ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿದ್ದ ಹಬ್ಬದ ಮುಂಗಡವನ್ನು ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದ ಮೇರೆಗೆ ಘನ ಸರ್ಕಾರವು ರಾಜ್ಯ ಸರ್ಕಾರಿ ನೌಕರರ ಹಬ್ಬದ ಮುಂಗಡವನ್ನು ಹತ್ತು ಸಾವಿರ ರೂಪಾಯಿಗಳಿಂದ ಇಪ್ಪತ್ತೈದು ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಿ ಆದೇಶ ಮಾಡಿರುತ್ತದೆ.
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಬಡ್ಡಿ ರಹಿತವಾಗಿ ಹಬ್ಬದ ಮುಂಗಡವನ್ನು ಪಡೆಯಬಹುದಾಗಿದ್ದು ಈ ಮುಂಗಡವನ್ನು ಹತ್ತು ಸಮ ಕಂತುಗಳಲ್ಲಿ ಪಾವತಿಸುವ ಅವಕಾಶ ಕಲ್ಪಿಸಲಾಗಿದೆ. ಇದರಿಂದ ಸಿ ಮತ್ತು ಡಿ ದರ್ಜೆ ನೌಕರರಿಗೆ ಹೆಚ್ಚಿನ ಪ್ರಯೋಜನವಾಗಲಿದೆ.
ಸಂಘದ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರಿ ನೌಕರರ ಇತಿಹಾಸದಲ್ಲೇ ಅತೀ ಕಡಿಮೆ ಅವದಿಯಲ್ಲಿ ಹೆಚ್ಚು ಪ್ರಮಾಣದ ಹಬ್ಬದ ಮುಂಗಡ ಮೊತ್ತವನ್ನು ಹೆಚ್ಚು ಮಾಡಿರುವುದು ಇದೇ ಮೊದಲು.ಹಾಗಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ, ಸಚಿವ ಸಂಪುಟದ ಸಹೋದ್ಯೋಗಿಗಳಿಗೆ, ಸರ್ಕಾರದ ಉನ್ನತ ಅಧಿಕಾರಿಗಳಿಗೆ ಹಾಗೂ ಈ ಬಗ್ಗೆ ಹೆಚ್ಚು ಶ್ರಮ ವಹಿಸಿರುವ ಸಂಘದ ಕ್ರಿಯಾಶೀಲ ರಾಜ್ಯಾಧ್ಯಕ್ಚರಾದ ಸಿ ಎಸ್ ಷಡಾಕ್ಷರಿಯವರಿಗೆ ತೀರ್ಥಹಳ್ಳಿ ತಾಲ್ಲೂಕಿನ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಕಾರ್ಯದರ್ಶಿ ರಾಮು ಬಿ ಮತ್ತು ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದ್ಯಸ್ಯರು ಹಾರ್ದಿಕ ಅಭಿನಂಧಿಸಿ, ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…