Friday, May 2, 2025
Google search engine
Homeಶಿವಮೊಗ್ಗನಿನ್ನೆ ಉಸ್ತುವಾರಿ ಸಚಿವರಿಗೆ ಘೇರಾವ್..! ಇಂದು ಸ್ಮಾರ್ಟ್ ಸಿಟಿ ಅವೈಜ್ಞಾನಿಕ, ಕಳಪೆ, ಕಾಮಗಾರಿ ವಿರುದ್ಧ ಹೊಸಮನೆಯಲ್ಲಿ...

ನಿನ್ನೆ ಉಸ್ತುವಾರಿ ಸಚಿವರಿಗೆ ಘೇರಾವ್..! ಇಂದು ಸ್ಮಾರ್ಟ್ ಸಿಟಿ ಅವೈಜ್ಞಾನಿಕ, ಕಳಪೆ, ಕಾಮಗಾರಿ ವಿರುದ್ಧ ಹೊಸಮನೆಯಲ್ಲಿ ಬೃಹತ್ ಪ್ರತಿಭಟನೆ ..!!

ಶಿವಮೊಗ್ಗ: ನಿನ್ನೆ ನಗರಕ್ಕೆ ಆಗಮಿಸಿದ ಉಸ್ತುವಾರಿ ಸಚಿವರಾದ ಕೆ,ಸಿ ನಾರಾಯಣಗಡ ಅವರಿಗೆ ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರುಗಳು ಘೇರಾವ್ ಹಾಕಿ ವರ್ಷ ಸಂಭವಿಸುತ್ತಿರುವ ಮಳೆಯ ಹಾನಿಗೆ ಶಾಶ್ವತ ಪರಿಹಾರ ಕಲ್ಪಿಸಿ ಹಾಗೂ ಈ ವರ್ಷ ಸುರಿದ ಮಳೆಯಿಂದಾಗಿ ಸಂಭವಿಸಿದ ನಷ್ಟಕ್ಕೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ.


ಶಿವಮೊಗ್ಗದಲ್ಲಿ ಕಳೆದ ವಾರ ಸುರಿದ ಅಕಾಲಿಕ ಮಳೆಯಿಂದಾಗಿ ಸಾಕಷ್ಟು ಪ್ರದೇಶಗಳ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ವರ್ಷಗಳಿಂದ ಪ್ರತಿವರ್ಷ ಮಳೆಗಾಲದಲ್ಲಿ ನಾಗರೀಕರು ಇದೇ ಸಮಸ್ಯೆಯನ್ನು ಅನುಭವಿಸುತ್ತಿದ್ದಾರೆ. ಅಲ್ಲದೆ, ಪರಿಹಾರಕ್ಕೂ ಆಗ್ರಹಿಸುತ್ತಿದ್ದಾರೆ. ಮಳೆನೀರಿನಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ಕಲ್ಪಿಸಬೇಕು. ಮನೆಗಳಿಗೆ ನುಗ್ಗಿರುವ ನೀರಿನಿಂದ ಹಾನಿಯಾದವರಿಗೆ 25 ಸಾವಿರ ಹಾಗೂ ಸಂಪೂರ್ಣ ನೆಲಸಮವಾಗಿರುವ ಮನೆಗಳಿಗೆ 10 ಲಕ್ಷ ಪರಿಹಾರ ತಕ್ಷಣ ಘೋಷಣೆ ಮಾಡುವಂತೆ ಅವರು ಆಗ್ರಹಿಸಿದ್ದಾರೆ.


ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್‍ಸಿಟಿ ಯೋಜನೆಯ ಅವೈಜ್ಞಾನಿಕ ಕಾಮಗಾರಿಯಿಂದ ಇಂತಹ ಅವಘಡಗಳು ಸಂಭವಿಸುತ್ತಿವೆ. ಅಲ್ಲದೆ, ಪ್ರಮುಖ ರಾಜಕಾಲುವೆಗಳಲ್ಲಿ ಹೂಳನ್ನು ತೆಗೆಯದಿರುವುದು, ತಡೆಗೋಡೆ ನಿರ್ಮಾಣ ಮಾಡದಿರುವುದು ಹಾಗೂ ಚರಂಡಿ ನಿರ್ಮಾಣದ ನಂತರ ಸ್ಲ್ಯಾಬ್‍ಗಳನ್ನು ಹಾಕುವಾಗ ಸಂಪೂರ್ಣವಾಗಿ ಚರಂಡಿಯಲ್ಲಿ ಹೂಳನ್ನು ತೆಗೆಯದಿರುವುದು ಇದಕ್ಕೆಲ್ಲ ಕಾರಣವಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.


