
ಶಿವಮೊಗ್ಗ : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಸೆಲ್ವಮಣಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣ ಗೌಡರ ನೇತೃತ್ವದ ಸಭೆಯಲ್ಲಿ ಉರುಳಗಲ್ಲು ರೈತರ ಮೇಲೆ ಅರಣ್ಯಾಧಿಕಾರಿಗಳ ವರ್ತನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಖಂಡಿಸಿದರು.
ಅಧಿಕಾರಿಗಳ ವಿರುದ್ಧ ಕ್ರಮ: (ಸಾಗರ ತಾಲ್ಲೂಕು ಉರುಳಗಲ್ಲು)
ಮರ ಕಡಿದ ರೈತನನ್ನು ಕ್ರಿಮಿನಲ್ ಎಂಬಂತೆ ವರ್ತಿಸಿ ಪ್ರಕರಣ ದಾಖಲಿಸಿದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಿಸಿಎಫ್ ಅವರಿಗೆ ಸೂಚನೆ ನೀಡಲು ಸಚಿವ ಡಾ.ನಾರಾಯಣ ಗೌಡ ಅವರು ತಿಳಿಸಿದರು.
ಸಾಗರ ತಾಲೂಕಿನ ಬಾನುಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಉರುಳಗಲ್ಲು ರಸ್ತೆ ಮೇಲೆ ಬಿದ್ದಿದ್ದ ಮರವನ್ನು ಕಡಿದ ರೈತರನ್ನು ದೊಡ್ಡ ಅಪರಾಧಿ ಎಂಬಂತೆ ಬಿಂಬಿಸಿ ಸ್ಲೇಟ್ ಹಿಡಿಸಿ ಮೊಕದ್ದಮೆ ದಾಖಲಿಸಿರುವ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹರತಾಳು ಹಾಲಪ್ಪ ಅವರ ಒತ್ತಾಯಕ್ಕೆ ಸಚಿವರು ಈ ಸೂಚನೆ ನೀಡಿದರು.

ಪ್ರಕರಣವೇನು…!?
ಬಾನುಕುಳಿ ಗ್ರಾಮ ಪಂಚಾಯಿತಿಯ ಉರುಳುಗಲ್ಲು ಗ್ರಾಮಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅರಣ್ಯ ಇಲಾಖೆಗೆ ಸೇರಿದ ಮರಗಳನ್ನು ಅಕ್ರಮವಾಗಿ ಕಡಿತಲೆ ಮಾಡಿದ ಆರೋಪದಡಿ ಯುವಕರನ್ನು ಬಂಧಿಸಲಾಗಿತ್ತು.
ಈ ವೇಳೆ ಆರೋಪಿಗಳ ಪೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಆರೋಪ ಅರಣ್ಯ ಇಲಾಖೆಯ ಮೇಲೆ ಕೇಳಿಬಂದಿದೆ ಈ ಬಗ್ಗೆ ಸಾಕಷ್ಟು ವಿರೋಧ ಸಹ ಕೇಳಿ ಬಂದಿತ್ತು.
ಶರಾವತಿ ವನ್ಯಜೀವಿ ಅಭಯಾರಣ್ಯದ ಕಾರ್ಗಲ್ ವಲಯ ವ್ಯಾಪ್ತಿಯ ಉರುಳುಗಲ್ಲು ಗ್ರಾಮಕ್ಕೆ ₹ 10 ಲಕ್ಷದ ವೆಚ್ಚದ ವಿದ್ಯುದ್ದೀಕರಣ ಯೋಜನೆ ಮಂಜೂರಾಗಿತ್ತು. ಆ ಯೋಜನೆ ಬೇಗ ಗ್ರಾಮಕ್ಕೆ ತಲುಪಲಿ ಎಂಬ ಉದ್ದೇಶದಿಂದ ಅರಣ್ಯ ಪ್ರದೇಶದಲ್ಲಿನ ಕೆಲವು ಮರಗಳನ್ನು ಯುವಕರು ಕಡಿತಲೆ ಮಾಡಿದ್ದರು.
10 ಜನರ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಉದಯ ಕುಮಾರ್, ರಮೇಶ್ ಹಾಗೂ ಸಂತೋಷ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿ, 7 ಜನರಿಗಾಗಿ ಶೋಧ ಕಾರ್ಯ ನಡೆಸಿ ಕುಟುಂಬದ ಸದಸ್ಯರಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಅಮಾನತು ಯಾಕೆ:
ಕಾರ್ಗಲ್ ವನ್ಯಜೀವಿ ವಿಭಾಗದ ಫಾರೇಸ್ಟರ್ ಪ್ರಮೋದ್ ಎಂಬಾತನ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶುಕ್ರವಾರ ತುಮರಿಯಲ್ಲಿ ವಿವಿಧ ಜನಪರ ಸಂಘಟನೆಗಳು ಆಗ್ರಹಿಸಿದ್ದವು ಅಗಸ್ಟ್ 5 ರಂದು ಚನ್ನಗೊಂಡ ಗ್ರಾಮದ ಬಿಳಿಗಾರಿನಿಂದ ಕಾರ್ಗಲ್ ವಲಯ ಅರಣ್ಯಾಧಿಕಾರಿ ಕಚೇರಿ ವರೆಗೆ ಪಾದಯಾತ್ರೆ ನೆಡೆಸುದಾಗಿ ತಿಳಿಸಿದ್ದರು.
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಇದ್ದವರು
ಶಾಸಕರಾದ ರುದ್ರೇಗೌಡ, ಕುಮಾರ ಬಂಗಾರಪ್ಪ, ಅಶೋಕ ನಾಯ್ಕ್, ಡಿ.ಎಸ್.ಅರುಣ್, ಹರತಾಳು ಜಿಲ್ಲಾ ರಕ್ಷಣಾಧಿಕಾರಿ ಡಾಕ್ಟರ್ ಸೆಲ್ವಮಣಿ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ವೈಶಾಲಿ ,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಓಂಕಾರ ಎಸ್. ವಿ. ತಾಳಗುಪ್ಪ….
ರಘುರಾಜ್ ಹೆಚ್.ಕೆ….9449553305….