Home ರಾಜ್ಯಪ್ರವಾಸಿಗರಿಗೆ ಸಂತಸದ ವಿಷಯ..!ಜುಲೈ 1 ರಿಂದ ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ..! ಯಾರೆಲ್ಲಾ ಆಗಮಿಸಲಿದ್ದಾರೆ ಅತಿಥಿಗಳು..?ಹೇಗಿರಲಿದೆ ಗೊತ್ತಾ ಬೋಟಿಂಗ್ ವ್ಯವಸ್ಥೆ..?

ಪ್ರವಾಸಿಗರಿಗೆ ಸಂತಸದ ವಿಷಯ..!ಜುಲೈ 1 ರಿಂದ ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ..! ಯಾರೆಲ್ಲಾ ಆಗಮಿಸಲಿದ್ದಾರೆ ಅತಿಥಿಗಳು..?ಹೇಗಿರಲಿದೆ ಗೊತ್ತಾ ಬೋಟಿಂಗ್ ವ್ಯವಸ್ಥೆ..?

by EDITOR NEWS WARRIORS
0 comments

ಶಿವಮೊಗ್ಗ :- ಸಂಸದ ಬಿ.ವೈ.ರಾಘವೇಂದ್ರ ಅವರ ಅಪೇಕ್ಷೆಯಂತೆ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿಚ್ಚಿಸುವ ಪ್ರವಾಸಿಗರಿಗೆ ವಿಶೇಷವಾಗಿ ಜಲಕ್ರೀಡೆ ಮತ್ತು ಸಾಹಸ ಚಟುವಟಿಕೆಗಳಲ್ಲಿ ಭಾಗವಹಿಸುವವರಿಗಾಗಿ ಶಿವಮೊಗ್ಗ ಸಮೀಪದ ಸಕ್ರೆಬೈಲಿನಲ್ಲಿ ಜುಲೈ 11 ರಂದು ಬೋಟಿಂಗ್ ಸ್ಪೋರ್ಟ್ಸ್ನ್ನು ಆರಂಭಿಸಲಾಗುತ್ತಿದೆ ಎಂದು ರಾಜ್ಯ ಜಂಗಲ್ ರೆಸಾರ್ಟ್ ನಿಗಮದ ಸದಸ್ಯ ರಾಜೇಶ್ ಕಾಮತ್ ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದ್ದಾರೆ.


ಜಂಗಲ್ ರೆಸಾರ್ಟ್ ನಿಗಮದ ವತಿಯಿಂದ ಜಲಕ್ರೀಡೆ ಹಾಗೂ ಸಾಹಸ ಚಟುವಟಿಕೆಗಳ ಕ್ರೀಡಾ ಕೇಂದ್ರವನ್ನು ಜುಲೈ ೦೧ರಂದು ಸಂಸದ ಬಿ.ವೈ.ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಲಿದ್ದಾರೆ ಎಂದವರು ತಿಳಿಸಿದ್ದಾರೆ.


ಸಕ್ರೆಬೈಲಿನ ಆನೆಗಳ ಬಿಡಾರದ ಜೊತೆಗೆ ಇಲ್ಲಿನ ಹಿನ್ನೀರಿನ ವಿಹಂಗಮ ನೋಟವನ್ನು ಆಸ್ವಾದಿಸುವುದು ಮಾತ್ರವಲ್ಲ ಜಲಕ್ರೀಡೆಗಳಲ್ಲಿ ಭಾಗವಹಿಸಬಹುದಾಗಿದೆ. ಇಲ್ಲಿನ ಸುಂದರ ವಾತಾವರಣ ಮನಮೋಹಕವಾಗಿದ್ದು, ಪ್ರವಾಸಿಗರನ್ನು ಸಂತಸಪಡಿಸಲಿದೆ. ಇಲ್ಲಿನ ಶುದ್ಧ ಗಾಳಿ, ನೀರು, ಅಷ್ಟಾಗಿ ಇರದ ಜನಜಂಗುಳಿ ವಾತಾವರಣ ಇದೆಲ್ಲವೂ ಪ್ರವಾಸಿಗರನ್ನು ಆಕರ್ಷಿಸಲಿದೆ. ಇದು ಆಗಮಿಸುವ ಪ್ರವಾಸಿಗರಿಗೆ ಆಪ್ಯಾಯಮಾನವಾಗಿರಲಿದೆ ಎಂದವರು ತಿಳಿಸಿದ್ದಾರೆ.