ನಗರದಲ್ಲಿ ಕೆರೆಗಳ ಒತ್ತುವರಿ ಹಾಗೂ ಕರೆಗಳಿಂದ ನೀರು ಹರಿಯಲು ನಿರ್ಮಿಸಿರುವ ನಾಲಾಗಳನ್ನು ಲೇಔಟ್ ಅಭಿವೃದ್ಧಿ ನೆಪದಲ್ಲಿ ಸಂಪೂರ್ಣವಾಗಿ ಮುಚ್ಚಿರುವುದು, ಯುಜಿಡಿ ಕಾಮಗಾರಿಗೆ ಸಂಬಂಧಪಟ್ಟಂತೆ ಮನೆಗಳಿಗೆ ಯುಜಿಡಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಂಪೂರ್ಣ ಕಳಪೆಕಾಮಗಾರಿಯಿಂದ ಪೈಪ್‍ಗಳು ಬ್ಲಾಕ್ ಆಗಿರುವುದು ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿ ಅಕಾಲಿಕ ಮಳೆಯಿಂದ ಆಗಬಹುದಾದ ಹಾನಿಯನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಕಾಂಗ್ರೆಸ್ ಮುಖಂಡ ಕೆ. ರಂಗನಾಥ್ ಹಾಜರಿದ್ದರು.

ಇಂದು ಕಾಂಗ್ರೆಸ್ನ ನ ಜಿಲ್ಲಾ ಅಧ್ಯಕ್ಷರಾದ ಬಿ,ಕೆ ಸುಂದರೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ:

ನಿನ್ನೆ ಉಸ್ತುವಾರಿ ಸಚಿವರಿಗೆ ಮನವಿ ನೀಡಿದ ಬೆನ್ನಲ್ಲೇ ಇಂದು ಸ್ಮಾರ್ಟ್ ಸಿಟಿಯ ಕಳಪೆ ಅವೈಜ್ಞಾನಿಕ ಕಾಮಗಾರಿಯದ ಸಾರ್ವಜನಿಕರಿಗೆ ಉಂಟಾಗುತ್ತಿರುವ ಕಿರಿಕಿರಿ , ಸಮಸ್ಯೆಗಳ ಬಗ್ಗೆ ದೂರು ನೀಡಿದರೂ ಸಂಬಂಧಪಟ್ಟ ಅಧಿಕಾರಿಗಳು ಸ್ಪಂದಿಸದೆ ಇರುವುದು, ನಾಲ್ಕು ವರ್ಷದಿಂದ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿರುವುದು, ಸರಿಯಾಗಿ ಕಾಮಗಾರಿ ನಡೆಸದೆ ಮಲತಾಯಿ ಧೋರಣೆ ತಾಳಿರುವುದು ಇವೆಲ್ಲ ಕಾರಣಗಳಿಂದ ವಾರ್ಡ್ನ ನ ನಾಗರಿಕರು ಕೂಡ ಬೇಸತ್ತಿದ್ದಾರೆ. ಆದ್ದರಿಂದ ಇಂದು ಬಿಕೆ ಸುಂದರೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದಾರೆ. ವಾರ್ಡ್ನನ ಎಲ್ಲ ನಾಗರಿಕರು ಕಾಂಗ್ರೆಸ್ನ ಎಲ್ಲ ಮುಖಂಡರು, ಕಾರ್ಯಕರ್ತರು, ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕೆಂದು ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ..

ಇಂದು ಹನ್ನೊಂದು ಮೂವತ್ತಕ್ಕೆ ಬೃಹತ್ ಪ್ರತಿಭಟನೆ ಎಲ್ಲರೂ ಭಾಗವಹಿಸಿ ಸಹಕರಿಸಬೇಕೆಂದು ಕೋರಿದ ಪಾಲಿಕೆ ಸದಸ್ಯರು:

ಕಳಪೆ ಅವೈಜ್ಞಾನಿಕ ಆಮೆಗತಿಯ ಕಾಮಗಾರಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಇಂದು ಹನ್ನೊಂದು ಮೂವತ್ತಕ್ಕೆ ಹೊಸಮನೆ ಬಡಾವಣೆಯ ಶಿವಶಂಕರ್ ಗ್ಯಾರೇಜ್ ರಸ್ತೆಯಲ್ಲಿ ಹಮ್ಮಿಕೊಂಡಿದ್ದು ಎಲ್ಲರೂ ಭಾಗವಹಿಸಿ ಈ ಪ್ರತಿಭಟನೆಗೆ ಸಹಕರಿಸಿ ಸ್ಮಾರ್ಟ್ ಸಿಟಿ ಗೆ ಬಿಸಿ ಮುಟ್ಟಿಸಬೇಕು ಎಂದು ಮಹಾನಗರ ಪಾಲಿಕೆಯ ಸದಸ್ಯರಾದ ರೇಖಾ ರಂಗನಾಥ್ ಅವರು ಮನವಿ ಮಾಡಿಕೊಂಡಿದ್ದಾರೆ…

ಸ್ಥಳ: ಹೊಸಮನೆ ಬಡಾವಣೆಯ ಶಿವಶಂಕರ್ ಗ್ಯಾರೇಜ್…

ಸಮಯ : ಬೆಳಿಗ್ಗೆ 11.30 ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305...

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...