
ಇಂದು ನವದೆಹಲಿಯಲ್ಲಿ ಕೇಂದ್ರ ಅರಣ್ಯ ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ,ವೈ ರಾಘವೇಂದ್ರ, ಕರ್ನಾಟಕ ಸರ್ಕಾರದ ಅರಣ್ಯ ಸಚಿವರಾದ ಆನಂದ್ ಸಿಂಗ್, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಒಳಗೊಂಡ ನಿಯೋಗ ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗುವ ಸಮಸ್ಯೆಗಳ ಬಗ್ಗೆ ಹಾಗೂ ನಿರ್ಬಂಧಗಳನ್ನು ಸಡಿಲಗೊಳಿಸುವ ಅಂತೆ ಚರ್ಚೆ ಮಾಡಿ ಈ ಕೆಳಕಂಡಂತೆ ಮಾರ್ಪಾಡುಗಳನ್ನು ಮಾಡಬೇಕೆಂದು ಮನವಿ ಸಲ್ಲಿಸಿದರು.
ಮನವಿ ಪತ್ರದಲ್ಲಿ ಏನಿದೆ?
#ಕಸ್ತೂರಿರಂಗನ್ ವರದಿ ಪ್ರಕಾರ ಕರ್ನಾಟಕ ರಾಜ್ಯದಲ್ಲಿ ಪ್ರಸ್ತಾಪಿಸಲಾದ ಪರಿಸರ ಸೂಕ್ಷ್ಮ ಪ್ರದೇಶ ಅಡಿಯಲ್ಲಿ 1543 ಗ್ರಾಮಗಳು ಬರುತ್ತವೆ. ಅದರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಂದಾಜು 500 ಗ್ರಾಮಗಳು ಬರುತ್ತವೆ.
#ಪಶ್ಚಿಮ ಘಟ್ಟದ ಕಾಡಿನ ಗ್ರಾಮಗಳಲ್ಲಿ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ವಾಸಿಸುತ್ತಿರುವ ಜನರು ಪ್ರಕೃತಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ಮನೋಭಾವ ಹೊಂದಿ ಸಂರಕ್ಷಿಸುತ್ತಿರುವ ಕಾರಣದಿಂದಲೇ ಸುಮಾರು 60 ಪರ್ಸೆಂಟ್ ಭೂಪ್ರದೇಶವು ಸಮೃದ್ಧ ಅರಣ್ಯವಾಗಿದೆ.
#ಆದ್ದರಿಂದ ವರದಿಯಲ್ಲಿ ಇರುವಂತೆ ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಗ್ರಾಮಗಳನ್ನು ಹೊರತುಪಡಿಸಿ ಸಂಪೂರ್ಣ ಶರಣೆ ಪ್ರದೇಶ ಮತ್ತು ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಮಾತ್ರ ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಬೇಕು ಎಂದು ಕೋರಿದರು.
#ವರದಿಯಂತೆ, ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ 5 ರಿಂದ 10 ಕಿಲೋಮೀಟರ್ ವರೆಗಿನ ಪ್ರದೇಶವನ್ನು ಬಫರ್ ಜೋನ್ ಎಂಬುದಾಗಿ ಘೋಷಿಸಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುವುದಷ್ಟೇ ಅಲ್ಲದೆ, ರಾಜ್ಯ ಸರ್ಕಾರದ ವತಿಯಿಂದ ಭೂಪ್ರದೇಶದಲ್ಲಿ ಯಾವುದೇ ರೀತಿಯ ಉದ್ಯೋಗ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ ಆದುದರಿಂದ ಅದನ್ನು ಸಂಪೂರ್ಣವಾಗಿ ಪ್ರಸ್ತಾವನೆಯಿಂದ ಕೈಬಿಡಬೇಕು.
#ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಕರ್ನಾಟಕ ರಾಜ್ಯ ಸಚಿವ ಸಂಪುಟವು ಕಸ್ತೂರಿ ರಂಗನ್ ವರದಿಯ ಅನುಷ್ಠಾನವನ್ನು ತಿರಸ್ಕರಿಸಿದೆ.
#ಕರ್ನಾಟಕ ರಾಜ್ಯ ಸರ್ಕಾರವು ವಿಭಿನ್ನ ನಿಲುವು ವ್ಯಕ್ತಪಡಿಸಿದ್ದರಿಂದ ಗ್ರಾಮಗಳಲ್ಲಿ ಪರಿಸ್ಥಿತಿ ಅಧ್ಯಯನ ಮಾಡಲು, ಪ್ರತಿ ಗ್ರಾಮಗಳ ಜನರಿಂದ ದೂರುಗಳನ್ನು ಸ್ವೀಕರಿಸಿ ಅವರ ಸಮಸ್ಯೆಗಳನ್ನು ಪರಿಹರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಧಿಕಾರಿಗಳನ್ನೊಳಗೊಂಡ ಟಾಸ್ಕ್ ಫೋರ್ಸ್ ಅಥವಾ ಕಾರ್ಯಪಡೆ ರಚಿಸಲು ಕೇಂದ್ರ ಸಚಿವರಲ್ಲಿ ವಿನಂತಿಸಿದರು.
#ತಮ್ಮ ಸಲಹೆಗಳನ್ನು ಕಸ್ತೂರಿರಂಗನ್ ರವದ ಕರಡು ವರದಿಯಲ್ಲಿ ಅಳವಡಿಸಿಕೊಂಡು ಸಾರ್ವಜನಿಕರಿಗೆ ಆಗುವ ತೊಂದರೆಯನ್ನು ತಪ್ಪಿಸಬೇಕೆಂದು ಕೋರಿದರು.
ಮೇಲ್ಕಂಡಂತೆ ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಕೇಂದ್ರ ಸಚಿವರಾದ ಭೂಪೇಂದ್ರ ಯಾದವ್ ಅವರು ಈ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳುವುದಾಗಿ ನಿಯೋಗಕ್ಕೆ ಭರವಸೆ ನೀಡಿದರು.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305/7892830899…