
ಬೆಂಗಳೂರು: ಕರ್ನಾಟಕ ರಾಜ್ಯದ ಕರಾವಳಿಯಲ್ಲಿ ಶುರುವಾದ ಹಿಜಾಬ್, ಕೇಸರಿ ಶಾಲು ವಿವಾದ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹಬ್ಬಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆಯಲಿದೆ.
ಹಿಜಾಬ್ ಧರಿಸಿ ಪಾಠ ಕೇಳಲು ಅನುಮತಿ ನೀಡುವಂತೆ ಹೈಕೋರ್ಟ್ ಮೊರೆ :
ಉಡುಪಿಯ ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪಾಠ ಕೇಳಲು ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು ,ಇದರ ಜೊತೆಗೆ ಸಲ್ಲಿಕೆಯಾಗಿರುವ ನಾಲ್ಕು ರಿಟ್ ಅರ್ಜಿಗಳ ವಿಚಾರಣೆ ಕೂಡ ಹೈಕೋರ್ಟ್ನಲ್ಲಿ ಇಂದು ನ್ಯಾಯಮೂರ್ತಿ ಕೃಷ್ಣ ಎಸ್.
ದೀಕ್ಷಿತ್ ಅವರ ಏಕಸದಸ್ಯಪೀಠದಲ್ಲಿ ನಡೆಯಲಿದೆ.
ರಾಜ್ಯ ಸರ್ಕಾರ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ನೀತಿ ಕುರಿತಂತೆ ಸುತ್ತೋಲೆ ಹೊರಡಿಸಿದೆ:
ವಿವಾದವು ರಾಜ್ಯಾದ್ಯಂತ ವ್ಯಾಪಿಸುತ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಎಲ್ಲ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರಸಂಹಿತೆ ಕುರಿತಂತೆ ಸುತ್ತೋಲೆ ಹೊರಡಿಸಿದೆ.
ಆದರೆ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪಾಠ ಕೇಳಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ನಲ್ಲಿಂದು ವಿಚಾರಣೆ ನಡೆಯಲಿದೆ.
ಹೈಕೋರ್ಟ್ ನಲ್ಲಿ ರಾಜ್ಯ ಸರ್ಕಾರದ ಸುತ್ತೋಲೆಯನ್ನು ಪಾಲಿಸುವಂತೆ ಸೂಚಿಸುವ ಸಾಧ್ಯತೆ?
ಶಾಲಾ-ಕಾಲೇಜುಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದ ಧಾರ್ಮಿಕ ಕೇಂದ್ರಗಳಲ್ಲ ಇಲ್ಲಿ ಎಲ್ಲಾ ಸಮುದಾಯದವರು ಜಾತಿ ಭೇದ ಭಾವ ಮರೆತು ವ್ಯಾಸಂಗ ಮಾಡುತ್ತಿದ್ದಾರೆ. ಸಮವಸ್ತ್ರ ಧರಿಸುವ ಉದ್ದೇಶವೇ ಬಡವ-ಬಲ್ಲಿದ ಆ ಜಾತಿ ಈ ಜಾತಿ ಆ ಪಂಗಡ ಈ ಪಂಗಡ ಎಲ್ಲವನ್ನೂ ಮರೆತು ಎಲ್ಲರೂ ಒಂದೇ ಎನ್ನುವ ಸಾರುವ ಉದ್ದೇಶದಿಂದ ಹಾಗಾಗಿ ಒಬ್ಬೊಬ್ಬರು ಒಂದೊಂದು ವಸ್ತ್ರ ಧರಿಸಿ ಕೊಂಡು ಶಾಲಾ-ಕಾಲೇಜಿಗೆ ಬಂದರೆ ಅದಕ್ಕೆ ಅರ್ಥವಿರುವುದಿಲ್ಲ .
ಈ ನಿಟ್ಟಿನಲ್ಲಿ ಹಿಂದಿನ ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪುಗಳನ್ನು ಗಮನಿಸಿದಾಗ ಇಂದಿನ ತೀರ್ಪಿನಲ್ಲಿ ಕೂಡ ಎಲ್ಲರೂ ಒಂದೇ ಎನ್ನುವ ಸಾರುವ ಸಂದೇಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ.
##########################################################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….