
ಶಿವಮೊಗ್ಗ: ಇಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಿಂದ ನಡೆದ ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪನವರು ಬ್ಯಾಂಕಿನ ವತಿಯಿಂದ ರೂ.2,61,000/- ಗಳ ಚೆಕ್ ಅನ್ನು ಸಹಕಾರ ಶಿಕ್ಷಣ ನಿಧಿಗೆ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಬೆಂಗಳೂರು ಇವರಿಗೆ ,ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಹಾಲಪ್ಪ ಕೋಡಿಹಳ್ಳಿ ಇವರ ಮುಖಾಂತರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಹೆಚ್.ಎಲ್. ಷಡಾಕ್ಷರಿ, ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರು ಮತ್ತು ಬ್ಯಾಂಕಿನ ನಿರ್ದೇಶಕರಾದ ಎನ್.ಹೆಚ್. ಶ್ರೀಪಾದ್ ರಾವ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರು ಮತ್ತು ಬ್ಯಾಂಕಿನ ನಿರ್ದೇಶಕರೂ ಆದ ಡಾ. ಬಿ.ಡಿ. ಭೂಕಾಂತ್ , ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು ಹಾಗೂ ಬ್ಯಾಂಕಿನ ನಿರ್ದೇಶಕರಾದ ಬಸವಾನಿ ವಿಜಯದೇವ್ ಹಾಗೂ ಬ್ಯಾಂಕಿನ ಎಲ್ಲಾ ನಿರ್ದೇಶಕರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಉಪಸ್ಥಿತರಿದ್ದರು.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…..