
ಹಿಜಾಬ್ ಕೇಸರಿ ವಿವಾದ ನ್ಯಾಯಾಲಯದ ಮುಂದೆ ಇನ್ನೂ ಇತ್ಯರ್ಥವಾಗಿಲ್ಲ. ಇಂದು ಅಥವಾ ನಾಳೆ ತೀರ್ಪು ಹೊರಬೀಳುವ ಸಾಧ್ಯತೆ ಇದೆ. ಇದರ ಮಧ್ಯೆ ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಈ ನಡುವೆ ಶುಕ್ರವಾರ ಮತ್ತು ಮುಸ್ಲಿಂರ ಪವಿತ್ರ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಕರ್ನಾಟಕ ಹೈಕೋರ್ಟ್ ನಲ್ಲಿ ಹೊಸ ಅರ್ಜಿ ಸಲ್ಲಿಸಲಾಗಿದ್ದು.
ಅರ್ಜಿದಾರ ಡಾ.ವಿನೋದ್ ಕುಲಕರ್ಣಿ, ಮಧ್ಯಂತರ ಆದೇಶದ ಭಾಗವಾಗಿ ಮುಸ್ಲಿಂ ಹುಡುಗಿಯರು ಕನಿಷ್ಠ ಶುಕ್ರವಾರ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಶುಕ್ರವಾರ ಮುಸ್ಲಿಮರಿಗೆ ಅತ್ಯಂತ ಮಂಗಳಕರ ದಿನ ಹಾಗೂ ರಂಜಾನ್ ತಿಂಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಮಾಡಿ ಆದೇಶ ಹೊರಡಿಸಬೇಕು ಎಂದು ಮನವಿ ಮಾಡುತ್ತೇವೆ ಎಂದು ಹೂಸ ಅರ್ಜಿ ಸಲ್ಲಿಸಲಾಗಿದೆ .
ಇದರ ಮಧ್ಯೆ ಹೈಕೋರ್ಟ್ ಅಂತಿಮವಾಗಿ ತೀರ್ಪು ನೀಡುವವರೆಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅಥವಾ ಕೇಸರಿ ಶಾಲುಗಳನ್ನು ಧರಿಸುವಂತಿಲ್ಲ ಎಂದು ಮಧ್ಯಂತರ ತೀರ್ಪಿನಲ್ಲಿ ತಿಳಿಸಿದೆ.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…