ಕೋವಿಡ್ 19 ಸಾಂಕ್ರಾಮಿಕ ಕಾಯಿಲೆ ಬಂದು ಲಾಕ್ಡೌನ್ ಆದ ಪರಿಣಾಮವಾಗಿ ಜನರು ಆರ್ಥಿಕವಾಗಿ ಸಂಕಷ್ಟಕ್ಕೆ ಈಡಾಗಿದ್ದಾರೆ. ಶಾಲಾ ಕಾಲೇಜುಗಳು ಬಂದ್ ಆಗಿದ್ದರಿಂದ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ತರಗತಿಗಳು ಲಭ್ಯವಾಗಿಲ್ಲ ಈ ಹಿನ್ನೆಲೆಯಲ್ಲಿ ಕೋವಿಡ್ ಸಮಯವನ್ನು ತುರ್ತು ಪರಿಸ್ಥಿತಿ ಎಂದು ಪರಿಗಣಿಸಿ ಶಾಲಾ ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಬೇಕೆಂದು ಆಗ್ರಹಿಸಿ ಇಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿಗಳ ಒಕ್ಕೂಟ ಹರಿಹರ ಇವರ ವತಿಯಿಂದ ಎಸ್ ಜೆ ವಿಪಿ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾದ ವಿಜಯ್ ಕುಮಾರ್ ಬಿ, ಉಪಾಧ್ಯಕ್ಷ ನಾಗರಾಜ್, ಗೌರವ ಅಧ್ಯಕ್ಷ ಯತಿರಾಜ್, ಸದಸ್ಯರಾದ ಕಾರ್ತಿಕ್, ಚಂದ್ರು, ಶರತ್ ಕುಮಾರ್ ,ವಿನಯ್, ಕೀರ್ತಿರಾಜ್ಉಪಸ್ಥಿತರಿದ್ದರು…(ರಘುರಾಜ್ ಹೆಚ್, ಕೆ)
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305/7892830899…