ಮುಖ್ಯಮಂತ್ರಿಗಳು ಬಜೆಟ್ ಮೇಲಿನ ಉತ್ತರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನದ ಘೋಷಣೆ ಮಾಡುವ ಮೂಲಕ ಸಮಾನ ಕೆಲಸಕ್ಕೆ ಸಮಾನ ವೇತನದ ರಾಜ್ಯ ಸರ್ಕಾರಿ ನೌಕರರ ಬಹು ವರ್ಷಗಳ ಕನಸು ನನಸಾಗುವ ನಿಟ್ಟಿನಲ್ಲಿ ಐತಿಹಾಸಿಕ ನಿರ್ಣಯ ಕೈಗೊಂಡ ಬಗ್ಗೆ ತೀರ್ಥಹಳ್ಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘ ಹರ್ಷ ವ್ಯಕ್ತಪಡಿಸಿದೆ.
ಈ ಬಗ್ಗೆ ಸಮನ್ವಯ ತತ್ವದ ಸ್ಪಂದನಶೀಲ ನಾಯಕ, ನೌಕರ ಸ್ನೇಹಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರಿಗೆ, ಈ ಕಾರ್ಯಕ್ಕೆ ಸಹಕರಿಸಿದ ಸಮಷ್ಠಿಪ್ರಜ್ಞೆಯ ಜನನಾಯಕ, ನಿಕಟಪೂರ್ವ ಮುಖ್ಮಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪನವರಿಗೆ, ರಾಜ್ಯ ಸರ್ಕಾರದ ಸಹೃದಯೀ ಸಚಿವರುಗಳಿಗೆ,ಒಕ್ಕೊರಲಿನಿಂದ ಬೆಂಬಲಿಸಿದ ಎಲ್ಲಾ ಶಾಸಕರುಗಳಿಗೆ,ಸರ್ಕಾರದ ಹಿರಿಯ ಅಧಿಕಾರಿಗಳಿಗೆ, ಈ ಬಗ್ಗೆ ವಿಶೇಷ ಪರಿಶ್ರಮವಹಿಸಿರುವ ರಾಜ್ಯ ಸರ್ಕಾರಿ ನೌಕರರ ಕಣ್ಮಣಿ, ಪಾದರಸ ಚಟುವಟಿಕೆಯ ಕ್ರಿಯಾಶೀಲ ರಾಜ್ಯಾಧ್ಯಕ್ಷರಾದ ಸಿ ಎಸ್ ಷಡಾಕ್ಷರಿಯವರಿಗೆ ಹಾಗೂ ಸಹಕರಿಸಿದ ಎಲ್ಲಾ ಸಹೃದಯಿ ಬಂಧುಗಳಿಗೆ ಸಮಸ್ತ ಸರ್ಕಾರಿ ನೌಕರರ ಪರವಾಗಿ ಸಂಘದ ಅಧ್ಯಕ್ಷ ಟಿ ವಿ ಸತೀಶ,ಕಾರ್ಯದರ್ಶಿ ರಾಮು ಬಿ,ಸಂಘದ ಎಲ್ಲಾ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…