ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಎಂ.ಬಿ. ಚನ್ನವೀರಪ್ಪ ಇವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ “ ಸಹಕಾರ ರತ್ನ ” ಪ್ರಶಸ್ತಿಯನ್ನು ನೀಡಲಾಗಿದ್ದು ದಿನಾಂಕ 20.03.2022 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯ ಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಸಹಕಾರ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಿದ್ದಾರೆ.
ಎಂ.ಬಿ.ಚನ್ನವೀರಪ್ಪ ಇವರು 1994-95 ನೇ ಸಾಲಿನಿಂದ ಸಹಕಾರ ಕ್ಷೇತ್ರದಲ್ಲಿ ಅವಿರತವಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದು, ದಿ ಅರ್ಬನ್ ಕೋ-ಅಪರೇಟಿವ್ ಬ್ಯಾಂಕ್ ಲಿ. ಶಿಕಾರಿಪುರ ಇದರಲ್ಲಿ ಕಳೆದ 28 ವರ್ಷಗಳಿಂದ ನಿರಂತರವಾಗಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು ದಿ.01.04.2015 ರಿಂದ 02.05.2017 ರವರೆಗೆ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿರುತ್ತಾರೆ. ಅಲ್ಲದೇ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರಿನಲ್ಲಿ 7 ವರ್ಷಗಳ ಕಾಲ ನಿರ್ದೇಶಕರಾಗಿ, ಮಲೆನಾಡು ಅಡಿಕೆ ಮಾರಾಟ ಸಹಕಾರ ಸಂಘದಲ್ಲಿ 5 ವರ್ಷಗಳ ಕಾಲ ನಿರ್ದೇಶಕರಾಗಿ, ಟಿ.ಎ.ಪಿ.ಸಿ,ಎಂ.ಎಸ್ ಶಿಕಾರಿಪುರದಲ್ಲಿ 10 ವರ್ಷಗಳ ಕಾಲ ನಿರ್ದೇಶಕಾಗಿಯೂ ಸೇವೆ ಸಲ್ಲಿಸಿರುತ್ತಾರೆ.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ 1998-99 ರಲ್ಲಿ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ್ದು 2006 ರಿಂದ 2010 ರವರೆಗೆ ಹಾಗೂ 2019 ರಿಂದ 2020 ರವರೆಗೆ ಉಪಾಧ್ಯಕ್ಷರಾಗಿಯೂ, ಸೇವೆಸಲ್ಲಿಸಿರುತ್ತಾರೆ, ಪ್ರಸ್ತುತ ನವೆಂಬರ್-2020 ರಿಂದ ಬ್ಯಾಂಕಿನ ಅಧ್ಯಕ್ಷರಾಗಿದ್ದು, ಬ್ಯಾಂಕ್ ಹಿಂದೆಂದಿಗಿಂತಲೂ ಹೆಚ್ಚಿನ ಲಾಭ ಹಾಗೂ ಪ್ರಗತಿಯನ್ನು ಸಾಧಿಸುವಲ್ಲಿ ಕಾರಣಕರ್ತರಾಗಿದ್ದಾರೆ.
ಎಂ.ಬಿ. ಚನ್ನವೀರಪ್ಪ ಇವರಿಗೆ ಸಂದ ಈ ಪುರಸ್ಕಾರವು ಜಿಲ್ಲೆಯ ಸಹಕಾರಿ ಕ್ಷೇತ್ರಕ್ಕೆ ಸಂದ ಗೌರವವಾಗಿದ್ದು ಬ್ಯಾಂಕಿನ ಆಡಳಿತ ಮಂಡಳಿ, ಬ್ಯಾಂಕಿನ ಸಿಬ್ಬಂದಿಗಳು ಹಾಗೂ ಜಿಲ್ಲೆಯ ಎಲ್ಲಾ ಸಹಕಾರಿ ಸಂಸ್ಥೆಗಳ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
###################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305...