
ಬೆಂಗಳೂರು: ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸುತ್ತಿರುವ ಕಾಂಗ್ರೆಸ್ ಪಕ್ಷ ಸದನದ ಕಾರ್ಯಕಲಾಪಗಳನ್ನು ನಡೆಯಲು ಬಿಡದೆ ಆಹೋರಾತ್ರಿ ಧರಣಿ ನಡೆಸುತ್ತಿದ್ದು. ನಾಳೆಯಿಂದ ರಾಜ್ಯಾದ್ಯಂತ ಧರಣಿ ನಡೆಸುವುದಾಗಿ ಹೇಳಿಕೆ ನೀಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಆಡಳಿತ ಬಿಜೆಪಿ ಪಕ್ಷ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ವಾಗಿ ಯೋಜನೆ ರೂಪಿಸಲು ನಾಳೆ ಬೆಳಿಗ್ಗೆ 7:00 ಗಂಟೆಗೆ ತುರ್ತು ಸಭೆ ಕರೆದಿದ್ದು.
ಈ ಸಭೆಯಲ್ಲಿ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ವಾಗಿ ಯೋಜನೆ ರೂಪಿಸುವುದು, ಸಾಧ್ಯವಾದರೆ ಸಚಿವ ಈಶ್ವರಪ್ಪನವರ ಮನವೊಲಿಸಿ ರಾಜೀನಾಮೆ ತೆಗೆದುಕೊಂಡು ಸದ್ಯಕ್ಕೆ ಈ ಸಮಸ್ಯೆಗೆ ಇತಿಶ್ರೀ ಹಾಡುವ ಸಾಧ್ಯತೆ ಇದೆ.
ಬಿಜೆಪಿಯ ಪ್ರಮುಖರು ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ?
ನಾಳೆ ಬೆಂಗಳೂರಿನಲ್ಲಿ ನಡೆಯುವ ತುರ್ತು ಸಭೆಯಲ್ಲಿ ಬಿಜೆಪಿಯ ಪ್ರಮುಖರು ಪಾಲ್ಗೊಳ್ಳುವ ಸಾಧ್ಯತೆ ಇದ್ದು. ಉಳಿದಂತೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, , ಸಚಿವ ಈಶ್ವರಪ್ಪ ಭಾಗವಹಿಸಲಿದ್ದಾರೆ.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….