
ತಾಳಗುಪ್ಪ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಸೊರಬ ವಿಧಾನಸಭಾ ಕ್ಷೇತ್ರದ ತಾಳಗುಪ್ಪ ಬಳಿ ದಿನನಿತ್ಯ ವಾಹನಗಳ ಅಪಘಾತ ಹೆಚ್ಚುತ್ತಿದ್ದೂ, ಇದೀಗ ತಾನೇ ಮತ್ತೊಂದು ತಾಳಗುಪ್ಪ ಗೌರಿ ಕೆರೆ ತಿರುವಿನಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಅದೃಷ್ಟವಷಾತ್ ಯಾವುದೇ ಪ್ರಣಾಪಾಯವಾಗಿಲ್ಲ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ಬೆಳೆದ ಗಿಡಗಂಟಿಗಳ ಪೊದೆ ತೆರವು ಮಾಡುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ.
ಶಿವಮೊಗ್ಗ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೀವಂತ ಇದ್ದಾರೆಯೇ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.
ಕೂಡಲೇ ಶಿವಮೊಗ್ಗ ಜಿಲ್ಲಾ ಸಂಸದರಾದ ಬಿ. ವೈ. ರಾಘವೇಂದ್ರ ರವರು , ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪರವರು , ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಸೇಲ್ವಮಣಿ ರವರು ಹಾಗೂ ಶಿವಮೊಗ್ಗ ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಹೊನ್ನಳ್ಳಿ ರವರು ಕುಂಭಕರ್ಣ ನಿದ್ರೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಿಗಳನ್ನು ಜಾಗೃತಗೊಳಿಸಿ ಸುಗಮ ಸುರಕ್ಷತಾ ರಾಷ್ಟ್ರೀಯ ಹೆದ್ದಾರಿಯ ಸೇವೆಗೆ ಒತ್ತು ನೀಡುವಂತೆ ವಾಹನ ಸವಾರರು, ಪಾದಚಾರಿಗಳು, ಅಪಘಾತದಲ್ಲಿ ಗಂಭೀರ ಗಾಯಗೊಂಡವರ ಹಾಗೂ ಸ್ಥಳೀಯರ ಆಗ್ರಹ ..
ಓಂಕಾರ ಎಸ್. ವಿ.ತಾಳಗುಪ್ಪ…..
#####################################
ರಘುರಾಜ್ ಹೆಚ್.ಕೆ….9449553305….