Wednesday, April 30, 2025
Google search engine
Homeಶಿವಮೊಗ್ಗಆರೋಗ್ಯಕೋವಿಡ್ 19 ಗೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಮುಖ್ಯಾಂಶಗಳು..!

ಕೋವಿಡ್ 19 ಗೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯ ಮುಖ್ಯಾಂಶಗಳು..!

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾಕ್ಟರ್ ಕೆ ಸುಧಾಕರ್…
ಗೃಹಸಚಿವ ಆರಗ ಜ್ಞಾನೇಂದ್ರ ಶಿವಮೊಗ್ಗದಲ್ಲಿ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡಿರುವುದು…

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್-19 ಗೆ ಸಂಬಂಧಪಟ್ಟಂತೆ ಗೃಹಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾಕ್ಟರ್ ಕೆ ಸುಧಾಕರ್ , ಆರ್ ಅಶೋಕ್, ಸೇರಿದಂತೆ ವಿವಿಧ ಸಚಿವರನ್ನು ಒಳಗೊಂಡು ಆರೋಗ್ಯ ಇಲಾಖೆಗಳ ಅಧಿಕಾರಿಗಳೊಂದಿಗೆ ವರ್ಚುಯಲ್ ಸಭೆ ನಡೆಸಿದರು.

ಈ ಸಭೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು.


ಸಭೆಯ ತೀರ್ಮಾನಗಳು ಈ ಕೆಳಕಂಡಂತಿದೆ:

  • ಬೆಂಗಳೂರಿನಲ್ಲಿ ಒಪಿಡಿಗಳಿಗೆ ಹೆಚ್ಚಿನ ಗಮನ ಕೊಡಲು ಮತ್ತು ಹೆಚ್ಚು ಸಿಬ್ಬಂದಿ ನಿಯೋಜಿಸಲು ಸೂಚನೆ.
  • ಜನ ಟ್ರಯಾಜಿಂಗ್‌ಗೆ ದಾಖಲಾಗುವುದನ್ನು ನಿಯಂತ್ರಿಸಲು ಸಲಹೆ ನೀಡಿದರು.
  • ಹೋಮ್ ಐಸೊಲೇಷನ್ ಕಾಲ್ಸ್ ಹೆಚ್ಚಿಸಲು ಸೂಚಿಸಲಾಯಿತು. ಕೊ-ಮಾರ್ಬಿಡಿಟಿ ಇರುವವರಿಗೆ ದಿನಕ್ಕೆ ಒಂದು ಬಾರಿ ಕರೆ ಮಾಡಿ ಅವರ ಆರೋಗ್ಯ ಸ್ಥಿತಿ ಅವಲೋಕಿಸಬೇಕು ಹಾಗೂ ವಿಶ್ವಾಸ ಮೂಡಿಸಬೇಕು.
  • ಮನೆಯವರಿಗೆ ಹರಡದಂತೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಯಿತು.
  • ಔಷಧಿ ಕಿಟ್‌ಗಳನ್ನು ಮನೆಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲು ವ್ಯವಸ್ಥೆ ಮಾಡಬೇಕು.
  • ಸ್ವಯಂ ಸೇವಾ ಸಂಸ್ಥೆಗಳನ್ನು ತೊಡಗಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಜನರಲ್ಲಿರುವ ನಕಾರಾತ್ಮಕ ಮನೋಭಾವವನ್ನು ತೂಡೆದುಹಾಕಲು ಪ್ರಯತ್ನಪಡಬೇಕು.
  • ಸ್ಥಳೀಯ ವೈದ್ಯರು ಕನ್ಸಲ್ಟೇಷನ್ ಮಾಡುವಂತಾಗಬೇಕು.
  • ಸೋಂಕಿತ ಮಕ್ಕಳ ಕುರಿತು, ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ಪೋಷಕರಿಗೆ ಧೈರ್ಯ ಹೇಳಬೇಕು. ಔಷಧಿ ಕಿಟ್‌ಗಳನ್ನು ನೀಡಬೇಕು. ಮಕ್ಕಳಿಗೆ ಪ್ರತ್ಯೇಕ ಔಷಧಿ ಕಿಟ್ ಸಿದ್ಧಪಡಿಸಬೇಕು.
  • ಗ್ರಾಮೀಣ ಪ್ರದೇಶದಲ್ಲಿ ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.
  • ಆಕ್ಸಿಜನ್ ಪ್ಲಾಂಟ್‌ಗಳನ್ನು ಸಜ್ಜುಗೊಳಿಸಿ, ಸಿಬ್ಬಂದಿ, ಇಂಧನ ಮೊದಲಾದವುಗಳನ್ನು ಸಿದ್ಧವಿಟ್ಟುಕೊಳ್ಳಲು ಸೂಚನೆ.
  • ಆಸ್ಪತ್ರೆಗಳಲ್ಲಿ ಜನರೇಟರುಗಳ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ.
  • ಮಕ್ಕಳು ಮತ್ತು 60ವರ್ಷ ಮೇಲ್ಪಟ್ಟವರ ಕುರಿತು ಹೆಚ್ಚಿನ ನಿಗಾ ವಹಿಸಬೇಕು.
  • ಲಸಿಕೆ ಅಭಿಯಾನ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ.
  • ಔಷಧಿಗಳನ್ನು ಕೂಡಲೇ ಒದಗಿಸಬೇಕು. ಅವುಗಳನ್ನು ಸಕಾಲದಲ್ಲಿ ಆಸ್ಪತ್ರೆಗಳಿಗೆ ತಲುಪಿಸಲು ಕ್ರಮ ವಹಿಸಲು ಸೂಚನೆ.
  • ಭಾರತ ಸರಕಾರದ ನಿಯಮಾವಳಿಗಳಂತೆ ಐ.ಸಿ.ಎಂ.ಆರ್. ಸೂಚಿಸಿರುವ ಶ್ರೇಣೀಕೃತ ಮಾದರಿಯಲ್ಲಿ ಪರೀಕ್ಷೆ ನಡೆಸಲು ಸೂಚನೆ.
  • ಎರಡನೇ ಡೋಸ್ ಲಸಿಕೆ ಪಡೆದವರ ಸಂಖ್ಯೆ ಕಡಿಮೆ ಇರುವ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಲು ನಿರ್ಧರಿಸಲಾಯಿತು.
  • 15 ರಿಂದ 18 ವರ್ಷ ವಯೋಮಾನದವರಿಗೆ ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲು ಸೂಚನೆ ನೀಡಿದರು.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...