Home ಶಿವಮೊಗ್ಗವಿಶ್ವ ವಿಖ್ಯಾತ ಜೋಗ ಜಲಪಾತ ಸನಿಹದಲ್ಲೇ ಸಮರ್ಪಕ ರಸ್ತೆ ಸಾರಿಗೆ ವ್ಯವಸ್ಥೆಯಿಲ್ಲದೇ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಜೋಳಿಗೆ ಅಥವಾ ತೊಟ್ಟಿಲೇ ಸಾಧನ – ಸಂಸದರು ಶಾಸಕರು ಸೂಕ್ತ ಸಾರಿಗೆ ಸಂಪರ್ಕ ವ್ಯವಸ್ಥೆಯತ್ತ ಒಲವು ತೋರುವರೇ…..?

ವಿಶ್ವ ವಿಖ್ಯಾತ ಜೋಗ ಜಲಪಾತ ಸನಿಹದಲ್ಲೇ ಸಮರ್ಪಕ ರಸ್ತೆ ಸಾರಿಗೆ ವ್ಯವಸ್ಥೆಯಿಲ್ಲದೇ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಜೋಳಿಗೆ ಅಥವಾ ತೊಟ್ಟಿಲೇ ಸಾಧನ – ಸಂಸದರು ಶಾಸಕರು ಸೂಕ್ತ ಸಾರಿಗೆ ಸಂಪರ್ಕ ವ್ಯವಸ್ಥೆಯತ್ತ ಒಲವು ತೋರುವರೇ…..?

by EDITOR NEWS WARRIORS
0 comments

ಜೋಗ:- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ವಿಧಾನಸಭಾ ಕ್ಷೇತ್ರದ ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10 ನೇ ವಾರ್ಡ್ ನಲ್ಲಿರುವ ನಿವಾಸಿಗಳಿಗೆ ಸರಿಯಾದ ರಸ್ತೆ ಸಾರಿಗೆ ವ್ಯವಸ್ಥೆಯಿಲ್ಲದೇ ಅಸಹಾಯಕ ಸ್ಥಿತಿಗೆ ತಲುಪಿದ ನಿವಾಸಿಗಳ ಕಥೆ – ವ್ಯಥೆ.

ಜೋಗ ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನಂಬರ್ 10 ರ ಚರ್ಚ ಮೌಂಟ್ ನಿವಾಸಿಗಳು ವಯಸ್ಸಾದವರಿಗೆ ಅನಾರೋಗ್ಯ ಪೀಡಿತರ ವೇದನೆ ಹೇಳತೀರದು.

ಜಟಿಲವಾದ ಸಂಪರ್ಕ ರಸ್ತೆಯನ್ನೂ ಸರಿಪಡಿಸಿ ಕೊಡುವಂತೆ ಸ್ಥಳೀಯ ನಿವಾಸಿಗಳು ಸ್ಥಳೀಯ ಆಡಳಿತವಾದ ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ಆಡಳಿತಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.

ಅದಂ ಎಂಬುವವರು ತಮ್ಮ ವಯಸ್ಸಾದ ತಾಯಿಯು ಪಾರ್ಶ್ವಾಯು ಕಾಯಿಲೆಯಿಂದ ನರಳುತ್ತಿದ್ದೂ ತನ್ನ ತಾಯಿಯನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ಸಮರ್ಪಕ ರಸ್ತೆ ವ್ಯವಸ್ಥೆಯಿಲ್ಲದೇ ಕಚ್ಚಾ ರಸ್ತೆಯಲ್ಲೇ ಬಹು ದೂರದ ವರೆಗೆ ಜೋಲಿಯಲ್ಲೇ ಹೊತ್ತುಕೊಂಡು ಹೋಗುತ್ತಿರುವ ಹೃದಯ ವಿದ್ರಾವಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದೂ, ನೆಟ್ಟಿಗರು ಭವ್ಯ ಭಾರತ ಸುವರ್ಣ ಸಂಭ್ರಮ ಆಚರಿಸುತ್ತಿರುವ ಬೆನ್ನೆಲ್ಲೇ ಇಂತಹ ಅವ್ಯವಸ್ಥೆ ಬಗ್ಗೆ ಸಂಸದರು, ಶಾಸಕರು ಹಾಗೂ ಶಿವಮೊಗ್ಗ ಜಿಲ್ಲಾಡಳಿತ ವಿರುದ್ಧ ಕಿಡಿಕಾರುತ್ತಿದ್ದಾರೆ.

ಅಭಿವೃದ್ಧಿ ಪರ ಚಿಂತನೆಯುಳ್ಳ ಜನಸ್ನೇಹಿ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಡಾ. ಸೆಲ್ವಮಣಿ ರವರು ಜೋಗ – ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ಸಂಖ್ಯೆ 10 ರಲ್ಲಿ ವಾಸಿಸುತ್ತಿರುವ ನಿವಾಸಿಗಳ ಮೂಲಭೂತ ಸೌಕರ್ಯವಾದ ರಸ್ತೆ ಸಂಪರ್ಕ ಕಲ್ಪಿಸಿ ಅನಾರೋಗ್ಯ ಪೀಡಿತರನ್ನು ಜೋಳಿಗೆ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತಹ ದುಸ್ಥಿತಿಗೆ ವಿರಾಮ ಹಾಕುವಂತೆ ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ

####################################

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ:9449553305…

Related Articles

Leave a Comment

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...