
ಆಗುಂಬೆ :- ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಕಳೆದ 02 ಗಂಟೆಗೂ ಮುಂಚೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಮರಗಳನ್ನೂ ತೆರವು ಮಾಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇತ್ತ ಮುಖ ಮಾಡದೇ ಇರುವುದರಿಂದ, ಮರ ಬಿದ್ದ ಎರಡೂ ಬದಿಯಲ್ಲಿ 04 ರಿಂದ 05 km ರಸ್ತೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿದ್ದೂ, ರೋಗಿಗಳನ್ನು ಮಣಿಪಾಲ, ಮಂಗಳೂರು, ಉಡುಪಿ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಆಂಬುಲೆನ್ಸ್ ಮೂಲಕ ಸಂಚಾರ ಮಾಡಲು ಆಗದೇ, ಜೀವನ್ಮರಣ ಸ್ಥಿತಿಯಲ್ಲಿರುವ ಬಗ್ಗೆ ಮಾಹಿತಿ ನೊಂದ ರೋಗಿಗಳ ಪೋಷಕರು, ಇನ್ನಿತರ ವಾಹನ ಚಾಲಕರುಗಳು, ಪ್ರಯಾಣಿಕರು ಶಿವಮೊಗ್ಗ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದೂ, ಕೂಡಲೇ ಶಿವಮೊಗ್ಗ ಜಿಲ್ಲಾಡಳಿತ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸುಗಮ ಸಂಚಾರಕ್ಕೆ ಅನುವು ಮಾಡಿಕೊಳ್ಳಲ್ಲೂ ಕೋರಿದ್ದಾರೆ.
ಓಂಕಾರ ಎಸ್. ವಿ. ತಾಳಗುಪ್ಪ…
ರಘುರಾಜ್ ಹೆಚ್. ಕೆ..9449553305….