
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಲಿರುವ ಮುಖ್ಯಮಂತ್ರಿಗಳು ಇಂದು ಸಂಜೆ 5.30 ರಿಂದ 8 ಗಂಟೆ ಒಳಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ವಿವಾದಿತ ಮೇಕೆದಾಟು ಜಲಾಶಯಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ ಎಂಬ ಮಾಹಿತಿಗಳು ಲಭ್ಯವಿದ್ದು. ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲ ಶಕ್ತಿ ಸಚಿವರೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಲಿದ್ದಾರೆ. ಜಲಸಂಪನ್ಮೂಲ ಅಧಿಕಾರಿಗಳು, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಅವರು ಕೂಡ ಮುಖ್ಯಮಂತ್ರಿಗಳ ಜೊತೆ ತೆರಳುವ ಸಂಭವ ಇದ್ದು.
ಪ್ರಸ್ತುತ ಚಾಲ್ತಿಯಲ್ಲಿರುವ ಮುಖ್ಯಮಂತ್ರಿಗಳ ಬದಲಾವಣೆ, ಸಂಪುಟ ವಿಸ್ತರಣೆ, ಕೋವಿಡ್ 3ನೇ ಹಂತ ಎದುರಿಸುವ ಬಗ್ಗೆ, ಇನ್ನಿತರ ಮಹತ್ವದ ವಿಚಾರಗಳು ಚರ್ಚೆಯಾಗುವ ಸಂಭವವಿದೆ…(ರಘುರಾಜ್ ಹೆಚ್, ಕೆ)