by EDITOR NEWS WARRIORS
1 comment

ಗಣ ರಾಜ್ಯೋತ್ಸವ ಸಂಭ್ರಮಾಚರಣೆ ಪ್ರಯುಕ್ತ ತೀರ್ಥಹಳ್ಳಿ ಸರ್ಕಾರಿ ನೌಕರರ ಸಂಘದಿಂದ ರಕ್ತದಾನ ಶಿಬಿರ..!

 ರಾಜ್ಯ ಸರ್ಕಾರಿ ನೌಕರರ ಸಂಘ ತೀರ್ಥಹಳ್ಳಿ ಶಾಖೆಯು ದಿನಾಂಕ:25-01-2022 ರಂದು ಬೆಳಿಗ್ಗೆ 10 ಗಂಟೆಯಿಂದ ಸೊಪ್ಪುಗುಡ್ಡೆಯ ಐಎಂಎ- ರೋಟರಿ ರಕ್ತನಿಧಿಯಲ್ಲಿ ರಕ್ತದಾನ ಮಾಡುವ ಮೂಲಕ 73 ನೇ ಗಣರಾಜ್ಯೋತ್ಸವದ ದಿನವನ್ನು ಸಂಭ್ರಮಿಸುತ್ತಿದೆ.

 ತಾಲ್ಲೂಕಿನ ವಿವಿಧ ಇಲಾಖೆಗಳ ಸಹೃದಯಿ ಸರ್ಕಾರಿ ನೌಕರರು ಹಾಗೂ ನಾಗರೀಕ ಬಂಧುಗಳ ಸಹಕಾರದಿಂದ ರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದ ಸಂದರ್ಭಗಳಲ್ಲಿ ನಿರಂತರ ಸ್ವಯಂ ಪ್ರೇರಿತ ರಕ್ತದಾನ ಶಿಬಿರಗಳನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ಸಂಘದ ಎಂಟನೇ ರಕ್ತದಾನ ಶಿಬಿರ ಇದಾಗಿದ್ದು ಯಶಸ್ಸಿಗೆ ಸಹಕರಿಸಿದ ಪ್ರತಿಯೊಬ್ಬರನ್ನೂ ಸಂಘವು ಕೃತಜ್ಞತೆಯಿಂದ ಸ್ಮರಿಸುತ್ತದೆ.

  ಕೋವಿಡ್ ಸಮಸ್ಯೆಯ ಹಿನ್ನಲೆಯಲ್ಲಿ ರಕ್ತದ ಲಭ್ಯತೆ ತೀವ್ರ ಕಡಿಮೆ ಇರುವುದರಿಂದ ಈ ಬಾರಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಪಾಲ್ಗೊಳ್ಳುವ ಮೂಲಕ ರೋಗಿಗಳ ಜೀವ ಉಳಿಸುವ ಮಹತ್ವದ ಕಾರ್ಯಕ್ಕೆ ಕೈ ಜೋಡಿಸುವಂತೆ ಸಂಘದ ಅಧ್ಯಕ್ಷ ಟಿ ವಿ ಸತೀಶ ಕೋರಿದ್ದಾರೆ.

