
ತೀರ್ಥಹಳ್ಳಿ: ಇಂದು ಅಂತರಾಷ್ಟ್ರೀಯ ಮಹಿಳೆಯರ ದಿನಾಚರಣೆ ಇದರ ಪ್ರಯುಕ್ತ ತೀರ್ಥಹಳ್ಳಿಯಲ್ಲಿ ತಾಲೂಕು ಆರೋಗ್ಯ ಇಲಾಖೆ ನೌಕರರ ಸಂಘದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಯಶಸ್ವಿಯಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕ ಮಹಿಳೆಯರ ದಿನಾಚರಣೆ ಉದ್ದೇಶಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹಾಗೂ ಆರೋಗ್ಯ ಇಲಾಖಾ ನೌಕರರ ಸಂಘದ ಅಧ್ಯಕ್ಷ ಟಿ ವಿ ಸತೀಶ, ಮಹಿಳೆಯ ಹಕ್ಕು ಮತ್ತು ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸುವ ದಿಸೆಯಲ್ಲಿ1911 ರ ಮಾರ್ಚ್ 8 ರಂದು ಕ್ಲಾರಾ ಜೆಟ್ ಕಿನ್ ಎಂಬ ದಿಟ್ಟ ಮಹಿಳೆಯಿಂದಾಗಿ ಆರಂಭಗೊಂಡ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಇಂದು ವಿಶ್ವದಾದ್ಯಂತ ಆಚರಿಸಲ್ಪಡುತ್ತಿದೆ. ವಿವಿಧ ಒತ್ತಡಗಳ ನಡುವೆಯೂ ಕುಟುಂಬ ಮಾತ್ರವಲ್ಲ ವಿವಿಧ ಕ್ಷೇತ್ರಗಳಲ್ಲಿನ ಜವಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಕುಟುಂಬ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡಲು ಶ್ರಮಿಸುತ್ತಿರುವ ಸಹೃದಯಿ ಮಹಿಳೆಯರಿಗೆ ಒಂದು ಪುಟ್ಟ ಧನ್ಯವಾದಗಳನ್ನು ಹೇಳುವುದು ನಮ್ಮ ಕರ್ತವ್ಯ ಆ ದಿಸೆಯಲ್ಲಿ ಈ ಪುಟ್ಟ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಲ್ಲಾ ಸಹೃದಯಿ ಮಹಿಳೆಯರ ಪರವಾಗಿ ಸಾಂಕೇತಿಕವಾಗಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆಶಾಲತಾ, ಪ್ರಾ.ಆ.ಕೇಂದ್ರ ಹುಂಚದಕಟ್ಟೆಯ ವೈದ್ಯಾಧಿಕಾರಿ ಡಾ.ಶೋಭಾದೇವಿ, ಪ್ರಾ.ಆ.ಕೇಂದ್ರ ಮಾಳೂರಿನ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಶೋಧ,ಪ್ರಾ.ಆ.ಕೇಂದ್ರ ಅರಳಸುರಳಿಯ ಆಶಾ ಕಾರ್ಯಕರ್ತೆ ಪ್ರೇಮರವರನ್ನು ಗೌರವಿಸಲಾಯಿತು ಮತ್ತು ಸಭೆಯಲ್ಲಿದ್ದ ಎಲ್ಲಾ ಮಹಿಳೆಯರಿಗೂ ಹೂಗುಚ್ಚ ನೀಡಿ ಅಭಿನಂದಿಸಲಾಯಿತು.
ವಿಡಿಎಲ್ ಉಪನಿರ್ದೇಶಕ ಡಾ.ಗುಡದಪ್ಪ ಕಸಬಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಟರಾಜ್,ಜಿಲ್ಲಾ ಮೇಲ್ವಿಚಾರಕ ವೆಂಕಟಕೃಷ್ಣ, ವೈದ್ಯಾಧಿಕಾರಿಗಳಾದ ಡಾ.ಅನಿಕೇತನ್, ಡಾ.ಸುರೇಶ್, ತಾಲ್ಲೂಕು ಆರೋಗ್ಯ ಇಲಾಖಾ ನೌಕರರ ಸಂಘದ ಖಜಾಂಚಿ ಎ ಎಂ ಜಗದೀಶ್, ಜಂಟಿ ಕಾರ್ಯದರ್ಶಿ ಈಶ್ವರ್, ತಾಲ್ಲೂಕು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಕಾರ್ಯದರ್ಶಿ ಕೃಷ್ಣಮೂರ್ತಿ ಅತಿಥಿಗಳಾಗಿ ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಆರೋಗ್ಯ ಸಂಸ್ಥೆಗಳ ವೈದ್ಯಾಧಿಕಾರಿಗಳು,ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…