Friday, May 2, 2025
Google search engine
Homeರಾಜ್ಯಜಲಾಶಯದಲ್ಲಿ ಹೆಚ್ಚಳವಾಗುತ್ತಿದೆ ನೀರಿನ ಮಟ್ಟ: ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿಕೆ..! ಯಾವುದೇ ಸಮಯದಲ್ಲಾದರೂ ನದಿಗೆ...

ಜಲಾಶಯದಲ್ಲಿ ಹೆಚ್ಚಳವಾಗುತ್ತಿದೆ ನೀರಿನ ಮಟ್ಟ: ನದಿ ಪಾತ್ರದ ಜನರಿಗೆ ಎಚ್ಚರಿಕೆ ನೀಡಿಕೆ..! ಯಾವುದೇ ಸಮಯದಲ್ಲಾದರೂ ನದಿಗೆ ನೀರು ಬಿಡುವ ಸಂಭವ..!!


ಶಿವಮೊಗ್ಗ : ಸತತ ಮಳೆಯಿಂದಾಗಿ ಭದ್ರಾ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ನದಿಗೆ ಬಿಡುವ ಸಂಭವ ಇರುವುದರಿಂದ ಜನ, ಜಾನುವಾರು ನದಿಪಾತ್ರದಲ್ಲಿ ತಿರುಗಾಡುವುದನ್ನು ನಿಷೇಧಿಸಲಾಗಿದೆ.


ಜು.12 ರಂದು ಜಲಾಶಯದ ನೀರಿನ ಮಟ್ಟ 178’ 10” ಅಡಿಗಿಂತ ಹೆಚ್ಚಾಗಿರುತ್ತದೆ. ಪ್ರಸ್ತುತ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ 30200 ಕ್ಯೂಸೆಕ್ಸ್ ಆಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು ಇದೇ ರೀತಿ ಮುಂದುವರೆದಲ್ಲಿ ಭದ್ರಾ ಜಲಾಶಯವು ಗರಿಷ್ಟ ನೀರಿನ ಮಟ್ಟ 186 ಅಡಿಗಳಿಗೆ ಅತೀ ಶೀಘ್ರವಾಗಿ ಭರ್ತಿಯಾಗುವ ಸಂಭವವಿರುತ್ತದೆ.


ಅಣೆಕಟ್ಟು ಸುರಕ್ಷತೆಯ ಹಿತದೃಷ್ಟಿಯಿಂದ ಹಾಗೂ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಕ್ರೆಸ್ಟ್ ಗೇಟ್ ಮುಖಾಂತರ ನದಿಗೆ ಬಿಡಲಾಗುವುದು. ಆದ್ದರಿಂದ ಭದ್ರಾ ನದಿಯ ಎಡ ಮತ್ತು ಬಲದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ನದಿಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಅಧೀಕ್ಷಕ ಅಭಿಯಂತರರಾದ ಜಿ.ಎಸ್.ಪಟೇಲ್ ತಿಳಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305….

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Latest news
ಬೀದಿ ನಾಯಿಗಳ ಸಂತಾನ ಹರಣಕ್ಕೆ ದಿನಾಂಕ ಫಿಕ್ಸ್..! ಇಬ್ಬರು ಮಹಿಳೆಯರು ನಾಪತ್ತೆ..! ಮಿನಿಸ್ಟರ್ ಮಧು ಬಂಗಾರಪ್ಪನವರ ಮಗ ಸೂರ್ಯನ ಸಾಧನೆ..! ಅಕ್ಷಯ ತೃತೀಯಕ್ಕೆ ಬಂಗಾರವಲ್ಲ..! ಬಾಲ್ಯ ವಿವಾಹದ ಆತಂಕ..! ಕರ್ನಾಟಕ ಕಾರ್ಮಿಕ ಚಳುವಳಿಯ ಮುಂಚೂಣಿ ನಾಯಕ ಹಾಗೂ ಬಿಎಂಎಸ್ ಸಂಸ್ಥಾಪನೆಯ ಶ್ರೇಷ್ಠ ಶಿಲ್ಪಿಗಳಲ್ಲೊಬ್ಬರಾದ ಶ್ರೀ ಡಿ.ಕೆ.... ಗ್ರಾಮ ಪಂಚಾಯಿತಿಗಳ ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ..! ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ಸಾವು ಇತಿಹಾಸದ ಪುಟದಲ್ಲಿ ದಾಖಲು...!ಕಾಶ್ಮೀರದಲ್ಲಿ ಮಂಜುನಾಥ್ ಸೇರಿದಂತೆ ಸತ್ತ ಜನರ... ಮಾಜಿ ಸಚಿವ ಬೇಗಾನೆ ರಾಮಯ್ಯ ಇನ್ನಿಲ್ಲ...! ತೀರ್ಥಹಳ್ಳಿ : ಹೊನ್ನೆತಾಳು ಹುಡುಗಿ ಕಾಣೆಯಾಗಿದ್ದಾಳೆ..! ನಿವೃತ್ತ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಕೊಲೆ..! ಪತ್ನಿಯಿಂದಲೇ ಹತ್ಯೆಯಾದ ನಿವೃತ್ತ ಡಿಜಿ ಐಜಿಪಿ ಆಗಿದ್ದ ...