Home ರಾಜ್ಯಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಲೆ ಎತ್ತಿದ ಮಸೀದಿ..!

ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ತಲೆ ಎತ್ತಿದ ಮಸೀದಿ..!

by EDITOR NEWS WARRIORS
0 comments

ಅನಧಿಕೃತ ಪ್ರಾರ್ಥನಾ ಸ್ಥಳಕ್ಕೆ ಅವಕಾಶ ನೀಡಿದವರ ಮೇಲೆ ಕ್ರಮಕೈಗೊಳ್ಳಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ !

ದಕ್ಷಿಣ ವೆಸ್ಟರ್ನ ರೈಲ್ವೆ ವಿಭಾಗ, ಬೆಂಗಳೂರು ಕೆಎಸ್‌ಆರ್ ರೈಲು ನಿಲ್ದಾಣದ ಪ್ಲ್ಯಾಟ್ ನಂ ೫ ರಲ್ಲಿ ಕೂಲಿ ಕಾರ್ಮಿಕರ ವಿಶ್ರಾಂತಿ ಕೊಠಡಿಯನ್ನು ಮುಸಲ್ಮಾನರು, ಅವರ ಪ್ರಾರ್ಥನಾಸ್ಥಳವನ್ನಾಗಿ ಮಾಡಿರುವುದು ಬೆಳಕಿಗೆ ಬಂದಿದೆ. ಈ ಘಟನೆಯು ರಾಷ್ಟ್ರೀಯ ಭದ್ರತೆ, ಸುರಕ್ಷತೆಯ ದೃಷ್ಠಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಬೆಂಗಳೂರು ಕೆಎಸ್‌ಆರ್ ರೈಲು ನಿಲ್ದಾಣವು ರಾಜ್ಯದ ಬಹು ಮಹತ್ವದ ರೈಲು ನಿಲ್ದಾಣವಾಗಿದೆ. ಬೆಂಗಳೂರು ರೈಲು ನಿಲ್ದಾಣದ ಹೊರಗೆ ಪ್ರಾರ್ಥನೆ ಮಾಡಲು ಹಲವಾರು ಮಸೀದಿಗಳು ಇರುವಾಗಲೂ ಸಹ ರೈಲು ನಿಲ್ದಾಣದ ಪ್ಲ್ಯಾಟ್‌ಫಾರ್ಮ ಮೇಲೆ ಪ್ರಾರ್ಥನೆಗೆ ಅವಕಾಶ ನೀಡಿರುವುದು ಒಂದು ಷಡ್ಯಂತ್ರ್ಯವಾಗಿದೆ. ಇಂದು ಪ್ರಾರ್ಥನಾಸ್ಥಳ ಮಾಡಿ, ನಾಳೆ ಅದನ್ನೇ ಮಸೀದಿಯನ್ನಾಗಿ ಮಾರ್ಪಾಡು ಮಾಡುವ ಸಾಧ್ಯತೆ ಇದೆ. ಹಾಗಾಗಿ ಅನಧಿಕೃತ ಪ್ರಾರ್ಥನಾಸ್ಥಳಕ್ಕೆ ಅವಕಾಶ ನೀಡಿದವರ ಮೇಲೆ ಕ್ರಮಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರರಾದ . ಮೋಹನ್ ಗೌಡ ಇವರು ಆಗ್ರಹಿಸಿದರು. ಅವರು ಈ ಸಂದರ್ಭದಲ್ಲಿ ಸಮಿತಿಯ ಸಹಿತ ಭಜರಂಗದಳ, ರಾಷ್ಟ್ರ ರಕ್ಷಣಾ ಪಡೆ, ಹಿಂದೂ ಮಹಾಸಭಾ ಹಾಗೂ ವಿಶ್ವ ಹಿಂದೂ ಪರಿಷದ್ ವತಿಯಿಂದ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆಡಳಿತ ಅಧಿಕಾರಿಗಳಿಗೆ ಮನವಿ ನೀಡಿದರು.

ಬೆಂಗಳೂರು ಭಯೋತ್ಪಾದಕರ ಆಶ್ರಯತಾಣವಾಗುತ್ತಿದೆ ಕೂಡಲೇ ಕ್ರಮ ತೆಗೆದುಕೊಂಡು ಜಾಗ ಖಾಲಿ ಮಾಡಿಸಿ ಮೋಹನ್ ಗೌಡ ಆಗ್ರಹ:

ಈಗಾಗಲೇ ಬೆಂಗಳೂರು ಭಯೋತ್ಪಾದಕರ ಆಶ್ರಯ ತಾಣವೆನಿಸಿದೆ. ೨೦೧೮ ರಲ್ಲಿ ರಾಷ್ಟ್ರೀಯ ತನಿಖಾದಳವು ಬೆಂಗಳೂರು ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಪಶ್ಚಿಮ ಬಂಗಾಳದ ಮೂಲದ ಭಯೋತ್ಪಾದಕ ಆದಿಲ್ ಅಸದುಲ್ಲಾನನ್ನು ಬಂಧಿಸಿತ್ತು. ೨೦೧೯ ರಲ್ಲಿ ಇದೇ ಮ್ಯಾಜೆಸ್ಟಿಕ್ ಏರಿಯಾದಲ್ಲಿ ಕೇಂದ್ರ ಅಪರಾಧ ವಿಭಾಗದ ಪೋಲಿಸ್ ಅಧಿಕಾರಿಗಳು ಮಹಮ್ಮದ್ ಅಕ್ರಮ ಎನ್ನುವ ಭಯೋತ್ಪಾದಕನನ್ನು ಬಂಧಿಸಿದ್ದರು. ಬೆಂಗಳೂರಿನ ಕಾಟನಪೇಟೆ ಮಸೀದಿಯಲ್ಲಿ ಆಶ್ರಯ ಪಡೆದಿದ್ದ ಬಾಂಗ್ಲಾದೇಶ ಮೂಲದ ಜಮಾತ್ ಉಲ್ ಮುಜಾಹಿದ್ದಿನ್ ಸಂಘಟನೆಯ ಸದಸ್ಯನನ್ನು ೨೦೨೦ ರಲ್ಲಿ ಪೊಲೀಸರು ಬಂಧಿಸಿದ್ದರು. ಹೀಗಿದ್ದರೂ ರೈಲು ನಿಲ್ದಾಣದ ಪ್ಯಾಟ್‌ಫಾರ್ಮದಲ್ಲಿ ಅನ್ಯಮತೀಯರ ಪ್ರಾರ್ಥನಾಸ್ಥಳಕ್ಕೆ ಅವಕಾಶ ಮಾಡಿ ಕೊಡುವುದು ಎಷ್ಟು ಸೂಕ್ತ ? ಕೂಡಲೇ ಅಲ್ಲಿನ ಅನಧಿಕೃತ ಪ್ರಾರ್ಥನಾಸ್ಥಳ ಮಾಡಲು ಅವಕಾಶ ನೀಡಿದವರ ಮೇಲೆ ಕ್ರಮ ಜರುಗಿಸಬೇಕು ಮತ್ತು ಅಲ್ಲಿ ಪ್ರಾರ್ಥನೆ ಮಾಡಲು ಅವಕಾಶ ನೀಡಬಾರದು, ಅದನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದಿದ್ದರೆ ತೀವ್ರ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಆಗ್ರಹಿಸಿದರು.

ಇತಿ ತಮ್ಮ ವಿಶ್ವಾಸಿ,
ಶ್ರೀ. ಮೋಹನ ಗೌಡ,
ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ,
(ದೂ. ಕ್ರ. ೭೨೦೪೦೮೨೬೦೯)

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..!