  ರಕ್ತದಾನದ ಬಗ್ಗೆ ಅನೇಕರಲ್ಲಿ ಗೊಂದಲ, ಆತಂಕಗಳು ಈಗಲೂ ಇದೆ. ಅವಶ್ಯಕತೆಯಷ್ಟು ರಕ್ತದ ಪೂರೈಕೆಯ ಅಲಭ್ಯತೆಗೆ ಇದು ಪ್ರಮುಖ ಕಾರಣ. ಆರೋಗ್ಯವಂತ ವ್ಯಕ್ತಿಯ ದೇಹದಲ್ಲಿ ಸರಾಸರಿ 5.5 ರಿಂದ 6 ಲೀಟರ್ ನಷ್ಟು ರಕ್ತವಿರುತ್ತದೆ. ರಕ್ತದಾನ ಪ್ರಕ್ರಿಯೆಯಲ್ಲಿ ಕೇವಲ 350 ಮಿ.ಲೀನಷ್ಟೇ ರಕ್ತವನ್ನು ಸ್ವೀಕರಿಸುವುದರಿಂದ ದಾನಿಗೆ ಯಾವುದೇ ಅಪಾಯವಾಗುವುದಿಲ್ಲ. 18 ರಿಂದ 60 ವರ್ಷದೊಳಗಿನ, 45 ಕೆ.ಜಿ.ಗಿಂತಲೂ ಹೆಚ್ಚು ತೂಕವಿರುವ 12.5 ಗ್ರ್ಯಾಮ್‌ಗಿಂತಲೂ ಹೆಚ್ಚು ಹಿಮೋಗ್ಲೋಬಿನ್ ಅಂಶ ಹೊಂದಿರುವ ಎಲ್ಲಾ ಆರೋಗ್ಯವಂತರೂ ರಕ್ತದಾನ ಮಾಡಬಹುದು. ಲಿವರ್, ಕಿಡ್ನಿ ಮತ್ತು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರು, ಗರ್ಭಿಣಿಯರು, ಋತುಸ್ರಾವದಲ್ಲಿರುವವರು, ಹಾಲುಣಿಸುವ ತಾಯಂದಿರು, ರಕ್ತ ಹೀನತೆ, ಕ್ಯಾನ್ಸರ್, ಕ್ಷಯ, ಅಧಿಕ ರಕ್ತದೊತ್ತಡ, ಅಪಸ್ಮಾರ ಮುಂತಾದ ತೊಂದರೆಗಳಿರುವವರು ರಕ್ತದಾನ ಮಾಡಬಾರದು.

 ರಕ್ತದಾನದ ಬಳಿಕ ಹೆಚ್ಚೆಂದರೆ ಒಂದು ತಾಸಿನ ವಿಶ್ರಾಂತಿ ಸಾಕು. ಮೂರು ತಿಂಗಳೊಳಗಾಗಿ ದಾನಿಯ ದೇಹದಲ್ಲಿ ರಕ್ತವು ಮರು ಉತ್ಪತ್ತಿಯಾಗುತ್ತದೆ. ದಾನಿಯಿಂದ ಪಡೆದ ರಕ್ತವನ್ನು ಸಾಮಾನ್ಯವಾಗಿ ೩೫ ದಿನಗಳವರೆಗೆ ಮಾತ್ರ ವಿಶೇಷ ಶೀತಲೀಕರಣ ವ್ಯವಸ್ಥೆಯಲ್ಲಿ ಕಾಪಾಡಿ ಉಪಯೋಗಿಸಲು ಸಾಧ್ಯ. ರಕ್ತವನ್ನು ಕೇವಲ ದಾನದಿಂದಷ್ಟೇ ಪಡೆಯಬಹುದು.

 ಆದ್ದರಿಂದ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಹಾಗೂ ಇತರರನ್ನೂ ರಕ್ತದಾನಕ್ಕಾಗಿ ಪ್ರೇರೇಪಿಸುವಂತೆ ಸರ್ವರನ್ನೂ ಕೋರಿರುವ ಅವರು ಜನವರಿ 25 ಅಥವಾ 26 ರಂದು ಸರ್ಕಾರಿ ನೌಕರರು ಹಾಗೂ ಸಾರ್ವಜನಿಕ ಬಂಧುಗಳು ತಮಗೆ ಅನುಕೂಲವಾದ ಸಮಯಕ್ಕೆ ತಮ್ಮ ಸಮೀಪದ ರಕ್ತನಿಧಿ ಕೇಂದ್ರಕ್ಕೆ ತೆರಳಿ ರಕ್ತದಾನ ಮಾಡುವಂತೆ ವಿನಂತಿಸಿದ್ದಾರೆ.

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305

Related Articles

1 comment

rarefub June 25, 2025 - 12:59 pm

Приветствую всех любителей растений! Недавно наткнулся на сайт для цветоводов. Там очень много дельной информации.

Особенно актуальна тема грунта и пересадки. детально описаны здесь. Все по полочкам разложено.
Вот, можете почитать:

[url=https://raregreen.ru/category/bolezni-i-lechenie/]https://raregreen.ru/category/bolezni-i-lechenie/[/url]

Всем удачи в выращивании!

Reply

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!