಅಧಿವೇಶನ ಮಾಡಿಲ್ಲ. ನಾವು ಮುಂಜಾಗೃತ ಕ್ರಮ ತೆಗೆದುಕೊಂಡು ಅಧಿವೇಶ ಮಾಡುತ್ತೇವೆ. ಬೇರೆ ಬೇರೆ ದೇಶಗಳಲ್ಲಿ ಬಂದಿದೆ. ಅವರೊಂದಿಗೆ ಸಂಪರ್ಕ ಮಾಡಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೆಂದು ನೋಡಿ ನಂತರ ನಾವು ಕ್ರಮ ಕೈಗೊಳ್ಳುತ್ತೇವೆ.

ಕೇಂದ್ರ ಆರೋಗ್ಯ ಸಚಿವ ರಾಜ್ಯದ ಮುಖ್ಯಮಂತ್ರಿಗಳ ನಿರಂತರ ಸಂಪರ್ಕ:

ಮುಖ್ಯಮಂತ್ರಿಗಳು ಕೇಂದ್ರ ಆರೋಗ್ಯ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಸದ್ಯಕ್ಕೆ ಯಾವುದೇ ನೈಟ್ ಕರ್ಫ್ಯೂ ಇಲ್ಲ. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿ ನೋಡಿ ನಿರ್ಧಾರ ಕೂಗೊಳ್ಳಲಾಗುತ್ತದೆ. ಸೋಂಕಿನ ಕುರಿತು ಅಧ್ಯಯನ ಬಂದಿಲ್ಲ. ಈ ಸೋಂಕು ತೀವ್ರತೆ ಇಲ್ಲ ಎಂದರು.

ಜರ್ಮನಿ ಮಾದರಿ ಕರ್ನಾಟಕದಲ್ಲಿ ಲಾಕ್ಡೌನ್ ಎಂದ ಸಚಿವ ಅಶ್ವತ್ ನಾರಾಯಣ್:

ಜರ್ಮನಿ ಮಾದರಿಯಲ್ಲಿ ಕರ್ನಾಟಕದಲ್ಲಿ ಲಾಕ್ಡೌನ್ ಮಾಡುವ ಚಿಂತನೆ ನಡೆಸಲಾಗಿದ್ದು.

ಅದರ ಪ್ರಕಾರ 2 ಲಸಿಕೆ ತೆಗೆದುಕೊಂಡವರಿಗೆ ಮಾತ್ರ ಎಲ್ಲಾ ಕಡೆ ಓಡಾಡುವ ಅವಕಾಶವಿರುತ್ತದೆ.ಒಂದು ವೇಳೆ ಎರಡು ಲಸಿಕೆ ತೆಗೆದುಕೊಳ್ಳದೆ ಇರುವವರಿಗೆ ಆಫೀಸ್ಗೆ ,ತನ್ನ ಉದ್ಯೋಗಕ್ಕೆ ಹೋಗುವ, ಪ್ರಯಾಣ ಮಾಡುವ, ಟ್ರೈನ್, ಬಸ್, ಫ್ಲೈಟ್, ಮಾಲ್, ಪ್ರೇಕ್ಷಣೀಯ ಸ್ಥಳಗಳು, ಉಳಿದಂತೆ ಜನಸಾಮಾನ್ಯರು ಓಡಾಡುವ ಸ್ಥಳಗಳಿಗೆ ಹೋಗುವಂತೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...