ಹೊಸದಾಗಿ ಆರಂಭಿಸಲಾಗುತ್ತಿರುವ ಈ ಬೋಟಿಂಗ್ ಸ್ಪೋರ್ಟ್ಸ್ ಪ್ರವಾಸಿಗರಿಗೆ ಹೊಸ ಆಕರ್ಷಣೆಯಾಗಿರಲಿದೆ ಎಂದು ತಿಳಿಸಿರುವ ಅವರು, ಮುಂದಿನ ದಿನಗಳಲ್ಲಿ ಸ್ವಯಂ ಹುಟ್ಟು ಹಾಕುತ್ತಾ ಬೋಟಿಂಗ್ ಮಾಡುವುದು, ರಾಫ್ಟಿಂಗ್, ಪೆಡಲಿಂಗ್‌ನ್ನೂ ಕೂಡ ಆರಂಭಿಸಲಾಗುವುದು ಎಂದವರು ತಿಳಿಸಿದ್ದಾರೆ.


ಜಂಗಲ್ ರೆಸಾರ್ಟ್ನಲ್ಲಿ ತಂಗುವವರು ಮಾತ್ರವಲ್ಲದೇ ಸಾರ್ವಜನಿಕರಿಗೂ ಅವಕಾಶ ಮುಕ್ತವಾಗಿದ್ದು, ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕುಟುಂಬದ ಸದಸ್ಯರೊಂದಿಗೆ ಈ ಜಲಕ್ರೀಡೆಯ ಸವಿಯನ್ನು ಸವಿದು ಸಂಭ್ರಮಿಸುವಂತೆ ಅವರು ಮನವಿ ಮಾಡಿದ್ದಾರೆ.


ಸಕ್ರೆಬೈಲಿನಲ್ಲಿ ಜುಲೈ ೦೧ರಂದು ಬೆಳಿಗ್ಗೆ ೯ಗಂಟೆಗೆ ಬೋಟಿಂಗ್ ಸ್ಪೋರ್ಟ್ಸ್ ಲೋಕಾರ್ಪಣೆ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಉದ್ಘಾಟಿಸುವರು. ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಡಾ|| ಹನುಮಂತಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಐ.ಎಂ.ನಾಗರಾಜ್, ಜಂಗಲ್ ರೆಸಾರ್ಟ್ ನಿಗಮದ ಅಧ್ಯಕ್ಷ ಅಪ್ಪಣ್ಣ, ನಿಗಮದ ವ್ಯವಸ್ಥಾಪಕ ನಿರ್ದೇಶಕ ಮನೋಜ್‌ಕುಮಾರ್, ಸಕ್ರೆಬೈಲಿನ ವ್ಯವಸ್ಥಾಪಕ ಎ.ಪಿ.ಕಿರಣ್ ಸೇರಿದಂತೆ ಜಿಲ್ಲೆಯ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು ಎಂದು ನಿಗಮದ ನಿರ್ದೇಶಕ ರಾಜೇಶ್‌ಕಾಮತ್ ಅವರು ತಿಳಿಸಿದ್ದಾರೆ.

ಓಂಕಾರ ಎಸ್. ವಿ. ತಾಳಗುಪ್ಪ….

#####################################

ರಘುರಾಜ್ ಹೆಚ್. ಕೆ….9449553305….

Related Articles

Leave a Comment

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!