Home ಶಿವಮೊಗ್ಗಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಖಡಕ್ ಆದೇಶ..!ಅನಧಿಕೃತ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದು ಮಾಡಲು ಅಧಿಕಾರಿಗಳಿಗೆ ಸೂಚನೆ..!!

ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಖಡಕ್ ಆದೇಶ..!ಅನಧಿಕೃತ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದು ಮಾಡಲು ಅಧಿಕಾರಿಗಳಿಗೆ ಸೂಚನೆ..!!

by EDITOR NEWS WARRIORS
1 comment

ಶಿವಮೊಗ್ಗ: ಅನಧಿಕೃತವಾಗಿ ಮದ್ಯ ಮಾರಾಟ ಮಾಡುವ ಅಂಗಡಿಗಳ ಪರವಾನಿಗೆ ರದ್ದುಪಡಿಸಿ ಕಾನೂನು ಕ್ರಮ ಜರುಗಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕಾಗಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜತೆಯಲ್ಲಿ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವ ಕುರಿತು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು.

ರಾಜ್ಯವನ್ನು ವ್ಯಸನಮುಕ್ತಗೊಳಿಸಲು ಆಂದೋಲನದ ರೀತಿಯಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ. ಕಳೆದ ಸಾಲಿನಲ್ಲಿ ಟನ್‍ಗಟ್ಟಲೆ ಮಾದಕ ವಸ್ತುಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿದ್ದು, ಕಳೆದ ತಿಂಗಳು ನಾಶಗೊಳಿಸಲಾಗಿದೆ. ಆದರೆ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರವಿಲ್ಲದೆ ಈ ಪಿಡುಗನ್ನು ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮೇಲೆ ಸಹ ಮಾದಕ ವಸ್ತು ಸೇವನೆ ಪಿಡುಗು ನೇರ ಪರಿಣಾಮ ಬೀರುತ್ತದೆ. ಕೆಲವು ಬಾಹ್ಯ ಶಕ್ತಿಗಳು ಮಾದಕ ವಸ್ತುಗಳನ್ನು ದೇಶದೊಳಗೆ ತರುವ ಮೂಲಕ ಅಪರೋಕ್ಷ ಯುದ್ಧವನ್ನು ಸಹ ನಮ್ಮ ದೇಶದ ಮೇಲೆ ಹೂಡಲು ಪ್ರಯತ್ನಿಸುತ್ತಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಮಾದಕ ವಸ್ತುಗಳ ಬಳಕೆ, ಮಾರಾಟವನ್ನು ಸಂಪೂರ್ಣವಾಗಿ ಮಟ್ಟಹಾಕಲು ಬದ್ಧವಾಗಿದೆ ಎಂದು ಸಚಿವರು ಹೇಳಿದರು.

ಶಿವಮೊಗ್ಗ ಜಿಲ್ಲೆಯನ್ನು ವ್ಯಸನ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಂಘ ಸಂಸ್ಥೆಗಳ ಜತೆ ಕೈಜೋಡಿಸಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

ವಿಶೇಷ ವಾರ್ಡ್:

ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಸನಮುಕ್ತತೆಗಾಗಿ ವಿಶೇಷ ವಾರ್ಡ್ ಈ ತಿಂಗಳ ಒಳಗಾಗಿ ಆರಂಭಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವನೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ಸೇವನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಅರ್ಧದಲ್ಲೇ ಶಾಲೆ ಬಿಡುವ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ವಹಿಸಲಾಗುತ್ತಿದೆ. ಮಾದಕ ವಸ್ತು ಸೇವನೆ ಮಟ್ಟ ಹಾಕಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಪದಾಧಿಕಾರಿಗಳು, ವಿವಿಧ ಇಲಾಖಾ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ…9449553305….

Related Articles

1 comment

mitolyn reviews January 27, 2026 - 9:46 am

**mitolyn reviews**

Mitolyn is a carefully developed, plant-based formula created to help support metabolic efficiency and encourage healthy, lasting weight management.

Reply

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...