Wednesday, April 30, 2025
Google search engine
Homeಶಿವಮೊಗ್ಗಮುಂಗಾರು ಮಳೆ ಎದುರಿಸಲು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ// ಸೆಲ್ವಮಣಿ ಆದೇಶ..!!

ಮುಂಗಾರು ಮಳೆ ಎದುರಿಸಲು ಎಲ್ಲಾ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ// ಸೆಲ್ವಮಣಿ ಆದೇಶ..!!

ಶಿವಮೊಗ್ಗ: ಜಿಲ್ಲಾಧಿಕಾರಿಗಳಾದ ಡಾ// ಸೆಲ್ವಮಣಿ ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಸಂಭವಿಸಬಹುದಾದ ಅಪಾಯಗಳನ್ನು ಎದುರಿಸಲು ಎಲ್ಲಾ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಗಾರು ಎದುರಿಸಲು ಕೈಗೊಳ್ಳುವ ಕ್ರಮಗಳ ಕುರಿತು ಕಾರ್ಯ ಯೋಜನೆಯನ್ನು ವಾರದ ಒಳಗಾಗಿ ಸಲ್ಲಿಸುವಂತೆ ಅವರು ತಿಳಿಸಿದರು.

ಅಗತ್ಯವಿದ್ದರೆ ಕಾಳಜಿ ಕೇಂದ್ರಗಳು 24 ×7 ಸಹಾಯ ಕೇಂದ್ರಗಳನ್ನು ತೆರೆಯುವಂತೆ ಸೂಚನೆ:

ನಗರ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಬಹುದಾದ ಸೂಕ್ಷ್ಮ ಪ್ರದೇಶಗಳನ್ನು ಮೊದಲೇ ಗುರುತಿಸಿ ಸೂಕ್ತ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಬಿದ್ದರೆ ಕಾಳಜಿ ಕೇಂದ್ರ ತೆರೆಯಬಹುದಾದ ಸ್ಥಳಗಳನ್ನು ಗುರುತಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಅತಿವೃಷ್ಟಿ ಸಂದರ್ಭದಲ್ಲಿ ಸಾರ್ವಜನಿಕರು ನೆರವಿಗಾಗಿ ಸಂಪರ್ಕ ಮಾಡಲು 24×7 ಸಹಾಯಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಬೇಕು. ಪರಿಹಾರ ಕಾರ್ಯಗಳನ್ನು ನಡೆಸಲು ಕಾರ್ಯಪಡೆಯನ್ನು ರಚಿಸಿ ಅವರಿಗೆ ಸೂಕ್ತ ತರಬೇತಿಯನ್ನು ನೀಡಬೇಕು. ಕಾರ್ಯಪಡೆಯಲ್ಲಿ ಪೊಲೀಸ್, ಕಂದಾಯ, ಆರೋಗ್ಯ ಸೇರಿದಂತೆ ಎಲ್ಲಾ ಪ್ರಮುಖ ಇಲಾಖೆಗಳ ಪ್ರತಿನಿಧಿಗಳು ಇರಬೇಕು ಎಂದು ಹೇಳಿದರು.

ಆರೋಗ್ಯ ಇಲಾಖೆ ಸರ್ವ ಸನ್ನದ್ಧರಾಗಿರಬೇಕು:

ಜಲಾಶಯಗಳ ನೀರಿನ ಮಟ್ಟದ ಮಾಹಿತಿಯನ್ನು ನಿರಂತರವಾಗಿ ಅಧಿಕಾರಿಗಳ ನಡುವೆ ಹಂಚಿಕೊಳ್ಳಬೇಕು. ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುವ ಸಾಕಷ್ಟು ಪೂರ್ವದಲ್ಲಿ ಮಾಹಿತಿಯನ್ನು ಒದಗಿಸಬೇಕು. ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಸದಾ ಸನ್ನದ್ಧವಾಗಿರಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತದ ಔಷಧ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಗಾಳಿ ಮಳೆಯಿಂದ ಮರ, ವಿದ್ಯುತ್ ಕಂಬಗಳು ಬಿದ್ದ ತಕ್ಷಣ ಅವುಗಳನ್ನು ತೆರವುಗೊಳಿಸಲು ಎಲ್ಲಾ ತಾಲೂಕುಗಳಲ್ಲಿ ತಂಡಗಳನ್ನು ರಚಿಸಬೇಕು. ಜೆಸಿಬಿ ಸೇರಿದಂತೆ ಅಗತ್ಯ ಸೌಲಭ್ಯಗಳು ಎಲ್ಲಾ ಕಡೆ ಸಿದ್ಧವಿರಬೇಕು. ಮಳೆಯಿಂದಾಗಿ ಗುಡ್ಡ ಕುಸಿಯಬಹುದಾದ ಸ್ಥಳಗಳು, ಘಾಟಿ ಪ್ರದೇಶದಲ್ಲಿ ರಸ್ತೆ ಕುಸಿಯಬಹುದಾದ ಸ್ಥಳಗಳನ್ನು ಈಗಲೇ ಗುರುತಿಸಬೇಕು. ಅಂತಹ ಸಂದರ್ಭದಲ್ಲಿ ತಕ್ಷಣ ಸಂಚಾರ ವ್ಯವಸ್ಥೆಯನ್ನು ಪುನಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ತುರ್ತು ಪರಿಹಾರ ನೀಡಲು ಆದೇಶ:

ವಿದ್ಯುತ್ ಕಂಬಗಳು, ಟ್ರಾನ್ಸ್‍ಫಾರ್ಮರ್‍ಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ವಿದ್ಯುತ್ ಸಂಪರ್ಕವನ್ನು ಆದಷ್ಟು ಬೇಗನೇ ಪುನರ್ ಒದಗಿಸಲು ತಂಡಗಳನ್ನು ರಚಿಸಬೇಕು. ಪ್ರಸ್ತುತ 3ಬೋಟ್‍ಗಳು ಜಿಲ್ಲಾಡಳಿತದಲ್ಲಿ ಲಭ್ಯವಿದ್ದು, ಇನ್ನಷ್ಟು ಅಗತ್ಯ ಬೋಟ್‍ಗಳನ್ನು ಪಡೆಯಲು ಕ್ರಮ ಕೈಗೊಳ್ಳಲಾಗುವುದು. ನಗರ ಪ್ರದೇಶದಲ್ಲಿ ಹೂಳೆತ್ತುವ ಕಾರ್ಯವನ್ನು ಮಳೆಗಾಲಕ್ಕಿಂತ ಮೊದಲೇ ಪೂರ್ಣಗೊಳಿಸಬೇಕು. ಜಾನುವಾರು, ಮಾನವ ಪ್ರಾಣ ಹಾನಿ ಸಂಭವಿಸಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ 24ಗಂಟೆ ಒಳಗಾಗಿ ಪರಿಹಾರದ ಮೊತ್ತವನ್ನು ನೀಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…


RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..! Big news: ಹಾಡೋನಹಳ್ಳಿ ಮರಳು ದಂಧೆ ಮೇಲೆ ಮುಗಿಬಿದ್ದ ಎಸಿ ತಂಡ..!ಎಂಟು ಟ್ರ್ಯಾಕ್ಟರ್, ನಾಲ್ಕು ಜೆಸಿಬಿ ಮೇಲೆ ಕೇಸ್ ದಾ...