
ಹುಬ್ಬಳ್ಳಿ: ಇಂದು ಗೃಹಸಚಿವರಾದ ಆರಗ ಜ್ಞಾನೇಂದ್ರ ಅವರು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರ ಜೊತೆ ಗಲಭೆ ನಡೆದ ಸಂದರ್ಭದಲ್ಲಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಳೇ ಹುಬ್ಬಳ್ಳಿಯ ದಿಡ್ಡಿ ಓಣಿಯ ಹನುಮಾನ್ ದೇವಸ್ಥಾನಕ್ಕೆ ಗೃಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಡಿಜೆ ಹಳ್ಳಿ ಕೆಜಿ ಹಳ್ಳಿ ಪ್ರಕರಣಕ್ಕೆ ಹೋಲಿಸಿದ ಗೃಹ ಸಚಿವರು:
ಹುಬ್ಬಳ್ಳಿಯಲ್ಲಿ ನಡೆದ ಕೋಮುಗಲಭೆ ಯಾಕೆ ಬೇಟಿ ನೀಡಿದ ಗೃಹಸಚಿವರು ನಂತರ ಮಾತನಾಡುತ್ತಾ ಹುಬ್ಬಳ್ಳಿಯ ಪೊಲೀಸರನ್ನು ಅಭಿನಂದಿಸುತ್ತೇನೆ. ಏಕೆಂದರೆ ಸುಮಾರು ಸಾವಿರ ಜನ ಇದ್ದ ಗುಂಪನ್ನು ನಿಯಂತ್ರಿಸಿದ್ದಾರೆ. ಆಗುತ್ತಿದ್ದ ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಇಲ್ಲವಾದಲ್ಲಿ ಡಿಜೆ ಹಳ್ಳಿ ಕೆಜಿಹಳ್ಳಿ ಘಟನೆ ಇಲ್ಲಿ ಪುನರಾವರ್ತನೆ ಆಗುವ ಸಾಧ್ಯತೆ ಇತ್ತು. ಅದನ್ನು ಹುಬ್ಬಳ್ಳಿಯ ಪೊಲೀಸರು ತಡೆದಿದ್ದು ಕೆಲವೊಬ್ಬ ಪೊಲೀಸರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಪ್ರಕರಣವನ್ನು ತನಿಖೆ ಗೆ ವಯಸುತ್ತಿದ್ದು. ಈ ಪ್ರಕರಣದಲ್ಲಿ ಯಾವುದೇ ಸಂಘಟನೆಗಳ ಪಾತ್ರವಿದ್ದರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಶಾಂತಿ-ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಗೃಹ ಸಚಿವರ ಭೇಟಿಯ ಸಂದರ್ಭದಲ್ಲಿ ಶಾಸಕರಾದ ಜಗದೀಶ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿ ಮುಖಂಡರು ಸಾಥ್ ನೀಡಿದರು. ಸ್ಥಳದಲ್ಲಿ 144 ನಿಷೇಧಾಜ್ಞೆ ಜಾರಿಯಲ್ಲಿದ್ದರೂ ನೂರಾರು ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಮುಖಂಡರುಗಳು ಸೇರಿದ್ದರು.
ಇದು ಉದ್ದೇಶಪೂರ್ವಕವಾಗಿ ಆದ ಗಲಭೆ ಎನ್ನುವ ಮಾಹಿತಿಗಳು ಲಭ್ಯವಾಗಿದ್ದು ಇದರ ಹಿಂದೆ ಯಾರಿದ್ದಾರೆ ಇವರ ಉದ್ದೇಶವೇನು? ಎನ್ನುವ ಮಾಹಿತಿಗಳು ತನಿಖೆಯಿಂದಷ್ಟೇ ಬಹಿರಂಗವಾಗಬೇಕು .
ರಘುರಾಜ್ ಹೆಚ್.ಕೆ,….9449553305….
#####################################