
ತೀರ್ಥಹಳ್ಳಿ: ಇಂದು ಪಟ್ಟಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಮಾಡುವವರಿಗೆ ಹಾಗೂ ಮಾರಾಟಗಾರರಿಗೆ COTPA ಕಾಯ್ದೆಯ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಶಾಲಾ ವಿದ್ಯಾರ್ಥಿಗಳಿಂದ “ಗುಲಾಬಿ ಆಂದೋಲನವನ್ನು” ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ತಾಶೀಲ್ದಾರ್ ಡಾಕ್ಟರ್ ಶ್ರೀಪಾದ್ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು, ಜಿಲ್ಲಾ ಸಲಹೆಗಾರರು, ಸಮಾಜಕಾರ್ಯಕರ್ತರು,ಆರೋಗ್ಯ ಇಲಾಖೆ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬಸ್ ನಿಲ್ದಾಣದಿಂದ ತಹಶೀಲ್ದಾರ್ ಕಚೇರಿಯವರೆಗೆ ಜಾಥಾವನ್ನ ಹಮ್ಮಿಕೊಳ್ಳಲಾಯಿತು.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….