
ಶಿವಮೊಗ್ಗ:- ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಕೋಟ್ಯಂತರ ರೂ ಗಳ ಸಾರ್ವಜನಿಕ ತೆರಿಗೆ ಹಣ ಬಳಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆ ಮನೆಯಿಂದ ಕಸಗಳನ್ನು ಸಂಗ್ರಹಣೆ ಮಾಡಿ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಾಗಿಸುವುದಕ್ಕಾಗಿ ಬಳಸದೇ ಕೇವಲ ಗ್ರಾಮ ಸಭೆ, ಇನ್ನಿತರ ಸಭೆ ಸಮಾರಂಭಗಳಿಗೆ ಬಳಸುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ಟೀಕೆ ಟಿಪ್ಪಣಿಗಳು ಕೇಳಿಬರತ್ತಿದ್ದು .ಶಿವಮೊಗ್ಗ ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ವೈಶಾಲಿ ವಿರುದ್ಧ ವ್ಯಾಪಕ ಟೀಕೆ ಟಿಪ್ಪಣಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ, ಅಷ್ಟೇ ಅಲ್ಲದೇ ಹಿಂದಿನ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರ ಕಾಲದಲ್ಲಿ ತ್ಯಾಜ್ಯ ವಿಲೇವಾರಿ ವಾಹನ ಖರೀದಿಯಲ್ಲಿ ಅಕ್ರಮ ನೆಡೆದಿರಬಹುದು ಎಂದು ಶಂಕೆಯನ್ನು ಹಲವರು ವ್ಯಕ್ತಪಡಿಸುತ್ತಿದ್ದು.
ಇನ್ನಾದರೂ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೇಲ್ವಮಣಿಯವರು ಶಿವಮೊಗ್ಗ ಜಿಲ್ಲೆಯಲ್ಲಿರುವ ಗ್ರಾಮ ಪಂಚಾಯಿತಿಗಳಿಗೆ ಸಾರ್ವಜನಿಕ ತೆರಿಗೆ ಹಣ ಬಳಸಿ ಖರೀದಿಸಿದ ತ್ಯಾಜ್ಯ ವಿಲೇವಾರಿ ವಾಹನ ಸದುಪಯೋಗವಾಗುವಂತೆ ಕ್ರಮ ಕೈಗೊಳ್ಳಲಿ ಎಂಬುದು ಶಿವಮೊಗ್ಗ ಜಿಲ್ಲೆಯ ಪ್ರಜ್ಞಾವಂತರ ನಾಗರಿಕರ ಮನವಿ…
✒️ ಓಂಕಾರ ಎಸ್. ವಿ. ತಾಳಗುಪ್ಪ…
############₹####₹₹₹₹₹₹₹₹###########₹₹₹
ಸುದ್ದಿ ನೀಡಲು ಸಂಪರ್ಕಿಸಿ::9449553305…