
ತೀರ್ಥಹಳ್ಳಿ : ತಾಲೂಕಿನ ಹೊನ್ನೆತಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ವರ್ಷದ ಕ್ಯಾಲೆಂಡರ್ ಪೋಷಕರಿಗೆ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಾಬಳ ಸಚೀಂದ್ರ ಹೆಗ್ಡೆ ಪ್ರಗತಿಪರ ಕೃಷಿಕರು,ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೊನ್ನೆತಾಳು ಇವರು ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶಾಲೆಯ ವಿನೂತನ ಚಟುವಟಿಕೆಗಳಿಗೆ ಸಹಾಯ ನೀಡುವುದಾಗಿ ತಿಳಿಸಿದರು.
ಎ.ಪಿ.ಎಂ.ಸಿ ತೀರ್ಥಹಳ್ಳಿ ನಿರ್ದೇಶಕರಾದ ಹಸಿರುಮನೆ ಮಹಾಬಲೇಶ್ ಇವರು ನಮ್ಮ ಶಾಲೆಯ ಪರಿಸರದ ಬಗ್ಗೆ ಸಂತಸ ವ್ಯಕ್ತಪಡಿಸಿ ಶಾಲೆಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿ ಶಾಲೆಯ ಯಾವುದೇ ಶೈಕ್ಷಣಿಕ ಚಟುವಟಿಕೆಗೆ ನೆರವಿನ ಕೊರತೆಗೆ ತೊಂದರೆಯಾಗದಂತೆ ನಮ್ಮ ಸಹಕಾರ ಎಂದಿಗೂ ಇರುತ್ತದೆಂದು ತಿಳಿಸಿದರು.
ಕಾಂತೇಶ್ ಮ್ಯಾನೇಜರ್ ಕೆನರಾ ಬ್ಯಾಂಕ್ ಆಗುಂಬೆ ಇವರು ಮಾತನಾಡಿ ಪ್ರತಿ ವರ್ಷ SC, ST ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವುದಾಗಿ ತಿಳಿಸಿದರು.
ಹೊನ್ನೇತಾಳು ಗ್ರಾಮ ಪಂಚಾಯತ್ ಸದಸ್ಯರಾದ ರಾಘವೇಂದ್ರ ಕುಂದಾದ್ರಿ ಇವರು ಮಾತನಾಡಿ ಪೋಷಕರು ತಮ್ಮ ಅಕ್ಕ ಪಕ್ಕದ ಮಕ್ಕಳನ್ನು ನಮ್ಮ ಶಾಲೆಗೆ ಸೇರಿಸಲು ಪ್ರೇರೇಪಿಸಬೇಕು ಎಂದು ತಿಳಿಸಿದರು.
.ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಮತ್ತು ಎಸ್ ಡಿ ಎಂ ಸಿ ಅಧ್ಯಕ್ಷರು,ಉಪಾಧ್ಯಕ್ಷರು, ಹಾಗೂ ಪೋಷಕರು ಮತ್ತು ಪ್ರೀತಿಯ ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….