
ಶಿವಮೊಗ್ಗ: ಇಡೀ ದೇಶದಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂ ಯುವಕ ಹರ್ಷನ ಹತ್ಯೆ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದು.
ನಗರದ ನ್ಯೂ ಮಂಡ್ಲಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ, ಮಧು ಎಂಬ (21) ವರ್ಷ ವಯಸ್ಸಿನ ಯುವಕನ ಮೇಲೆ ಅನ್ಯಕೋಮಿನ 6 ಯುವಕರ ಗುಂಪೊಂದು ಹಲ್ಲೆ ನಡೆಸಿದೆ.
ಹೂವಿನ ವ್ಯಾಪಾರಿ ಆಗಿರುವ ಮಧು ಮೇಲೆ ಹಲ್ಲೆ:
ಹಲ್ಲೆಗೊಳಗಾಗಿರುವ ಯುವಕ ಮಧು ಹೂವಿನ ವ್ಯಾಪಾರಿ ಆಗಿದ್ದು.ಮಂಡ್ಲಿ ಬಡಾವಣೆಯಲ್ಲಿ ಹೂವು ವಿತರಣೆಗೆ ಹೋಗಿದ್ದಾನೆ. ಈ ವೇಳೆ ಲಾಂಗು-ಮಚ್ಚು ಝಳಪಿಸುತ್ತ ಓಡಿಸಿಕೊಂಡು ಬಂದ ಅನ್ಯಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ.
ಕಿಡ್ನಿ ಆಪರೇಷನ್ ಮಾಡಿಕೊಂಡ ಯುವಕನ ಮೇಲೆ ಅದೇ ಜಾಗದಲ್ಲಿ ಹಲ್ಲೆ:
ಹಲ್ಲೆಗೊಳಗಾಗಿರುವ ಯುವಕ ಮಧುಗೆ ಮೊದಲು ಕಿಡ್ನಿ ಆಪರೇಷನ್ ಆಗಿತ್ತು ಈಗ ಅದೇ ಜಾಗಕ್ಕೆ ಯುವಕರ ಗುಂಪೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು.
ಮೆಗ್ಗಾನ್ ಆಸ್ಪತ್ರೆಯಲ್ಲಿ ಮಧುವನ್ನು ದಾಖಲಿಸಲಾಗಿದ್ದು ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಗಳು ಆಗ್ರಹ ಮಾಡಿದ್ದಾರೆ:
ಗಾಯಾಳು ಯುವಕ ಮಧು ವನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆ ಮುಖಂಡರುಗಳು ಆಗ್ರಹ ಮಾಡಿದ್ದಾರೆ.
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305...