Home ರಾಜ್ಯಕಲಬುರ್ಗಿ:ನಗರಸಭೆಯ‌ ಮಾಜಿ ಅಧ್ಯಕ್ಷ ಬರ್ಬರ ಕೊಲೆ..!!!!! ನಂತರ ತಲವಾರನ್ನು ಹೊಟ್ಟೆಗೆ ಚುಚ್ಚಿ ಅಲ್ಲೇ ಬಿಟ್ಟು ಹೋದ ಹಂತಕರು..!!

ಕಲಬುರ್ಗಿ:ನಗರಸಭೆಯ‌ ಮಾಜಿ ಅಧ್ಯಕ್ಷ ಬರ್ಬರ ಕೊಲೆ..!!!!! ನಂತರ ತಲವಾರನ್ನು ಹೊಟ್ಟೆಗೆ ಚುಚ್ಚಿ ಅಲ್ಲೇ ಬಿಟ್ಟು ಹೋದ ಹಂತಕರು..!!

by EDITOR NEWS WARRIORS
0 comments

ಕಲಬುರಗಿ:- ನಗರಸಭೆ ಮಾಜಿ ಅಧ್ಯಕ್ಷರೊಬ್ಬರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಿ, ಹೊಟ್ಟೆಗೆ ತಲವಾರು ಚುಚ್ಚಿ ಅದನ್ನು ಹಂತಕರು ಹಾಗೇ ಬಿಟ್ಟು ಹೋಗಿರುವಂತಹ ಭೀಕರ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ಪಟ್ಟಣದ ರೈಲ್ವೆ ನಿಲ್ದಾಣದ ಮುಂಭಾಗದಲ್ಲಿ ಶಹಬಾದ್ ನಗರಸಭೆ ಮಾಜಿ ಅಧ್ಯಕ್ಷ, ನಗರಸಭೆಯ ಹಾಲಿ ಅಧ್ಯಕ್ಷೆಯ ಪತಿ ಗಿರೀಶ್ ಕಂಬಾನುರ್ ಅವರನ್ನು ಕೊಲೆ‌ ಮಾಡಲಾಗಿದೆ.

ನಾಲ್ವರು ಯುವಕರು ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ದಾಳಿ ಮಾಡಿ, 15 ರಿಂದ 20 ಬಾರಿ ಇರಿದಿದ್ದಾರೆ. ಬಳಿಕ ತಲವಾರ್​ನಿಂದ ಎದೆಗೆ ಚುಚ್ಚಿ ಅದನ್ನು ಹಾಗೇ ಇಟ್ಟು ಹೋಗಿದ್ದಾರೆ. ಗಂಭೀರ ಗಾಯಗೊಂಡ ಗಿರೀಶ್​ ಅವರನ್ನು ತಕ್ಷಣ ಕಲಬುರಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಈ ವೇಳೆ ಅವರು ಮೃತಪಟ್ಟಿದ್ದಾರೆ.

ಈ ಕುರಿತು ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ತನಿಖೆ ಚುರುಕುಗೊಂಡಿದೆ.

ಓಂಕಾರ ಎಸ್. ವಿ. ತಾಳಗುಪ್ಪ….

ರಘುರಾಜ್ ಹೆಚ್. ಕೆ…9449553305….

Related Articles

Leave a Comment

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...