
ತೀರ್ಥಹಳ್ಳಿ : ತಾಲ್ಲೂಕಿನ ಹಣಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮದ ದಿವ್ಯಾ ಕನ್ನಡ ಸ್ನಾತಕೋತ್ತರ ಪದವಿಯಲ್ಲಿ ಅತ್ಯುನ್ನತ ಶ್ರೇಣಿ ಪಡೆದಿದ್ದು.
ಹಣಗೆರಿ ಗ್ರಾಮ ಪಂಚಾಯಿತಿ ವತಿಯಿಂದ ಅಭಿನಂದನೆ ಹಾಗೂ ಪ್ರೋತ್ಸಾಹಧನದ ಚೆಕ್ ವಿತರಣೆ:
ಇಡೀ ಊರಿಗೆ ಹೆಮ್ಮೆ ತರುವ ವಿಷಯವಾಗಿದ್ದು. ಇಂದು ಅವರ ಮನೆಗೆ ತೆರಳಿದ ಹಣಗೇರಿ ಗ್ರಾಮಪಂಚಾಯಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಮತ್ತು ಸದಸ್ಯರಾದ ರಾಘವೇಂದ್ರ ಅವರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸಂತೋಷ್ ಅವರು ಪಂಚಾಯಿತಿ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಿ ಪ್ರೋತ್ಸಾಹ ಧನದ ಚೆಕ್ ನೀಡಿ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು…
ರಘುರಾಜ್ ಹೆಚ್. ಕೆ…9449553305…