
ಬಹು ನಿರೀಕ್ಷಿತ ಪಂಚರಾಜ್ಯಗಳ ಚುನಾವಣೆಯ ತಿರ್ಪು ಇಂದು ಹೊರಬಿದ್ದಿದೆ. 4 ರಾಜ್ಯಗಳಲ್ಲಿ ಬಹುತೇಕ ಬಿಜೆಪಿ ಅಧಿಕಾರದ ಗದಗಿಗೆ ಏರುವ ಸಾಧ್ಯತೆ ಇದೆ.
ಇದರ ಸಂಬಂಧವಾಗಿ ಶಿವಮೊಗ್ಗದ ಸಂಸದರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ಪುತ್ರರಾದ ಬಿವೈ ರಾಘವೇಂದ್ರ ರವರು ಮತದಾರರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದು ಪ್ರಧಾನಿ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
• ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಅಧಿಕಾರದಲ್ಲಿದ್ದ 4 ರಾಜ್ಯಗಳಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ. ಚುನಾವಣಾ ಫಲಿತಾಂಶಗಳನ್ನು ಗಮನಿಸಿದಾಗ ದೇಶದ ಜನರು ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ನಾಯಕತ್ವವನ್ನು ಒಪ್ಪಿಕೊಂಡಿದ್ದಾರೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಕಾಂಗ್ರೆಸ್ ಪಕ್ಷವು ದಿನೇ ದಿನೇ ತನ್ನ ಅಸ್ಥಿತ್ವವನ್ನು ಕಳೆದುಕೊಂಡು ಸದ್ಯದಲ್ಲಿಯೇ ದೇಶದಲ್ಲಿ ಸಂಪೂರ್ಣವಾಗಿ ಅವನತಿಯಾಗಲಿದೆ ಎಂಬುದನ್ನು ಈ ಚುನಾವಣೆಯ ಫಲಿತಾಂಶವು ಮತ್ತೊಮ್ಮೆ ಸಾಬೀತುಪಡಿಸಿದೆ. ಉತ್ತರ ಪ್ರದೇಶ, ಗೋವಾ, ಮಣಿಪುರ, ಉತ್ತರಖಂಡ ರಾಜ್ಯಗಳ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಆ ರಾಜ್ಯಗಳ ಮತದಾರರಿಗೆ ಸಂಸದರು ಧನ್ಯವಾದಗಳನ್ನು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಜೀ ಹಾಗೂ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಜೀ ಹಾಗೂ ಪಕ್ಷದ ಎಲ್ಲಾ ಮುಖಂಡರಿಗೆ, ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305….