ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆಯಾದ ಬಸವರಾಜ್ ಬೊಮ್ಮಾಯಿ ಅವರಿಗೆ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರ ಅವರು ಶುಭಕೋರಿದರು. ಇದೇ ಸಂದರ್ಭದಲ್ಲಿ ಶಾಸಕರು ಮಲೆನಾಡಿನ ಈಗಿನ ಸಮಸ್ಯೆಗಳ ಬಗ್ಗೆ ವಿವರವಾಗಿ ಚರ್ಚಿಸಿದರು.ಈ ಸಲ ಸುರಿದ ಮಳೆಯಿಂದಾಗಿ ಅಪಾರ ನಷ್ಟವುಂಟಾಗಿದೆ ಹಲವು ರಸ್ತೆಗಳು ಕೊಚ್ಚಿಕೊಂಡು ಹೋಗಿವೆ. ರೈತರು ಬೆಳೆದ ಬೆಳೆಗಳು ನಾಶವಾಗಿವೆ.ಗ್ರಾಮೀಣ ಪ್ರದೇಶದಲ್ಲಿ ಜನರ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಕೂಡಲೇ ಸರ್ಕಾರ ನೆರವಿಗೆ ಧಾವಿಸಬೇಕು ಕನಿಷ್ಠ 100ಕೋಟಿ ಆದರೂ ರಸ್ತೆ ಕಾಮಗಾರಿಗಳಿಗೆ ಪರಿಹಾರ ನಿಧಿಗೆ ಒದಗಿಸಬೇಕು. ಎಂದು ಮನವಿ ಮಾಡಿದರು. ಹಾಗೆ ಇದೆ ಸಂದರ್ಭದಲ್ಲಿ ಎನ್ ಡಿ ಎಪ್ ಆರ್ ನಿಬಂಧನೆ ಪ್ರಕಾರ ಪರಿಹಾರ ನೀಡಿದರೆ ರೈತರಿಗೆ ಸಾಕಾಗುವುದಿಲ್ಲ. ಹಾಗಾಗಿ ಮಲೆನಾಡಿನ ರೈತರಿಗೆ ನಿಯಮಗಳನ್ನು ಸಡಿಲಗೊಳಿಸಿ ಪರಿಹಾರ ನೀಡಬೇಕು.ಎಂದು ಮನವಿ ಮಾಡಿದರು. ಇದಕ್ಕೆ ಸೂಕ್ತವಾಗಿ ಸ್ಪಂದಿಸಿದ ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿ ಇದಕ್ಕೆ ಸಂಬಂಧಪಟ್ಟಂತೆ ಸೂಕ್ತ ಪರಿಹಾರ ನೀಡಲಾಗುವುದು. ಹಾಗೆ ಅವಶ್ಯವಿದ್ದಲ್ಲಿ ತಾನೇ ಖುದ್ದು ಮಲ್ನಾಡು ಭಾಗಕ್ಕೆ ಬಂದು ಪರಿಶೀಲನೆ ನಡೆಸುವುದಾಗಿ ಶಾಸಕರಿಗೆ ಬರವಸೆ ನೀಡಿದ್ದಾರೆ. ಎಂದು ಶಾಸಕರು ಪತ್ರಿಕೆಗೆ ಮಾಹಿತಿ ನೀಡಿದ್ದಾರೆ…
ವರದಿ …ರಘುರಾಜ್ ಹೆಚ್. ಕೆ…
ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ….9449553305…