
ಶಿವಮೊಗ್ಗ: ನಗರದಲ್ಲಿ ನಿನ್ನೆ ನಡೆದ ಹರ್ಷ ಎಂಬ ಬಜರಂಗದಳದ ಯುವಕನ ಹತ್ಯೆಗೆ ಸಂಬಂಧಿಸಿದಂತೆ. ಶಿವಮೊಗ್ಗ ನಗರದಾದ್ಯಂತ ಬಿಗಿ ವಾತಾವರಣ ನಿರ್ಮಾಣಗೊಂಡಿದ್ದು. ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳು ನಡೆದಿವೆ. ಟೈರ್ ಸುಟ್ಟು ಬೆಂಕಿ ಹಾಕಿರುವ ಘಟನೆಗಳು ಜರುಗಿವೆ.
ಇಬ್ಬರು ಪತ್ರಕರ್ತರಿಗೆ ತಲೆಗೆ ತೀವ್ರ ಪೆಟ್ಟು:
ಗಲಾಟೆ ದೃಶ್ಯಗಳನ್ನು ಸೆರೆ ಹಿಡಿಯಲು ಹೋದ ಇಬ್ಬರು ಪತ್ರಿಕಾ ಛಾಯಾಗ್ರಾಹಕರಿಗೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.
ಸ್ಥಳದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿ ಅವಲೋಕಿಸಿ ತಿರುವ ಎಡಿಜಿಪಿ ಮುರುಗನ್:
ಘಟನೆ ತೀವ್ರ ಸ್ವರೂಪ ಪಡೆದುಕೊಳ್ಳುವ ವಿಷಯ ತಿಳಿದಂತೆ ಶಿವಮೊಗ್ಗಕ್ಕೆ ತೆರಳಿ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ಅವಲೋಕಿಸುತಿರುವ ಮುರುಗನ್ ಅವರು ಪತ್ರಿಕೆ ಜೊತೆ ಮಾತನಾಡಿ ,
ಪೊಲೀಸರು ಹಾಗೂ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಕೆಲವೊಂದು ಕಡೆ ಸಣ್ಣಪುಟ್ಟ ಘಟನೆಗಳಾಗಿವೆ. ಆ ಸ್ಥಳಗಳಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
ಹರ್ಷ ಅವರ ಪಾರ್ಥಿವ ಶರೀರದ ಮೆರವಣಿಗೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿ ಆಸ್ತಿಪಾಸ್ತಿಗೆ ಧಕ್ಕೆ ಮಾಡಿದವರು ಯಾರೇ ಆದರೂ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ನಗರದಲ್ಲಿ ಶಾಂತಿ ಕಾಪಾಡಿ ಎಡಿಜಿಪಿ ಮುರುಗನ್ ಮನವಿ:

ಇದೇ ವೇಳೆ ಎಡಿಜಿಪಿ ಮುರುಗನ್ ಅವರು ಸಾರ್ವಜನಿಕರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ನಿಮ್ಮ ನಗರಕ್ಕೆ ಬೆಂಕಿ ಹಚ್ಚಬೇಡಿ. ಆಸ್ತಿಪಾಸ್ತಿ ಹಾಳುಮಾಡಿಕೊಳ್ಳುವುದು ಬೇಡ ನಾವು ನಿಮ್ಮ ಜತೆ ಇರುತ್ತೇವೆ ಯಾರು ಗಾಬರಿಯಾಗುವ ಅವಶ್ಯಕತೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಶಕ್ಕೆ:
ಭಜರಂಗದಳ ಕಾರ್ಯಕರ್ತ ಹರ್ಷ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ತನಿಖೆ ಕೈಗೊಂಡು ಇಬ್ಬರನ್ನು ಬಂಧಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.ಇದುವರೆಗಿನ ತನಿಖೆ ಪ್ರಕಾರ, ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಕಂಡುಬರುತ್ತಿದೆ ಎಂದು ಪೊಲೀಸ್ ಮಾಹಿತಿಗಳಿಂದ ತಿಳಿದು ಬರುತ್ತಿದ್ದು. ಉನ್ನತ ತನಿಖೆಯಿಂದಷ್ಟೇ ಸತ್ಯ ಬಹಿರಂಗವಾಗ ಬೇಕಾಗಿದೆ.
ಶಿವಮೊಗ್ಗದ ಒಂದು ಪೊಲೀಸ್ ತಂಡ ಬೆಂಗಳೂರಿಗೆ ಹೋಗಿದ್ದು, ಸ್ಥಳೀಯ ಪೊಲೀಸರ ನೆರವಿನಿಂದ ಜೆಜೆ ನಗರದಲ್ಲಿ ಶಂಕಿತ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಒಂದು ತಂಡ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿಗೆ ಹೋಗಿದ್ದು, ಅಲ್ಲಿನ ಬಳ್ಳಾರಿ ಕ್ಯಾಂಪ್‍ನಲ್ಲಿ ಅಡಗಿ ಕುಳಿತಿದ್ದ ಆರೋಪಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಒಟ್ಟಾರೆಯಾಗಿ ಶಿವಮೊಗ್ಗದ ಪ್ರಸ್ತುತ ಪರಿಸ್ಥಿತಿ ಅಲ್ಲಲ್ಲಿ ಸಣ್ಣಪುಟ್ಟ ಗಲಾಟೆಗಳು ಆಗುತ್ತಿದ್ದರು ಕೂಡ ತೀವ್ರ ಸ್ವರೂಪವನ್ನು ಪಡೆದುಕೊಂಡಿಲ್ಲ.
ಪೊಲೀಸ್ ಇಲಾಖೆ ಎಲ್ಲಾ ತರದ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಂಡು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…