Friday, May 2, 2025
Google search engine
Homeಶಿವಮೊಗ್ಗಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ಸಿಡಿದೆದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ.‌‌.!!

ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ಸಿಡಿದೆದ್ದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ.‌‌.!!


ಶಿವಮೊಗ್ಗ: ನಗರದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಸ್ಮಾರ್ಟ್ ಸಿಟಿ ಕಾಮಗಾರಿಯ ವಿರುದ್ಧ ಕಾಂಗ್ರೆಸ್ ಜಿಲ್ಲಾ‌ಸಮಿತಿಶಿವಮೊಗ್ಗ ಕುವೆಂಪು ರಸ್ತೆಯಲ್ಲಿ ಕುಳಿತು ರಸ್ತೆ ತಡೆ ಚಳುವಳಿ ನಡೆಸಿತು.

ಮಾಜಿ ಸಚಿವ ಈಶ್ವರಪ್ಪ ಸಂಸದ ಬಿವೈ ರಾಘವೇಂದ್ರ ವಿರುದ್ಧ ಆಕ್ರೋಶ:

ಮಾಜಿ ಸಚಿವ ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು 40% ಕಮಿಷನ್ ಸರ್ಕಾರದ ವಿರುದ್ಧ,ಸ್ಮಾರ್ಟ್ ಸಿಟಿ ಕಾಮಗಾರಿ ಗಳಲ್ಲಿ ಹಣ ಲೂಟಿ ಮಾಡಿರುವ ಬಿಜೆಪಿ ಪಕ್ಷದ ವಿರುದ್ಧ, ಜಿಲ್ಲಾ ಕಾಂಗ್ರೆಸ್ ಘೋಷಣೆ ಕೂಗುತ್ತಾ ಪ್ರತಿಭಟನೆ ಪ್ರಾರಂಭಿಸಿದರು.

ನಗರದ 15 ವಾರ್ಡ್ಗಗಳಲ್ಲಿ ಬೃಹತ್ ಬ್ರಷ್ಟಾಚಾರ:


ನಗರದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ 15 ವಾರ್ಡ್ ಗಳಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಿಂತ ಮೊದಲು ಎಲ್ಲಾ ಮೋರಿ ಮತ್ತು ಚರಂಡಿಗಳು ನೆಟ್ಟಗಿದ್ದವು. ಮಳೆ ನೀರು ಸರಾಗವಾಗಿ ಹರಿಯುತ್ತಿತ್ತು. ಆದರೆ‌ ಈಗ ಸ್ಮಾರ್ಟ್ ಸಿಟಿ ಕಾಮಗಾರಿ ಶೇ. 80 ರಷ್ಟು ಕಾಮಗಾರಿ ಮುಗಿದಿದೆ. ಆದರೆ ಯಾವ ರಾಜಕಾಲುವೆ, ಬಾಕ್ಸ್ ಚರಂಡಿಯಲ್ಲಿ ನೀರುಹರಿಯದೆ ರಸ್ತೆಯ ಮೇಲೆ ನೀರು ಹರಿಯುತ್ತಿದೆ.

ಇದರಿಂದ ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದ ಮೊನ್ನೆ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಈ ಹಿಂದೆ ಮಳೆ ಬಿದ್ದರೆ ಕೆಲ ಬಡಾವಣೆಗಳಿಗೆ ನೀರು ನುಗ್ಗುತ್ತಿತ್ತು. ಈಗ ಎಲ್ಲಾ ಬಡಾವಣೆಗಳು ಜಲಾವೃತಗೊಂಡಿದೆ. ಇದು ಬಜೆಪಿಯ ಕೊಡುಗೆ ಎಂದು ಪ್ರತಿಭಟನಾಕಾರು ಆಗ್ರಹಿಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹಿಸಿದ ಎಚ್ಎಸ್ ಸುಂದರೇಶ್:


ನಗರದ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಮೊನ್ನೆ ಮಳೆಗೆ ನೀರುನುಗ್ಗುತ್ತಿತ್ತು. ಮೂರು ಬಡಾವಣೆಗಳು ಮಾತ್ರ‌ 60 ವರ್ಷದಿಂದ ಮುಳುಗುತ್ತಿತ್ತು. ಆದರೆ ಮೊನ್ನೆ ಬಿದ್ದ ಮಳೆ ನಗರವನ್ನೇ ಜನಜೀವನವನ್ನು ಹಾಳು ಮಾಡಿದೆ. ಹಾಗಾಗಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನ ನ್ಯಾಯಾಂಗ ತನಿಖೆ ಆಗಬೇಕೆಂದು ಜಿಲ್ಲಾ ಕಾಂಗ್ರಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್‌ಆಗ್ರಹಿಸಿದ್ದಾರೆ.


ಪ್ರತಿಭಟನೆಯಲ್ಲಿ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ರೇಖಾ‌ರಂಗನಾಥ್, ಕೆಪಿಸಿಸಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ ದೇವೇಂದ್ರಪ್ಪ,ಯುವಕಾಂಗ್ರೆದ ನ ರಂಗನಾಥ್, ಜಿಲ್ಲಾಧ್ಯಕ್ಷ ಗಿರೀಶ್‌, ಕೆಪಿಸಿಸಿ ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಎನ್ ಡಿ ಪ್ರವೀಣ, ಮೂರ್ತಿ, ಮೊದಲಾದವರು ಭಾಗವಹಿಸಿದ್ದರು.

ರಘುರಾಜ್ ಹೆಚ್.ಕೆ….

#####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305..

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ... ನಿಲ್ಲದ ಜನಿವಾರದ ಜಗಳ..ಸಾಗರದಲ್ಲೂ ಜನಿವಾರ ಕಟ್..ಬ್ರಾಹ್ಮಣ ಮಹಾಸಭಾ ವತಿಯಿಂದ ಪ್ರತಿಭಟನೆ...! ಮುಸ್ಲಿಂ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ದಲಿತ ವಿದ್ಯಾರ್ಥಿನಿ ನೇಣಿಗೆ ಶರಣು..!