
ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಾಗರ ಗ್ರಾಮಾಂತರ ಪೊಲೀಸ್ ಠಾಣಾ ಎದುರು KA 15 – 8668 ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದೂ, ಈ ವಾಹನದಲ್ಲಿ ಸುಮಾರು ಏಳುವರೆ ಟನ್ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಅನುಮಾನದಿಂದ ವಶಕ್ಕೆ ಪಡೆದಿದ್ದು, ಇನ್ನೇನೂ ತಹಸೀಲ್ದಾರ್ ರವರು ಈ ಅಕ್ಕಿ ಪಡಿತರ ಅಕ್ಕಿ ಎಂಬ ಬಗ್ಗೆ ವರದಿ ಅನ್ವಯ ಕಾನೂನು ಕ್ರಮಕ್ಕೆ ಮುಂದಾಗುವ ಬಗ್ಗೆ ಪೊಲೀಸ್ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಹಿಂದೇ ಸೊರಬ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರ್ ಬಂಗಾರಪ್ಪ ರವರು ವಿಧಾನಸಭೆ ಅಧಿವೇಶನದಲ್ಲಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಅವ್ಯಾಹತವಾಗಿ ನೆಡೆಯುತ್ತಿದೆ. ಕರ್ನಾಟಕ ಸರ್ಕಾರ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ನಿಯಂತ್ರಣ ಹಾಗೂ ಕಡಿವಾಣ ಹಾಕುವುದನ್ನು ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಒತ್ತಡ ಮಾಡಿದನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವುದು ಅನಿವಾರ್ಯವಾಗಿದ್ದೂ, ಸೊರಬ ವಿಧಾನಸಭಾ ಕ್ಷೇತ್ರದಿಂದಲೇ ಸಾಗರಕ್ಕೆ ಪಡಿತರ ಅಕ್ಕಿ ಸರಬರಾಜುವಾಗುತ್ತಿರುವ ಬಗ್ಗೆ ಸೊರಬ ವಿಧಾನಸಭಾ ಶಾಸಕರಾದ ಕುಮಾರ್ ಬಂಗಾರಪ್ಪ ಏನಂತೀರಾ……..?! ಎಂಬುದು ಪ್ರಜ್ಞಾವಂತರ ಯಕ್ಷ ಪ್ರೆಶ್ನೆಯಾಗಿದೆ .
ಓಂಕಾರ ಎಸ್. ವಿ. ತಾಳಗುಪ್ಪ….
ರಘುರಾಜ್ ಹೆಚ್. ಕೆ..9449553305….