
ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ , ದಣಿವರಿಯದ ನಾಯಕ ಜೆಡಿಎಸ್ ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಅವರಿಗೆ 90 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ.
ದೇಶ ವಿದೇಶಗಳಿಂದ ಹಲವು ಗಣ್ಯರ ಶುಭಾಶಯ:
ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ, ಮುಲಾಯಂ ಸಿಂಗ್ ಯಾದವ್, ಸೇರಿದಂತೆ ದೇಶ ವಿದೇಶದ ನಾನಾ ಗಣ್ಯರು ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ಗೃಹ ಸಚಿವರಿಂದ ಶುಭಾಶಯ ಕೋರಿಕೆ:
ಕರ್ನಾಟಕದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ವೈ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ ಸೇರಿದಂತೆ ಬಿಜೆಪಿ ಮುಖಂಡರುಗಳಾದ ಆರ್ ಅಶೋಕ್, ಸಿಟಿ ರವಿ, ಕಾಂಗ್ರೆಸ್ನ ನ ಜಿ ,ಪರಮೇಶ್ವರ್ ಸೇರಿದಂತೆ ಹಲವು ನಾಯಕರುಗಳು ಪಕ್ಷಬೇಧ ಮರೆತು ಹಿರಿಯ ರಾಜಕಾರಣಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ರಾಜ್ಯದ ಮೂಲೆ ಮೂಲೆಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆ :
ಕರ್ನಾಟಕ ರಾಜ್ಯದ ಮೂಲೆ ಮೂಲೆಗಳಲ್ಲಿ ಅವರ ಅಭಿಮಾನಿಗಳು ಕಾರ್ಯಕರ್ತರು ಮಾಜಿ ಪ್ರಧಾನಿ ಹೆಚ್, ಡಿ ದೇವೇಗೌಡರ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಜೆಡಿಎಸ್ ಕಾರ್ಯಕರ್ತರಿಂದ ಪ್ರಧಾನಿಯ ಹುಟ್ಟು ಹಬ್ಬದ ಪ್ರಯುಕ್ತ ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕತ್ ವಿತರಣೆ:

ಜೆಡಿಎಸ್ ವರಿಷ್ಟ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ 90ನೇ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕೇಟ್ ಅನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ನಾಗರಾಜ್ ಕಂಕಾರಿ, ಮಾಜಿ ಉಪಮೇಯರ್ ಹೆಚ್. ಫಾಲಾಕ್ಷಿ, ಪ್ರಮುಖರಾದ ಭಾಸ್ಕರ್, ನವುಲೆ ಮಂಜುನಾಥ್, ಪ್ರಶಾಂತ್, ಬಸವರಾಜ್, ದಿವಾಕರ್ ಮೊದಲಾದವರಿದ್ದರು.
ನ್ಯೂಸ್ ವಾರಿಯರ್ಸ್ ಪತ್ರಿಕೆ ಬಳಗದ ವತಿಯಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು…
ರಘುರಾಜ್.ಹೆಚ್.ಕೆ…
#####################################
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…